Visit Channel

ಕಾಂಗ್ರೆಸ್ ರಾಜಕಾರಣ ನೀತಿಯ ಮೇಲೆ ಹೊರತು ಜಾತಿಯ ಮೇಲಲ್ಲ: ಡಿ.ಕೆ ಶಿವಕುಮಾರ್

dkshivakumar-696x464

ಬೆಳಗಾವಿ, ಏ. 08: ಕಾಂಗ್ರೆಸ್ ಪಕ್ಷ ಎಲ್ಲ ಸಮುದಾಯದವರನ್ನು ಅಣ್ಣ ತಮ್ಮಂದಿರಂತೆ ನೋಡಲಿದ್ದು, ಬಿಜೆಪಿ ಮಾತ್ರ ಎಲ್ಲರನ್ನು ಬೇರೆ ಮಾಡಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಎಂದಿಗೂ ನೀತಿಯ ಮೇಲೆ ರಾಜಕಾರಣ ಮಾಡಲಿದೆ ಹೊರತು ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ವಿಚಾರವಾಗಿ ನಾನು ನಮ್ಮ ನಾಯಕರ ಜತೆ ಚರ್ಚೆ ನಡೆಸುತ್ತಿದ್ದೇನೆ. ಬೆಳಗ್ಗೆ ರೈತ ಮುಖಂಡರಾದ ಬಾಬಾಗೌಡ ಪಾಟೀಲ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಎಲ್ಲ ಕಮ್ಯುನಿಷ್ಟ್ ನಾಯಕರ ಜತೆ, ಚಾಲಕರ ಸಂಘ, ಆಟೋ ಚಾಲಕರು, ನೇಕಾರರನ್ನು ಭೇಟಿ ಮಾಡಲಿದ್ದೇನೆ. ಧರ್ಮಪೀಠಗಳಿಗೆ ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಿದ್ದೇನೆ. ಅವರೆಲ್ಲ ಗೌರವದಿಂದ ನಮ್ಮ ಅಭ್ಯರ್ಥಿ ಬಗ್ಗೆ ಅನುಕಂಪ ಹೊಂದಿದ್ದಾರೆ.

ಈ ಸರ್ಕಾರಕ್ಕೆ ಒಂದು ಸಂದೇಶವನ್ನೂ ಕಳುಹಿಸಬೇಕಿದೆ. ನೂರಾರು ದಿನದಿಂದ ನಮ್ಮ ರೈತರು ಧರಣಿ ಮಾಡುತ್ತಿದ್ದರೂ ಅವರನ್ನು ಮಾತನಾಡಿಸಿಲ್ಲ. ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರೈತರಿದ್ದು, ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ತಮ್ಮ ಸ್ವಾಭಿಮಾನ ಉಳಿಸಿಕೊಳ್ಳಲು ಮತದಾರರು ನಮಗೆ ಮತ ಕೊಡಬೇಕು ಎಂದು ಕೇಳಿಕೊಳ್ಳುತ್ತೇನೆ ಎಂದರು.

ಲಿಂಗಾಯತರು, ಮರಾಠಿಗರು ನಮಗೆ ಅಣ್ಣತಮ್ಮಂದಿರು. ಅವರೆಲ್ಲ ನಮಗೆ ಒಂದೇ. ಎಲ್ಲ ಜನಾಂಗದವರೂ ಸೇರಿ ನಾವೆಲ್ಲರೂ ಒಂದು. ಬಿಜೆಪಿಯವರು ಬೇರೆ ಬೇರೆ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಿಗೆ ಮತದಾನ ಹಕ್ಕು ನೀಡಲಾಗಿದೆ.ಅವರೆಲ್ಲರೂ ಒಂದೇ. ನಾವು ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತೇವೆ ಎಂದು ತಿಳಿಸಿದರು.

ಸಾರಿಗೆ ನೌಕರರ ಮುಷ್ಕರ ವಿಚಾರವಾಗಿ ನಾವು ನೌಕರರಿಗೆ ಬೆಂಬಲ ನೀಡುತ್ತೇವೆ. ಸರ್ಕಾರ ಅವರೊಂದಿಗೆ ಕೂತು, ಅವರ ನೋವು ಕೇಳಿ, ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಬೇಕು. ಮುಷ್ಕರವನ್ನು ಹತ್ತಿಕುವ ಪ್ರಯತ್ನ ಮಾಡಬಾರದು. ಸರ್ಕಾರ ಅವರ ಮೇಲೆ ನಡೆಸುತ್ತಿರುವ ಧೋರಣೆ ಸರಿಯಲ್ಲ ಎಂದು ಟೀಕಿಸಿದರು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.