Visit Channel

ನೊವಾಕ್‌ ಜೊಕೊವಿಕ್‌ ಅವರನ್ನು ನಿರ್ಬಂಧಿಸಿದ ಆಸ್ಟ್ರೇಲಿಯಾ

ಮೆಲ್ಬೋರ್ನ್ ಜ 6 :   ಖ್ಯಾಟ ಟೆನ್ನಿಸ್‌ ತಾರೆ ನೊವಾಕ್‌ ಜೊಕೊವಿಕ್‌ ಅವರಿಗೆ ಆಸ್ಟ್ರೇಲಿಯಾ ಪ್ರವೇಶಿಸುವುದಕ್ಕೆ ನಿರ್ಬಂಧ ಹೇರಲಾಗಿದೆ., ಅವರ ವೀಸಾವನ್ನು ರದ್ದುಗೊಳಿಸಲಾಗಿದೆ. ನೊವಾಕ್ ಜೊಕೊವಿಕ್‌ ಆಸ್ಟ್ರೇಲಿಯನ್ ಗ್ರ್ಯಾಂಡ್ ಸ್ಲ್ಯಾಮ್​ನಲ್ಲಿ ಪಾಲ್ಗೊಳ್ಳಲು ಮೆಲ್ಬೋರ್ನ್‌ಗೆ ಆಗಮಿಸಿದ ನಂತರ ಅವರಿಗೆ ನಿರ್ಬಂಧ ಹೇರಲಾಗಿದೆ.

ಆಸ್ಟ್ರೇಲಿಯನ್ ಬಾರ್ಡರ್ ಫೋರ್ಸ್ ಗುರುವಾರ ಮುಂಜಾನೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಜೊಕೊವಿಕ್ ಸೂಕ್ತ ದಾಖಲೆಗಳನ್ನು ಒದಗಿಸಲು ವಿಫಲರಾಗಿರುವ ಕಾರಣದಿಂದ ವೀಸಾವನ್ನು ರದ್ದುಗೊಳಿಸಲಾಗಿದೆ ಎಂದು ಸ್ಪಷ್ಟನೆ ನೀಡಿದೆ. ಆಸ್ಟ್ರೇಲಿಯಾಗೆ ತೆರಳುವ ಮೊದಲು ವ್ಯಾಕ್ಸಿನೇಷನ್ ನಿಯಮಗಳಿಂದ ವಿನಾಯಿತಿ ದೊರೆತಿದೆ ಎಂದಿದ್ದ ನೊವಾಕ್ ಜೊಕೊವಿಕ್ ಅವರು ಬುಧವಾರ ಸಂಜೆ ಮೆಲ್ಬೋರ್ನ್​ನಲ್ಲಿ ಬಂದಿಳಿದ ನಂತರ ಅವರು ಸೂಕ್ತ ಪುರಾವೆ ಒದಗಿಸಲು ವಿಫಲರಾಗಿದ್ದಾರೆ ಎಂಬ ಆರೋಪ ಮೇಲೆ ವೀಸಾವನ್ನು ರದ್ದುಗೊಳಿಸಿ, ಆಸ್ಟ್ರೇಲಿಯಾದೊಳಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಜೊಕೊವಿಕ್ ತಪ್ಪು ರೀತಿಯ ವೀಸಾಕ್ಕಾಗಿ ಅರ್ಜಿ ಸಲ್ಲಿಸಿದೆ ಎಂದು ಆಸ್ಟ್ರೇಲಿಯಾದ ಮಾಧ್ಯಮಗಳು ವರದಿ ಮಾಡಿವೆ. ಸರ್ಬಿಯಾದ ಅಧ್ಯಕ್ಷರು ಇದನ್ನು ಕಿರುಕುಳ ಎಂದು ಆರೋಪಿಸಿದ್ದು, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ನಿಯಮಗಳು ಎಲ್ಲರಿಗೂ ಒಂದೇ ಎಂದು ಮಾಹಿತಿ ನೀಡಿದ್ದಾರೆ

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.