Bengaluru: ನಗರದಲ್ಲಿರುವ ಪಬ್, ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ (Restaurant) ಬಿಬಿಎಂಪಿಯ (BBMP) ಎಂಟು ವಲಯದ ಆರೋಗ್ಯಾಧಿಕಾರಿಗಳು ಭೇಟಿ ಕೊಟ್ಟಿದ್ದು, ಅಗ್ನಿ ಅವಘಡದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸಿದ್ದಾರೆ.
ಇತ್ತೀಚಿಗೆ ರಾಜಧಾನಿಯಲ್ಲಿ ಅಗ್ನಿ ದುರಂತದಂತಹ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಬಿಬಿಎಂಪಿ (BBMP) ಅಧಿಕಾರಿಗಳು ಅಲರ್ಟ್ ಆಗಿದ್ದು, ಬಿಬಿಎಂಪಿಯ ಆರೋಗ್ಯಾಧಿಕಾರಿಗಳು 12 ಪಬ್, ಬಾರ್ಗಳನ್ನು ಮುಚ್ಚಿಸಿದ್ದಾರೆ. ಇನ್ನು 86 ಬಾರ್, ಪಬ್ ಮತ್ತು ರೆಸ್ಟೋರೆಂಟ್ಗಳಿಗೆ ನೋಟಿಸ್ (Notice) ನೀಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 1,118 ಉದ್ದಿಮೆಗಳಿಗೆ ಪರವಾನಿಗೆ ನೀಡಲಾಗಿದ್ದು, ಈ ಪೈಕಿ 232 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 86 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. 12 ಉದ್ದಿಮೆಗಳನ್ನು ಬಂದ್ ಮಾಡಲಾಗಿದೆ.
ಏಳು ದಿನಗಳ ಸಮಯವನ್ನು ವಲಯ ಆರೋಗ್ಯಾಧಿಕಾರಿಗಳಿಗೆ ನೀಡಲಾಗಿದ್ದು, ಈ ಏಳು ದಿನದಲ್ಲಿ ಆಯಾ ಆಯಾ ವಲಯ ವ್ಯಾಪ್ತಿಯಲ್ಲಿ ಎಷ್ಟು ಪಬ್(Pub), ಬಾರ್ ಮತ್ತು ಸ್ಟೋರೆಂಟ್ಗಳಿವೆ, ಎಷ್ಟು ಪಬ್, ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಅಗ್ನಿ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ಎಲ್ಲಿ ತೊಂದರೆಗಳಿವೆ. ಇವುಗಳನ್ನು ನಡೆಸುವುದಕ್ಕೆ ಬಿಬಿಎಂಪಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳಿಂದ ಪರವಾನಗಿ ಪಡೆಯಲಾಗಿದೆಯೇ? ಎಷ್ಟು ಕಡೆ ಅನಧಿಕೃತವಾಗಿ ಮತ್ತು ಕಾನೂನು ಉಲ್ಲಂಘಿಸಿ ನಡೆಸಲಾಗುತ್ತಿದೆ ಎಂದು ಪರಿಶೀಲಿಸಲು ಸೂಚಿಸಲಾಗಿದೆ.
ವಲಯಗಳು ಒಟ್ಟು ಪರಿಶೀಲನೆ ನೋಟಿಸ್ ಬಂದ್
ದಕ್ಷಿಣ: 248 30 10 0
ಪಶ್ಚಿಮ 167 78 20 0
ಪೂರ್ವ 222 25 18 7
ರಾಜರಾಜೇಶ್ವರಿನಗರ 75 8 6 0
ದಾಸರಹಳ್ಳಿ 34 29 8 0
ಯಲಹಂಕ 110 18 0 0
ಮಹದೇವಪುರ 161 36 16 3
ಬೊಮ್ಮನಹಳ್ಳಿ 101 8 8 2
ಒಟ್ಟು 1118 232 86 12
ಅಧಿಕಾರಿಗಳು, ನಿರ್ಲಕ್ಷ್ಯ ವಹಿಸಿರುವ ಪಬ್, ಬಾರ್ ಮತ್ತು ರೆಸ್ಟೋರೆಂಟ್ಗಳ ವಿರುದ್ಧ ಕೈಗೊಂಡ ಕ್ರಮಗಳು ಏನು ಎಂಬುದರ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸೂಚನೆ ನೀಡಲಾಗಿದ್ದು, ಸಮರೋಪಾದಿಯಲ್ಲಿ ನಗರದಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಭವ್ಯಶ್ರೀ ಆರ್.ಜೆ