ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯೇ ಇಲ್ಲ, ಇದು ಊಹಾಪೋಹದ ವರದಿ: ಸಿಎಂ ಸಿದ್ದರಾಮಯ್ಯ

Mysore: ಬೆಂಗಳೂರಿನಲ್ಲಿ (Bengaluru) ಕುಡಿಯುವ ನೀರಿನ ಸಮಸ್ಯೆಯೇ ಇಲ್ಲ. ಇದೊಂದು ಊಹಾಪೋಹದ ಸುದ್ದಿಯಾಗಿದ್ದು, ಕೆಲವೊಮ್ಮೆ ಈ ರೀತಿಯ ವರದಿಗಳನ್ನು ಉದ್ದೇಶಪೂರ್ವಕವಾಗಿ ಸುದ್ದಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ (Mysore) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆಯೇ ಇಲ್ಲ. ಇದೊಂದು ಊಹಾಪೋಹದ ಸುದ್ದಿಯಾಗಿದ್ದು, ಕೆಲವೊಮ್ಮೆ ಈ ರೀತಿಯ ವರದಿಗಳನ್ನು ಉದ್ದೇಶಪೂರ್ವಕವಾಗಿ ಸುದ್ದಿ ಮಾಡಲಾಗುತ್ತದೆ. ಇನ್ನು ಕುಡಿಯುವ ನೀರಿನ ಸಮಸ್ಯೆ (Water Problem) ಪರಿಹಾರಕ್ಕೆ ಯಾವುದೇ ಹಣದ ಸಮಸ್ಯೆ ಇಲ್ಲ. ಇದಕ್ಕಾಗಿ ಬೇಕಾದಷ್ಟು ಹಣ ನೀಡಲು ಸರ್ಕಾರ ಸಿದ್ದವಿದೆ.

ಬೆಂಗಳೂರಿನ ಒಂದೆರಡು ಭಾಗಗಳಲ್ಲಿ ಮಾತ್ರ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಅದನ್ನು ಶೀಘ್ರವೇ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಲೋಕಸಭಾ ಚುನಾವಣೆ (Loksabha Election) ಇರುವುದರಿಂದ ಅಧಿಕಾರಿಗಳೊಂದಿಗೆ ಸಭೆ ಮಾಡಲು ಆಗುತ್ತಿಲ್ಲ. ನಾನು ಮೌಖಿಲ ಸೂಚನೆ ನೀಡಿದ್ದು, ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳುತ್ತಿದ್ದಾರೆ ಎಂದರು.

ನನಗೆ ಶಕ್ತಿ ನೀಡಿ: ಮೈಸೂರು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳು ಮಾತ್ರವಲ್ಲದೇ ರಾಜ್ಯದ ಎಲ್ಲಾ 28 ಕ್ಷೇತ್ರಗಳ ವಿಚಾರದಲ್ಲೂ ನಾನು ಗಂಭೀರವಾಗಿದ್ದೇನೆ. ರಾಜ್ಯದ ಎಲ್ಲಾ ಕ್ಷೇತ್ರಗಳಿಗೂ ಭೇಟಿ ನೀಡಿ ಪ್ರಚಾರ ನಡೆಸುತ್ತೇನೆ. ಬಿಜೆಪಿ (BJP) ಅಧಿಕಾರಕ್ಕೆ ಬಂದರೇ ನಮ್ಮ ಸರ್ಕಾರ ಜಾರಿಗೆ ತಂದಿರುವ ಬಡವರ ಕಾರ್ಯಕ್ರಮಗಳು ನಿಂತು ಹೋಗುತ್ತವೆ. ಹೀಗಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಹೆಚ್ಚು ಮತಗಳ ಲೀಡ್ ಕೊಡಿ ಎಂದು ಮತದಾರರ ಬಳಿ ಕೇಳಿಕೊಂಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಇನ್ನು ನಾನು ಮುಂದಿನ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. ಜನರು ಪ್ರೀತಿಯಿಂದ ಸ್ಪರ್ಧೆ ಮಾಡಿ ಎಂದು ಕೇಳುತ್ತಾರೆ, ಆದರೆ ನಾನು ರಾಜಕೀಯ ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ. ಮುಂದಿನ 4ವರ್ಷಕ್ಕೆ ನನಗೆ 83 ವಯಸ್ಸು ಆಗುತ್ತದೆ. ಆಗ ಇಷ್ಟೊಂದು ಉತ್ಸಾಹದಲ್ಲಿ ಕೆಲಸ ಮಾಡಲು ಆಗುವುದಿಲ್ಲ. ನನ್ನ ದೇಹದ ಸ್ಥಿತಿ ನನಗೆ ಮಾತ್ರ ಗೊತ್ತಿರುತ್ತದೆ. ಹೀಗಾಗಿಯೇ ಚುನಾವಣಾ ರಾಜಕೀಯ ಸಾಕು ತೀರ್ಮಾನಿಸಿದ್ದೇನೆ ಎಂದು ಹೇಳಿದರು.

Exit mobile version