ರೈಲ್ವೆ ಇಲಾಖೆಯಲ್ಲಿ 3093 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ

ಉತ್ತರ ರೈಲ್ವೆಯ ವಲಯದಲ್ಲಿ ಖಾಲಿರುವ 3093 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ರೇಲ್ವೆ ನೇಮಕಾತಿ ಸೆಲ್ ಆರಂಭಿಸಿದೆ. ಐಟಿಐ ಹಾಗೂ 12 ನೇ ತರಗತಿ ಪೂರೈಸಿದ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rrcnr.org ಮೂಲಕ ಅರ್ಜಿ ಸಲ್ಲಿಸಬಹುದು.

ಅಪ್ರೆಂಟಿಸ್‌ಶಿಪ್ ನಿಯಮಗಳ ಪ್ರಕಾರ ಅಭ್ಯರ್ಥಿಗಳು 10+2 ವ್ಯವಸ್ಥೆಯ ಅಡಿಯಲ್ಲಿ 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಅದಕ್ಕೆ ಸಮನಾದ ಮತ್ತು ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ಟ್ರೇಡ್‌ಗಳಲ್ಲಿ ಐಟಿಐ ಕೋರ್ಸ್ ಉತ್ತೀರ್ಣರಾಗಿರಬೇಕು. ಅಕ್ಟೋಬರ್ 20, 2021 ಕ್ಕೆ ಅನ್ವಯವಾಗುವಂತೆ 15 ವರ್ಷ ಮೇಲಟ ಹಾಗೂ 24 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಮೆರಿಟ್ ಪಟ್ಟಿಯನ್ನು ಆಧರಿಸಿ ಆರ್‌ಆರ್‌ಸಿ ಎನ್‌ಆರ್‌ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಉತ್ತರ ರೈಲ್ವೆಯ ವಿವಿಧ ವಿಭಾಗಗಳು, ಘಟಕಗಳು ಮತ್ತು ಕಾರ್ಯಾಗಾರಗಳಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಈ ನೇಮಕಾತಿಯನ್ನು ಮಾಡಲಾಗುತ್ತದೆ.

ಅಭ್ಯರ್ಥಿಗಳ ಆಯ್ಕೆಗಾಗಿ ಅರ್ಜಿಯ ಸೀನಿಂಗ್ ಮತ್ತು ಪರಿಶೀಲನೆಯನ್ನು ನಡೆಸಲಾಗುತ್ತದೆ. ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ. ಅರ್ಜಿಗಳ ಪರಿಶೀಲನೆಯ ನಂತರ 10 ನೇ ತರಗತಿ ಮತ್ತು ಐಟಿಐ ಪ್ರಮಾಣಪತ್ರ ಕೋರ್ಸ್‌ಗಳಲ್ಲಿ ಅಭ್ಯರ್ಥಿಗಳ ಒಟ್ಟು ಅಂಕಗಳನ್ನು ಪರಿಗಣಿಸಿ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ.

ಅಭ್ಯರ್ಥಿಗಳು ಅರ್ಜಿ ಶುಲ್ಕ 100 ರೂ. ಗಳನ್ನು ಪಾವತಿಸಬೇಕು. ಎಸ್‌ಸಿ/ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ಮಿತಿಯನ್ನು ಕ್ರಮವಾಗಿ ಐದು ವರ್ಷ ಮತ್ತು ಮೂರು ವರ್ಷ ಸಡಿಲಿಸಲಾಗುತ್ತದೆ. ಅಭ್ಯರ್ಥಿಯು ಅಧಿಸೂಚನೆ ಹೊರಡಿಸಿರುವ ದಿನಾಂಕದೊಳಗೆ ನಿಗದಿತ ವಿದ್ಯಾರ್ಹತೆಯನ್ನು ಪಾಸಾಗಿರಬೇಕು. ಅಕ್ಟೋಬರ್ 20 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಿರುತ್ತದೆ.

Exit mobile version