New Delhi: ಕಾಂಗ್ರೆಸ್ (Congress) ಪಕ್ಷದ ಭದ್ರಕೋಟೆ ಎಂದೇ ಖ್ಯಾತಿ ಗಳಿಸಿರುವ ಉತ್ತರಪ್ರದೇಶದ ರಾಯ್ಬರೇಲಿ ಲೋಕಸಭಾ ಕ್ಷೇತ್ರದಿಂದ ನೂಪೂರ್ ಶರ್ಮಾ (Nupur Sharma) ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಈ ಕುರಿತು ಬಿಜೆಪಿ ಹೈಕಮಾಂಡ್ (BJP Highcommand) ಗಂಭೀರ ಚರ್ಚೆ ನಡೆಸಿದೆ.
ಉತ್ತರ ಪ್ರದೇಶ ರಾಯ್ಬರೇಲಿ ಲೋಕಸಭಾ ಕ್ಷೇತ್ರ ಜವಾಹರಲಾಲ್ ನೆಹರೂ (Jawaharlal Nehru) ಅವರ ಕಾಲದಿಂದಲೂ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದು, ಗಾಂಧಿ ಕುಟುಂಬದ ಅಭ್ಯರ್ಥಿಗಳು ಇಲ್ಲಿಂದಲೇ ಸ್ಪರ್ಧಿಸಿ ದೆಹಲಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ರಾಜೀವ್ ಗಾಂಧಿ ಅವರ ನಂತರ ಈ ಕ್ಷೇತ್ರದಿಂದ ಸತತವಾಗಿ ಸೋನಿಯಾ ಗಾಂಧಿ ಅವರು ಸ್ಪರ್ಧಿಸುತ್ತಿದ್ದರು. ಆದರೆ ಆರೋಗ್ಯ ಸಮಸ್ಯೆಯ ಕಾರಣದಿಂದ ಈ ಬಾರಿ ಈ ಬಾರಿ ಸೋನಿಯಾ ಗಾಂಧಿ (Sonia Gandhi) ಅವರು ಸ್ಪರ್ಧಿಸುತ್ತಿಲ್ಲ. ಹೀಗಾಗಿ ಈ ಕ್ಷೇತ್ರದಿಂದ ಪ್ರಿಯಾಂಕಾ ವಾದ್ರಾ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಬಿಜೆಪಿ ಕೂಡಾ ಮಹಿಳಾ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಸಿದ್ದತೆ ನಡೆಸಿದೆ.
ಯಾರು ಈ ನೂಪೂರ್ ಶರ್ಮಾ..?
ಈ ಪ್ರವಾದಿ ಮೊಹಮ್ಮದರ ಬಗ್ಗೆ ವಿವಾದಿತ ಹೇಳಿಕೆ ನೀಡಿ ದೇಶಾದ್ಯಂತ ಬಾರಿ ವಿವಾದ ಸೃಷ್ಟಿಸಿದ್ದರು ನೂಪೂರ್ ಶರ್ಮಾ. ನಂತರ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಇದೀಗ ಹಿಂದೂ ಫೈರ್ ಬ್ರಾಂಡ್ ಎಂದೇ ಖ್ಯಾತಿ ಗಳಿಸಿರುವ ನೂಪುರ್ ಶರ್ಮಾ ಅವರನ್ನು ಉತ್ತರ ಪ್ರದೇಶದ ರಾಯ್ಬರೇಲಿಯಿಂದ ಕಣಕ್ಕಿಳಿಸಲು ಬಿಜೆಪಿ (BJP) ಮುಂದಾಗಿದೆ ಎಂದು ವರದಿಯಾಗಿದೆ. ನೂಪುರ್ಶರ್ಮಾ ಅವರು ಈ ಹಿಂದೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಅರವಿಂದ್ ಕೇಜ್ರವಾಲ್ (Aravind Kejriwal) ವಿರುದ್ದ ಸೋಲುಂಡಿದ್ದರು.
ರಾಯ್ಬರೇಲಿ ಲೋಕಸಭಾ ಕ್ಷೇತ್ರ ಕೈ ಭದ್ರಕೋಟೆ:
ಉತ್ತರಪ್ರದೇಶದ ರಾಯ್ಬರೇಲಿ ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಅವರು ಮೂರು ಬಾರಿ ಸ್ಪರ್ಧಿಸಿ ಗೆದ್ದಿದ್ದರು. ನಂತರ ದಿನಗಳಲ್ಲಿ 1999 ರಿಂದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಇದೇ ಕ್ಷೇತ್ರದಿಂದ ಗೆಲ್ಲುತ್ತಾ ಬಂದಿದ್ದಾರೆ. 1999 ರಲ್ಲಿ ಉತ್ತರ ಪ್ರದೇಶದ ಅಮೇಠಿ ಮತ್ತು ಕರ್ನಾಟಕದ ಬಳ್ಳಾರಿಯಿಂದ ಸ್ಪರ್ಧಿಸಿ ಗೆದ್ದಿದ್ದ ಅವರು 2004ರ ಚುನಾವಣೆಯಿಂದ 2019ರ ಚುನಾವಣೆಯವರೆಗೂ ರಾಯ್ಬರೇಲಿಯಿಂದ ಸತತವಾಗಿ ಗೆಲ್ಲುತ್ತಾ ಬಂದಿದ್ದಾರೆ. ಆದರೆ ಅವರು ಸ್ಪರ್ಧೆ ಮಾಡುತ್ತಿಲ್ಲ. ಈಗಾಗಲೇ ರಾಜಸ್ಥಾನದಿಂದ (Rajasthan) ರಾಜ್ಯಸಭೆಗೆ ಸೋನಿಯಾ ಗಾಂಧಿ ಅವರು ಆಯ್ಕೆಯಾಗಿದ್ದಾರೆ.