ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ನೇಮಕ

ದೆಹಲಿ, ಏ. 06: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ (CJI)ಯಾಗಿ ಎನ್​.ವಿ.ರಮಣ ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರು ರಮಣ ಅವರನ್ನು ನೇಮಕಮಾಡಿದ್ದು, ಏಪ್ರಿಲ್​ 24ರಂದು ೪೮ನೇ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಲಿದ್ದಾರೆ. ಈಗಿನ ಮುಖ್ಯನ್ಯಾಯಮೂರ್ತಿ ಎಸ್​.ಎ.ಬೊಬ್ಡೆ ಏಪ್ರಿಲ್​ 23ರಂದು ನಿವೃತ್ತರಾಗಲಿದ್ದಾರೆ.. ಹಾಗೇ, ಮುಂದಿನ ಸಿಜೆಐ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಬೊಬ್ಡೆಯವರೇ ಶಿಫಾರಸು ಮಾಡಿದ್ದರು.

1957ರ ಆಗಸ್ಟ್​ 27ರಂದು ಆಂಧ್ರಪ್ರದೇಶದ ಪೊನ್ನಾವರಂ ಗ್ರಾಮದಲ್ಲಿ ಜನಿಸಿದ ಇವರು, 1983ರ ಫೆಬ್ರವರಿ 10ರಿಂದ ವಕೀಲಿ ವೃತ್ತಿ ಜೀವನ ಆರಂಭಿಸಿದ್ದರು. ರಮಣ ಅವರು 2000ರ ಜೂನ್​ 27ರಂದು ಆಂಧ್ರಪ್ರದೇಶ ಹೈಕೋರ್ಟ್​​ನ ಮುಖ್ಯನ್ಯಾಯಾಧೀಶರಾಗಿ ನೇಮಕಗೊಂಡರು.

Exit mobile version