ಗೃಹಲಕ್ಷ್ಮಿ ಹಣಕ್ಕಾಗಿ ಹೈಕೋರ್ಟ್ (notice to hc regarding gruhalakshmi money) ಮೆಟ್ಟಿಲೇರಿದ ಮಹಿಳೆಯರು
ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಬಾಕಿ ಹಣ ಬಿಡುಗಡೆಗೆ ಸರ್ಕಾರಕ್ಕೆ ನೋಟಿಸ್ ಜಾರಿ
ಫಲಾನುಭವಿಗಳ ಖಾತೆಗೆ ಹಣ ಜಮೆಯಾಗದ ಹಿನ್ನೆಲೆ ಅರ್ಜಿ ವಿಚಾರಣೆ
Bengaluru : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಹಲವು (notice to hc regarding gruhalakshmi money) ತಿಂಗಳುಗಳಿಂದ ಬಾಕಿ ಉಳಿದಿರುವ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಇಬ್ಬರು ಮಹಿಳೆಯರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್ (High Court) , ರಾಜ್ಯ ಸರ್ಕಾರಕ್ಕೆ ನೋಟಿಸ್ (Notice) ಜಾರಿ ಮಾಡಿ ಸ್ಪಷ್ಟನೆ ಕೇಳಿರುವುದು ಇದೀಗ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೇ ಪ್ರಮುಖವಾದ ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಆರಂಭಗೊಂಡಿದ್ದರೂ, ಹಣ ಬಿಡುಗಡೆ ವಿಳಂಬವಾಗುತ್ತಿರುವ ಬಗ್ಗೆ ಫಲಾನುಭವಿಗಳ ಅಸಮಾಧಾನ ಹೆಚ್ಚಾಗಿದೆ.

ಬೆಂಗಳೂರಿನ ಬಸವೇಶ್ವರನಗರದ ಆರ್. ಗಂಗಾ ಹಾಗೂ ನಂದಿನಿ ಲೇಔಟ್‌ನ ಜಿ.ಡಿ. ಪವಿತ್ರಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಇನ್ನೂ ಖಾತೆಗೆ ಜಮೆಯಾಗಿಲ್ಲ ಎಂದು ದೂರಿದ್ದಾರೆ.
ಯೋಜನೆ ಆರಂಭವಾದಾಗಿನಿಂದ ಮಹಿಳೆಯರಿಗೆ ಮಾಸಿಕ 2 ಸಾವಿರ ರೂಪಾಯಿ ನೀಡಲಾಗುತ್ತಿದ್ದು, ಅನೇಕ ಕುಟುಂಬಗಳಿಗೆ ಇದು ಆರ್ಥಿಕ ನೆರವಾಗಿತ್ತು. ಆದರೆ
ಇತ್ತೀಚಿನ ತಿಂಗಳುಗಳಲ್ಲಿ ಹಣ ಪಾವತಿಯಲ್ಲಿ ಆಗಿರುವ ವ್ಯತ್ಯಯದಿಂದ ದಿನನಿತ್ಯದ ಖರ್ಚು ನಿರ್ವಹಣೆಯಲ್ಲೇ ಸಂಕಷ್ಟ ಎದುರಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ.
ಸರ್ಕಾರ ಬಜೆಟ್‌ನಲ್ಲಿ ಸಾವಿರಾರು ಕೋಟಿ ರೂಪಾಯಿ ಮೀಸಲಿಟ್ಟಿದ್ದರೂ, ಫಲಾನುಭವಿಗಳ (notice to hc regarding gruhalakshmi money) ಖಾತೆಗೆ ಹಣ ತಲುಪದಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ವಕೀಲರು ನ್ಯಾಯಾಲಯದ ಗಮನ ಸೆಳೆದಿದ್ದಾರೆ.
ಅರ್ಜಿಯಲ್ಲಿ ಯೋಜನೆಯ ಹಿನ್ನೆಲೆಯನ್ನೂ ವಿವರಿಸಲಾಗಿದೆ. 2023ರ ಮೇ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದ್ದು, ಜೂನ್‌ನಲ್ಲಿ ಅಧಿಕೃತ ಆದೇಶ ಹೊರಡಿಸಲಾಗಿತ್ತು. ಬಳಿಕ ಆಗಸ್ಟ್ ತಿಂಗಳಿಂದ ಹಣ ಬಿಡುಗಡೆ ಪ್ರಾರಂಭವಾಗಿತ್ತು.
ಲಕ್ಷಾಂತರ ಮಹಿಳೆಯರು ಈ ಯೋಜನೆಗೆ ನೋಂದಾಯಿಸಿಕೊಂಡಿದ್ದು, ಆರಂಭಿಕ ಹಂತದಲ್ಲಿ ಹಣ ಪಾವತಿ ಸರಾಗವಾಗಿಯೇ ನಡೆದಿತ್ತು.
ಆದರೆ ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬದಲು ತಾಲೂಕು ಪಂಚಾಯಿತಿಗಳ ಮೂಲಕ ಹಣ ವರ್ಗಾವಣೆ ಮಾಡುವ ನಿರ್ಧಾರ ಕೈಗೊಂಡ ಬಳಿಕ ಪಾವತಿಯಲ್ಲಿ ವಿಳಂಬ ಉಂಟಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಹಣ ಮೀಸಲಿದ್ದರೂ ಅದು ಸರಿಯಾದ ಸಮಯಕ್ಕೆ ಜನರಿಗೆ ತಲುಪದಿರುವುದು ಸರ್ಕಾರದ ಆಡಳಿತ ವೈಫಲ್ಯವೆಂಬ ಆರೋಪವೂ ಕೇಳಿಬಂದಿದೆ.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರಜ್ ಗೋವಿಂದರಾಜ್ (Suraj Govindaraj) ಮತ್ತು ಡಾ. ಕೆ. ಮನ್ಮಥ ರಾವ್ (Dr. K. Manmatha Rao) ಅವರ
ವಿಭಾಗೀಯ ಪೀಠವು ರಾಜ್ಯ ಹಣಕಾಸು ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.
ಯೋಜನೆಯ ಹಣ ಬಿಡುಗಡೆ ಯಾಕೆ ವಿಳಂಬವಾಗುತ್ತಿದೆ ಹಾಗೂ ಸರ್ಕಾರದ ನಿಲುವೇನು ಎಂಬುದನ್ನು ಸ್ಪಷ್ಟಪಡಿಸಲು ಸೂಚಿಸಲಾಗಿದೆ.
ಈ ಬೆಳವಣಿಗೆ ಗೃಹಲಕ್ಷ್ಮಿ ಯೋಜನೆಯ ಭವಿಷ್ಯ ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಹೊಸ ಚರ್ಚೆಗೆ ಕಾರಣವಾಗಿದೆ.
ಮಹಿಳೆಯರ ಬದುಕಿಗೆ ನೆರವಾಗಬೇಕಿದ್ದ ಯೋಜನೆ ವಿಳಂಬದಿಂದ ಸಂಕಷ್ಟದ ರೂಪ ತಾಳಬಾರದು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.
ಇದನ್ನು ಓದಿ : https://vijayatimes.com/cockroach-janata-party-viral/