Bangalore : 224 ವಿಧಾನಸಭಾ ಕ್ಷೇತ್ರದ ಚುನಾವಣೆಗೆ ದಿನಾಂಕ ನಿಗದಿಯಾಗಿದೆ ,ಮೇ 10 ಕ್ಕೆ ಮತದಾನ ಮತ್ತು ಮೇ 13 ಕ್ಕೆ ಫಲಿತಾಂಶ ಹೊರ ಬೀಳಲಿದೆ. 224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ನಡೆಯಲಿದೆ (Notification of Election Commission) ಎಂದು ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ಕರ್ನಾಟಕ ರಾಜ್ಯ (karnataka) ವಿಧಾನಸಭಾ ಚುನಾವಣೆಗೆ (Assembly election) ಕ್ಷಣಗಣನೆ ಶುರುವಾಗಿದ್ದು, ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಿದೆ.
ಇನ್ನು ಏಪ್ರಿಲ್ 13 ರಂದು ಚುನಾವಣಾ ಆಯೋಗದ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ.
ಏಪ್ರಿಲ್ 21 ರಂದು ನಾಮ ಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ರಂದು ನಾಮಪತ್ರ ಹಿಂಪಡೆಯಲು ಕೊನೆಯ (Notification of Election Commission) ದಿನವಾಗಿರಲಿದೆ.
ರಾಜ್ಯದಲ್ಲಿ ಒಟ್ಟು ಮತದಾರರು ಎಷ್ಟು? ರಾಜ್ಯದಲ್ಲಿ 5,21,73,579 ಜನ ಮತದಾರರಿದ್ದಾರೆ. 2,62,42,561 ಜನ ಪುರುಷ ಮತದಾರರು ಹಾಗೂ 2,59,26,319 ಮಹಿಳಾ ಮತದಾರರಿದ್ದಾರೆ.
80 ವರ್ಷ ಮೇಲ್ಪಟ್ಟವರು 12,15,763 ಜನ ಇದ್ದಾರೆ.
ಇದನ್ನೂ ಓದಿ : https://vijayatimes.com/dk-sivakumar-threw-notes/
100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. 9,17,241 ಮಂದಿ ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 4,699 ತೃತೀಯ ಲಿಂಗಿ ಮತದಾರರಿದ್ದಾರೆ.
17 ವರ್ಷ ಮೇಲ್ಪಟ್ಟವರು 1,25,406 ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಇತ್ತೀಚೆಗೆ ರಾಜ್ಯ ವಿಧಾನಸಭೆ ಚುನಾವಣೆಯ ಸಿದ್ಧತೆ ಪರಿಶೀಲನೆಗಾಗಿ
ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (Central Election Commissioner Rajeev Kumar) ಅವರು ಮಾಹಿತಿ ನೀಡಿದರು.
ಇದನ್ನೂ ಓದಿ : https://vijayatimes.com/new-rule-from-bangalore-society/
ಒಟ್ಟು ಮತಗಟ್ಟೆಗಳೆಷ್ಟು ?
ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳು ಇರಲಿವೆ. ಒಂದು ಮತಗಟ್ಟೆಯಲ್ಲಿ 883 ಜನ ಮತ ಹಾಕಬಹುದಾಗಿದೆ.
ನಗರ ಪ್ರದೇಶಗಳಲ್ಲಿ 24,063 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 34,219 ಮತಗಟ್ಟೆಗಳು ಇರಲಿವೆ.
ಹಾಗೇ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳು ಇರಲಿದೆ ಮತ್ತು ವ್ಹೀಲ್ ಚೇರ್ ವ್ಯವಸ್ಥೆ ಕೂಡ ಮಾಡಲಾಗುವುದು.
ಮನೆಯಿಂದಲೇ ಮತದಾನ ಮಾಡಲು ಅವಕಾಶವಿದೆ:
ವಿಕಲಚೇತನರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಕರ್ನಾಟಕದಲ್ಲಿ ಇದೆ ಮೊದಲ ಬಾರಿಗೆ ಅವಕಾಶ ನೀಡಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ .
ಬೆಂಗಳೂರಿನಲ್ಲಿ ಕಳೆದ ಬಾರಿ ಅತೀ ಕಡಿಮೆ ಮತದಾನವಾಗಿದ್ದು ,ಈ ಬಾರಿ ಯುವಕರನ್ನು ಸೆಳೆಯಲು ವಿವಿಗಳ ಬಳಕೆ ಮಾಡಲಾಗುತ್ತಿದೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲು ಉತ್ತೇಜನ ನೀಡಲಾಗತ್ತಿದೆ.