ಮಾಜಿ NSE CEO ಚಿತ್ರಾ ರಾಮಕೃಷ್ಣ ಬಂಧನ!

ceo

ಹೊಸದಿಲ್ಲಿ : ರಾಷ್ಟ್ರೀಯ ಷೇರು ಮಾರುಕಟ್ಟೆ (NSE)ಯ ಮಾಜಿ CEO ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಭಾನುವಾರ ತಡರಾತ್ರಿ ದೆಹಲಿಯಲ್ಲಿ ಬಂಧಿಸಿತ್ತು. ಒಂದು ಕಾಲದಲ್ಲಿ ಷೇರು ಮಾರುಕಟ್ಟೆಯ ರಾಣಿಯಂತೆ ಮೆರೆದ ಚಿತ್ರಾ ಬಂಧನಕ್ಕೆ ಒಳಗಾಗಿರುವುದು ಎಲ್ಲರಲ್ಲು ಆಶ್ಚರ್ಯ ಹುಟ್ಟಿಸಿದೆ.

ಚಿತ್ರಾರವರ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ನಂತರ ಅವರನ್ನು ಸಿಬಿಐ ಪ್ರಧಾನ ಕಚೇರಿಯ ಲಾಕಪ್‌ನಲ್ಲಿ ಇರಿಸಲಾಗಿತ್ತು.

ತನಿಖಾ ಸಂಸ್ಥೆಯು ಸತತ ಮೂರು ದಿನಗಳ ಕಾಲ ಚಿತ್ರಾ ಅವರನ್ನು ವಿಚಾರಣೆ ಮಾಡಿದೆ. ಅವರ ನಿವಾಸದಲ್ಲಿ ಶೋಧ ನಡೆಸಲಾಗಿದ್ದು, ಸಿಬಿಐ ಪ್ರಶ್ನೆಗಳಿಗೆ ಚಿತ್ರಾ ಅವರು ಸರಿಯಾಗಿ ಪ್ರತಿಕ್ರಿಯಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿತ್ರಾ ರಾಮಕೃಷ್ಣ ಅವರಿಗೆ ಜಾಮೀನು ನೀಡಲು ನಿರಾಕರಿಸಿದ ನ್ಯಾಯಾಲಯ. ಚಿತ್ರಾ ರಾಮಕೃಷ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಿಬಿಐ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಇದೀಗ ನ್ಯಾಯಾಲಯ ಚಿತ್ರಾ ರಾಮಕೃಷ್ಣ ರವರಿಗೆ ಜಾಮೀನು ನೀಡಲು ನಿರಾಕರಿಸಿದೆ! ಎನ್‌ಎಸ್‌ಇ ಕೋ-ಲೊಕೇಷನ್‌ ಪ್ರಕರಣದಲ್ಲಿ ಆಕೆಯ ಜಾಮೀನಿಗೆ ಕೇಂದ್ರ ತನಿಖಾ ಸಂಸ್ಥೆ ವಿರೋಧ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ಈಗಾಗಲೇ ಪ್ರಕರಣ ಸಂಬಂಧ ಸಿಬಿಐ ಎನ್‌ಎಸ್‌ಇಯ ಮಾಜಿ ಗ್ರೂಪ್ ಆಪರೇಟಿಂಗ್ ಆಫೀಸರ್ ಆನಂದ್ ಸುಬ್ರಮಣಿಯನ್ ಅವರನ್ನು ಕೆಲ ದಿನಗಳ ಹಿಂದೆ ಚೆನ್ನೈನಲ್ಲಿ ಬಂಧಿಸಲಾಗಿತ್ತು.

ಇನ್ನೊಂದು ವಿಷಯ ಏನ್ನಂದರೆ, 2018ರಲ್ಲಿ ಸಿಬಿಐ ದಾಖಲಿಸಿದ್ದ ಎಫ್‌ಐಆರ್‌ನಲ್ಲಿ ಚಿತ್ರಾ ರಾಮಕೃಷ್ಣ ಅವರ ಹೆಸರು ಇರಲಿಲ್ಲ. ಆದಾಗ್ಯೂ, ಎಫ್‌ಐಆರ್‌ನಲ್ಲಿ ಉಲ್ಲೇಖಿತವಾಗಿದ್ದ ಸಹ-ಆರೋಪಿಗಳ ಪೈಕಿ ಮುಂಬೈನ ಸೆಬಿ ಮತ್ತು ಎನ್‌ಎಸ್‌ಇನ ಅಪರಿಚಿತ ಅಧಿಕಾರಿಗಳು ಸೇರಿದ್ದರು. ಎಫ್‌ಐಆರ್‌ನಲ್ಲಿ ಚಿತ್ರ ಅವರ ವಿರುದ್ಧ ಕ್ರಿಮಿನಲ್ ಪಿತೂರಿ, ದಾಖಲೆಗಳ ನಾಶ ಅಥವಾ ಎಲೆಕ್ಟ್ರಾನಿಕ್ ದಾಖಲೆಯನ್ನು ಸಾಕ್ಷ್ಯವಾಗಿ ಪರಿಗಣಿಸುವುದನ್ನು ತಡೆಯುವ ಯತ್ನದ ಆರೋಪವನ್ನು ಹೊರಿಸಲಾಗಿತ್ತು. ಇತರ ಆರೋಪಗಳಲ್ಲಿ, ಭ್ರಷ್ಟಾಚಾರ ತಡೆ ಕಾಯಿದೆ ಅಡಿಯಲ್ಲಿ ಲಂಚ ನೀಡುವ ಮತ್ತು ಸ್ವೀಕರಿಸುವ ಆರೋಪ, ಅಧಿಕಾರದ ದುರುಪಯೋಗ, ಸಾಕ್ಷ್ಯ ನಾಶದ ಆರೋಪಗಳೂ ಇದ್ದವು. ಇವೆಲ್ಲ ಅಲ್ಲದೆ
ಎಫ್‌ಐಆರ್‌ನಲ್ಲಿ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯನ್ನು ಸಹ ಉಲ್ಲೇಖಿಸಲಾಗಿತ್ತು.
Exit mobile version