- ಯತ್ನಾಳ್, ವಿಜಯೇಂದ್ರ (Yatnal, Vijayendra) ಬಣಕ್ಕೆ BJP ಹೈಕಮಾಂಡ್ ಶಾಕ್
- ಬಣ ರಾಜಕೀಯಕ್ಕೆ (Politics) ಖಡಕ್ ಸಂದೇಶ
- 72 ಗಂಟೆಗಳಲ್ಲಿ (Notices for BJP ex and present MLA) ಉತ್ತರಿಸುವಂತೆ ಸೂಚನೆ
Bengaluru: ಕಳೆದ ಕೆಲ ದಿನಗಳಿಂದ ಬಣ ರಾಜಕೀಯ (Faction politics) ಮತ್ತು ಆಂತರಿಕ ಕಚ್ಚಾಟದಿಂದ (Internal strife) ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕರ್ನಾಟಕ ಬಿಜೆಪಿ ನಾಯಕರಿಗೆ (Karnataka BJP leaders) ಕಮಲ ಪಡೆಯ ಹೈಕಮಾಂಡ್ ಶಾಕ್ (High Command Shock) ನೀಡಿದ್ದು, 3 ಶಾಸಕರು, ಇಬ್ಬರು ಮಾಜಿ ಸಚಿವರಿಗೆ ಶೋಕಾಸ್ (Former minister) ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಬಿಜೆಪಿಯಲ್ಲಿ (Karnataka BJP ) ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಹೈಕಮಾಂಡ್ ಮುಂದಾಗಿದೆ.
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ (Basanagowda Patil Yatnal) ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ (Show cause notice) ನೀಡಿತ್ತು.ಇದರ ಬೆನ್ನಲ್ಲೇ ಇದೀಗ ಮೂವರು ಶಾಸಕರು ಹಾಗೂ ಇಬ್ಬರು ಮಾಜಿ ಸಚಿವರಿಗೆ (ex-minister) ಶೋಕಾಸ್ ನೋಟಿಸ್ ನೀಡಿದೆ. 72 ಗಂಟೆಗಳಲ್ಲಿ ಉತ್ತರಿಸುವಂತೆ ಸೂಚಿಸಲಾಗಿದೆ.
ಪಕ್ಷದ ಆಂತರಿಕ ವಿಚಾರ ಸಾರ್ವಜನಿಕ (Matter is public) ವೇದಿಕೆಯಲ್ಲಿ ಚರ್ಚೆ ಮಾಡಿದ ಆರೋಪದ ಮೇಲೆ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ಹಾಗೂ ಬಿ.ಪಿ.ಹರೀಶ್ (S.T. Somashekar, Shivarama Hebbar and B.P. Harish) ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ಇದರ ಜೊತೆಗೆ ಯಡಿಯೂರಪ್ಪನವರ (Yediyurappa’s) ಆಪ್ತರಾದ ಮಾಜಿ ಸಚಿವರಾದ ರೇಣುಕಾಚಾರ್ಯ (Renukacharya) ಮತ್ತು ಕಟ್ಟಾ ಸುಬ್ರಹ್ಮಣ್ಯ ನಾಯ್ಡು (Katta Subrahmanya Naidu) ಅವರಿಗೂ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಇಂದು ಶೋಕಾಸ್ ನೋಟಿಸ್ (Show cause notice) ಬಂದಿರುವ ಶಾಸಕ ಬಿ.ಪಿ ಹರೀಶ್ ಅವರು ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿದ್ದರೆ, ಮಾಜಿ ಸಚಿವರಾದ ಎಂಪಿ ರೇಣುಕಾಚಾರ್ಯ (MP Renukacharya) ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿಜಯೇಂದ್ರ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ರೇಣುಕಾಚಾರ್ಯ ಹಾಗೂ ಸುಬ್ರಹ್ಮಣ್ಯ ನಾಯ್ಡು ಸೇರಿಕೊಂಡು ಯತ್ನಾಳ್ಗೆ ಟಾಂಗ್ ಕೊಡಲು ಸಭೆ ಮೇಲೆ ಸಭೆ ಮಾಡಿದ್ದರು.
ಅಲ್ಲದೇ ಬೃಹತ್ ಸಮಾವೇಶ ಮಾಡುವ ಮೂಲಕ ಪರೋಕ್ಷವಾಗಿ ಯತ್ನಾಳ್ (Yathnal) ಹಾಗೂ ಹೈಕಮಾಂಡ್ಗೆ ವಿಜಯೇಂದ್ರ (Vijayendra) ಮತ್ತು ಯಡಿಯೂರಪ್ಪನವರ (Yediyurappa’s) ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದರ ನಡುವೆಯೇ ಬಿಜೆಪಿ ಕೇಂದ್ರೀಯ (BJP ) ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.ಅಂತೆಯೇ ಎಸ್ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ರೆಬೆಲ್ ಶಾಸಕರಾಗಿದ್ದು, ಇವರು ಪಕ್ಷದ ಕಾರ್ಯಚಟುವಟಿಕೆಗಳಿಂದ (Party activities) ದೂರು ಉಳಿದಿದ್ದಾರೆ.
ಇದನ್ನು ಓದಿ : http://ಹನಿಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇಸ್..!
ಅಲ್ಲದೇ ಬಹಿರಂಗವಾಗಿಯೇ ಕಾಂಗ್ರೆಸ್ ನಾಯಕರ (Congress leaders) ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೀಗಾಗಿ ಇವರುಗಳಿಗೆ ಬಿಜೆಪಿ ಕೇಂದ್ರೀಯ (Notices for BJP ex and present MLA) ಶಿಸ್ತು ಸಮಿತಿ ಶೋಕಾಸ್ ನೋಟಿಸ್ (Committee Show Cause Notice) ನೀಡಿದ್ದು, 72 ಗಂಟೆಗಳಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಲಾಗಿದೆ.