Bengaluru: ಕೋಳಿ ಸಾಕಾಣಿಕೆ ಮಾಡುವುದು ಕೃಷಿ ಚಟುವಟಿಕೆಯಾಗಿದ್ದು, ಇದನ್ನು ವಾಣಿಜ್ಯ ಚಟುವಟಿಕೆ (No tax on poultry transport) ಎಂದು ಪರಿಗಣಿಸಿ ಕರ್ನಾಟಕ ಗ್ರಾಮ ಸ್ವರಾಜ್
ಕಾಯ್ದೆಯಡಿ ಯಾವುದೇ ರೀತಿಯ ತೆರಿಗೆ ವಿಧಿಸಲು ಗ್ರಾಮ ಪಂಚಾಯಿತಿಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್ (High Court) ಸ್ಪಷ್ಟಪಡಿಸಿದೆ.

ಕೋಳಿ ಸಾಕಾಣಿಕೆ ಕೇಂದ್ರಕ್ಕೆ ತೆರಿಗೆ ವಿಧಿಸಿದ್ದ ಗ್ರಾಮ ಪಂಚಾಯತ್ ಕ್ರಮ ಪ್ರಶ್ನಿಸಿ ಬೆಂಗಳೂರು ಉತ್ತರ ತಾಲೂಕು ಸೋಂಡೆ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿ ಕೆ. ನರಸಿಂಹ ಮೂರ್ತಿ
(K.Narasimha Murthy) ಎಂಬುವವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸೂರಜ್ ಗೋವಿಂದ್ ರಾಜು (Suraj Govind Raju) ಅವರಿಂದ ನ್ಯಾಯಪೀಠವು ಈ ಆದೇಶ
ನೀಡಿದ್ದು, ಜೊತೆಗೆ ಕೋಳಿ ಸಾಗಾಣಿಕೆ ಮಾಡುವುದು (No tax on poultry transport) ಕೃಷಿ ಚಟುವಟಿಕೆಯಾಗಿದೆ.
ಕಟ್ಟಡ ನಿರ್ಮಾಣ ಸಲುವಾಗಿ ಕೃಷಿ ಭೂಮಿಯನ್ನು ವಾಣಿಜ್ಯ ಭೂಮಿಯನ್ನಾಗಿ ಪರಿವರ್ತನೆ ಮಾಡಿಸಿಕೊಳ್ಳಲು ಅಗತ್ಯವಿಲ್ಲ ಎಂದು ಇ .ಭಾಸ್ಕರ್ ರಾವ್ ಪ್ರಕರಣದಲ್ಲಿ ಹೈಕೋರ್ಟ್ ತಿಳಿಸಿದೆ.
ಕೋಳಿ ಸಾಕಾಣಿಕೆ ಕೇಂದ್ರಕ್ಕಾಗಿ ನಿರ್ಮಾಣ ಮಾಡುವ ಕಟ್ಟಡವನ್ನು ಕರ್ನಾಟಕ ಗ್ರಾಮ ಸ್ವರಾಜ್ ಕಾಯ್ದೆ-4ರ(ಎ) (2) ಅಡಿಯಲ್ಲಿ ವಾಣಿಜ್ಯ ಕಟ್ಟಡವನ್ನಾಗಿ ಪರಿಗಣಿಸಿ ತೆರಿಗೆ ವಿಧಿಸಲು ಅವಕಾಶವಿಲ್ಲ
ಕೋಳಿ ಸಾಗಾಣಿಕೆಗೆ ಕೇಂದ್ರವಿರುವ ಕೃಷಿ ಭೂಮಿಯಾಗಿಯೇ ಮುಂದುವರಿಯಲಿದ್ದು ಅದನ್ನು ವಾಣಿಜ್ಯ ಭೂಮಿಯನ್ನಾಗಿ ಪರಿಗಣಿಸಿ ತೆರಿಗೆ ವಿಧಿಸಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.
ಅರ್ಜಿದಾರರಿಗೆ ತೆರಿಗೆ ರೂಪದಲ್ಲಿ ಈಗಾಗಲೇ ಸಂಗ್ರಹಿಸಿರುವ 59,551 ರೂಪಾಯಿಗಳನ್ನು ಹಿಂದಿರುಗಿಸಬೇಕು ಎಂದು ನಿರ್ದೇಶನ ನೀಡಿದೆ ಎಷ್ಟೇ ಅಲ್ಲ ಗ್ರಾಮ ಪಂಚಾಯತ್ ಜಾರಿ ಮಾಡಿದ್ದ
ನೊಟೀಸ್ ಅನ್ನು ರದ್ದು ಪಡಿಸಿ ಆದೇಶಿಸಿದೆ . ಈ ಮನವಿ ಪರಿಗಣಿಸಿದ್ದ ಪಂಚಾಯಿತಿ ಅಧಿಕಾರಿಗಳು, ಕೋಳಿ ಸಾಕಾಣಿಕೆ ಕೇಂದ್ರವು ಕೈಗಾರಿಕೆಗಳ ಅಡಿಯಲ್ಲಿ ಬರಲಿದ್ದು, ಅದನ್ನು ನಿರಾಕ್ಷೇಪಣಾ
ಪತ್ರ ವಿತರಣೆ ಮಾಡುವುದಕ್ಕಾಗಿ 1.3 ಲಕ್ಷ ರೂಗಳನ್ನು ಪಾವತಿ ಮಾಡಲೇಬೇಕು ಎಂದು ಸೂಚನೆ ನೀಡಿ ನೊಟೀಸ್ (Notice) ನೀಡಿದ್ದು ಇದರಿಂದ ಅರ್ಜಿ ದಾರರ 59,551 ಪಾವತಿ ಮಾಡಿದ್ದರು

ನಂತರ ಹೈನುಗಾರಿಕೆ ಮತ್ತು ಕೋಳಿ ಸಾಕಾಣಿಕೆಗೆ ಕೃಷಿ ಚಟುವಟಿಕೆಗಳಾಗಿದ್ದು, ಇದಕ್ಕಾಗಿ ನಿರಾಕ್ಷೇಪಣಾ ಪತ್ರ ಪಡೆಯುವುದು ಹಾಗೂ ತೆರಿಗೆ ಪಾವತಿ ಮಾಡುವ ಅಗತ್ಯವಿಲ್ಲ. ಈ ರೀತಿ ತೆರಿಗೆ ವಿಧಿಸಲು
ಅವಕಾಶವಿಲ್ಲ ಎಂಬ ಅಂಶ ಮನಗಂಡು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದರು .
ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸರಕಾರದ ಪರ ವಕೀಲರು, ಕೋಳಿ ಸಾಕಾಣಿಕೆ ಮಾಡುವುದು ವಾಣಿಜ್ಯ ಚಟುವಟಿಕೆಯಾಗಿದ್ದು, ಕೋಳಿ ಸಾಕಾಣಿಕೆ ಕೇಂದ್ರದ ಕಟ್ಟಡಕ್ಕೆ ವಾಣಿಜ್ಯ ತೆರಿಗೆ ವಿಧಿಸಬಹುದಾಗಿದೆ
ಎಂದು ವಾದ ಮಂಡಿಸಿದ್ದರು ಈ ವಾದವನ್ನು ತಳ್ಳಿ ಹಾಕಿರುವ ಹೈಕೋರ್ಟ್ ಗ್ರಾಮ ಪಂಚಾಯತಿಯ ನೋಟಿಸ್ ಅನ್ನು ರದ್ದುಪಡಿಸಿದೆ.
ಇದನ್ನು ಓದಿ: ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್
- ಮೇಘಾ ಮನೋಹರ ಕಂಪು