Bengaluru : ರಾಜ್ಯದಲ್ಲಿ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಗಾಗಿ 10 ಕಾಲೇಜುಗಳನ್ನು ತೆರೆಯಲು ಕರ್ನಾಟಕ ಸರ್ಕಾರವು ವಕ್ಫ್ ಮಂಡಳಿಗೆ ಒಪ್ಪಿಗೆ ನೀಡಿದೆ ಎಂಬ ವರದಿಗಳನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (No Seperate Collages Says CM) ಅವರು,
ತಮ್ಮ ಆಡಳಿತದ ಯಾವುದೇ ಮಟ್ಟದಲ್ಲಿ ಅಂತಹ ಚರ್ಚೆಗಳು ನಡೆದಿಲ್ಲ. ಇದು ವಕ್ಫ್ ಮಂಡಳಿಯ (No Seperate Collages Says CM) ಅಧ್ಯಕ್ಷರ ವೈಯಕ್ತಿಕ ದೃಷ್ಟಿಕೋನವಾಗಿರಬಹುದು.
ಅದು ಸರ್ಕಾರದ ನಿಲುವು ಅಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. ಈ ಕುರಿತು ಸ್ಪಷ್ಟನೆ ನೀಡಿರುವ ಅವರು,
“ಇದು ವಕ್ಫ್ ಅಧ್ಯಕ್ಷ ವೈಯಕ್ತಿಕ ದೃಷ್ಟಿಕೋನವಾಗಿರಬಹುದು. ಈ ಕುರಿತು ನಮ್ಮ ಸರ್ಕಾರದ ಯಾವುದೇ ಭಾಗದಲ್ಲಿ ಚರ್ಚೆಯಾಗಿಲ್ಲ.
ಇದು ನನ್ನ ಸರ್ಕಾರದ ನಿಲುವು ಅಲ್ಲ. ಏನಾದರೂ ಇದ್ದರೆ, ನನ್ನ ಬಳಿ ಬಂದು ಮಾತನಾಡಿ’’ ಎಂದು ಪ್ರಶ್ನೆಯೊಂದಕ್ಕೆ ಸಿಎಂ ಬೊಮ್ಮಾಯಿ ಉತ್ತರಿಸಿದರು.
ಇದನ್ನೂ ಓದಿ : https://vijayatimes.com/onion-farmers-are-in-loss/
ಇದೇ ವೇಳೆ ಕರ್ನಾಟಕದ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಅವರು, “ಮುಸ್ಲಿಂ ಮಹಿಳೆಯರಿಗಾಗಿ ಪ್ರತ್ಯೇಕ ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ.
ಈ ಬಗ್ಗೆ ವಕ್ಫ್ ಮಂಡಳಿಯ ಅಧ್ಯಕ್ಷರ ಹೇಳಿಕೆ ವೈಯಕ್ತಿಕವಾಗಿದೆ.
ನಾನು ಈಗಾಗಲೇ ವಕ್ಫ್ ಮಂಡಳಿಯ ಅಧ್ಯಕ್ಷರೊಂದಿಗೆ ಮಾತನಾಡಿದ್ದೇನೆ.
ಉದ್ಭವಿಸಿರುವ ಊಹಾಪೋಹಗಳ ಬಗ್ಗೆ ಸ್ಪಷ್ಟೀಕರಣವನ್ನು ನೀಡುವಂತೆ ಅವರನ್ನು ಕೇಳಿದ್ದೇನೆ” ಎಂದು ತಿಳಿಸಿದ್ದಾರೆ.
ಇನ್ನು ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನಾ ಶಾಫ್ತಿ ಇತ್ತೀಚೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಲಾ ₹2.5 ಕೋಟಿ ವೆಚ್ಚದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ 10 ಕಾಲೇಜು ಆರಂಭಿಸಲು ನಿರ್ಧರಿಸಲಾಗಿದ್ದು, ಮುಖ್ಯಮಂತ್ರಿ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ತಾತ್ವಿಕ ಒಪ್ಪಿಗೆ ನೀಡಿದ್ದಾರೆ.
ಈ ಯೋಜನೆ ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕೋಡಿ, ನಿಪ್ಪಾಣಿ, ಕಲಬುರಗಿ, ಬಿಜಾಪುರ, ಬಾಗಲಕೋಟೆ ಸೇರಿದಂತೆ ರಾಜ್ಯದ ಇತರೆಡೆ ಹೊಸ ಕಾಲೇಜುಗಳನ್ನು ತೆರೆಯಲಾಗುವುದು ಎಂದು ಹೇಳಿದ್ದರು.
ಅವರ ಈ ಹೇಳಿಕೆಯ ನಂತರ ಬಲಪಂಥೀಯ ಗುಂಪುಗಳು ಪ್ರತ್ಯೇಕ ಕಾಲೇಜು ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು.
- ಮಹೇಶ್.ಪಿ.ಎಚ್