ಉತ್ತರ ರೈಲ್ವೆಯಲ್ಲಿ ವಿವಿಧ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

Job Opportunities in Northern Railway: ರೈಲ್ವೆ ನೇಮಕಾತಿ ಮಂಡಳಿಯು, ಕ್ರೀಡಾ ಕೋಟಾದಡಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ ಹುದ್ದೆಗೆ ಬೇಕಾದ ವಿದ್ಯಾರ್ಹತೆ, ಪ್ರಮುಖ ದಿನಾಂಕಗಳು ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

ನೇಮಕಾತಿ ಪ್ರಾಧಿಕಾರ: ಉತ್ತರ ರೈಲ್ವೆ ಮಂಡಳಿ
ಹುದ್ದೆ ಹೆಸರು: ಗ್ರೂಪ್ ಡಿ
ಒಟ್ಟು ಹುದ್ದೆಗಳ ಸಂಖ್ಯೆ : 38

ವಿದ್ಯಾರ್ಹತೆ : SSLC / ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ : ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು. ಯಾವುದೇ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗುವುದಿಲ್ಲ.

ಅರ್ಜಿ ಶುಲ್ಕ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : ರೂ.500.
SC / ST/ ಮಹಿಳಾ / OBC / ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ರೂ.250.

ಆಯ್ಕೆ ವಿಧಾನ: ಕ್ರೀಡಾ ಸಾಧನೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ರಾಜ್ಯ, ರಾಷ್ಟ್ರ, ವಿಶ್ವವಿದ್ಯಾಲಯಗಳು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಯಾವೆಲ್ಲ ಕ್ರೀಡೆಗಳಲ್ಲಿ ಸಾಧನೆ ಮಾಡಿದವರು ಅರ್ಜಿ ಸಲ್ಲಿಸಬೇಕು :
ತೂಕ ಎತ್ತುವಿಕೆ
ಪವರ್ಲಿಫ್ಟಿಂಗ್
ಕುಸ್ತಿ
ಶೂಟಿಂಗ್
ಕ್ರಿಕೆಟ್ (Cricket)
ಬಾಲ್ ಬ್ಯಾಡ್ಮಿಂಟನ್
ಕಬ್ಬಡಿ
ಹಾಕಿ
ಪವರ್ಲಿಫ್ಟಿಂಗ್
ಜಿಮ್ನಾಸ್ಟಿಕ್ (Gymnastic)

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 16-04-2024
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 16-05-2024

ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್ಸೈಟ್ ವಿಳಾಸ : https://rrcnr.net.in/

Exit mobile version