ಕಾಂಗ್ರೆಸ್ 136 ಸ್ಥಾನದಿಂದ ಬಹುಮತ ಸಾಧಿಸಿ ಗೆದ್ದು ಬೀಗಿದ್ದು ಸಿಎಂ ಆಯ್ಕೆ ಕಗ್ಗಂಟಾಗಿಯೇ ಉಳಿದಿತ್ತು ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ (Official announcement of cm) ಮತ್ತು ಡಿಕೆ ಶಿವಕುಮಾರ್
(D.K.Shivakumar) ನಡುವೆ ಪೈಪೋಟಿ ನಡೆಯುತ್ತಿದೆ. ಈ ಗೊಂದಲಕ್ಕೆ ಇದೀಗ ತೆರೆ ಬಿದ್ದಿದೆ, ಕ್ಷಣ ಕ್ಷಣದ ಅಪ್ಡೇಟ್ಸ್ಗಳನ್ನು ಇಲ್ಲಿ ಪಡೆಯಿರಿ.

ದೆಹಲಿಯ ಎಐಸಿಸಿ (AICC) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೆ.ಸಿ.ವೇಣುಗೋಪಾಲ್ (K.C.Venugopal) ಅವರು ಕರ್ನಾಟಕ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್
ಕಾರ್ಯನಿರ್ವಹಿಸಲಿದ್ದಾರೆ ಎಂದು ಘೋಷಿಸಿದರು. ಡಿ.ಕೆ.ಶಿವಕುಮಾರ್ ಮಾತ್ರ ಡಿಸಿಎಂ ಆಗಲಿದ್ದಾರೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ (Official announcement of cm) ಮುಂದುವರಿಯಲಿದ್ದಾರೆ.
ಮೇ 20ರಂದು ಡಿಕೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೇ 20ರಂದು ಮಧ್ಯಾಹ್ನ 12:30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮೇ 20ರಂದು ಹಲವು ಶಾಸಕರು ಸಚಿವರಾಗಿ ಪ್ರಮಾಣ ವಚನ
ಸ್ವೀಕರಿಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಘೋಷಿಸಿದ್ದಾರೆ. ರಾಷ್ಟ್ರೀಯ ರಾಜಕೀಯದ ಇತ್ತೀಚಿನ ಮಾಹಿತಿಯನ್ನು ಇಲ್ಲಿ ಪಡೆಯಿರಿ.
ನವದೆಹಲಿಯಲ್ಲಿ ಎಐಸಿಸಿ ಪತ್ರಿಕಾಗೋಷ್ಠಿ ಆರಂಭವಾಗಿದೆ
ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿ ಆರಂಭವಾಗಿದೆ. ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲಾ (Randeep Surjewala) ಸುದ್ದಿಗೋಷ್ಠಿ ನಡೆಸಿದರು. ಕರ್ನಾಟಕದಲ್ಲಿ
ಗೆಲುವಿಗೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಲ್ಲ ಹಿರಿಯ ನಾಯಕರೇ ಕಾರಣ. ಭಾರತ್ ಜೋಡೋ (Bharat Jodo) ಪಾದಯಾತ್ರೆಯ ನಂತರ ಕಾಂಗ್ರೆಸ್ ಗೆದ್ದಿದೆ. ಕರ್ನಾಟಕದಲ್ಲಿ
ಅನುಭವಿ ಮತ್ತು ಸಮರ್ಥ ಕಾಂಗ್ರೆಸ್ ನಾಯಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ರಾದ ಡಿ.ಕೆ.ಶಿವಕುಮಾರ್ ಪಕ್ಷವನ್ನು ಒಳ್ಳೆ ರೀತಿಯಲ್ಲಿ ಸಂಘಟಿಸಿದ್ದಾರೆ.ಸಿದ್ದರಾಮಯ್ಯ,ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ಸಮರ್ಥ ನಾಯಕರು ಎಂದರು.
ಇಂದು ದೆಹಲಿಯಿಂದ (Delhi) ಮಧ್ಯಾಹ್ನ 3 ಗಂಟೆಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ಬೆಂಗಳೂರಿನತ್ತ ಪ್ರಯಾಣಿಸಲಿದ್ದಾರೆ. ಸದ್ಯ ಈಗ ಇಬ್ಬರೂ ನವದೆಹಲಿಯ ಖರ್ಗೆ (Kharge) ನಿವಾಸದಲ್ಲೇ ಇದ್ದಾರೆ.

ಹೈಕಮಾಂಡ್ ಕೊಡುವ ಯಾವುದೇ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ -ಡಿಕೆ ಶಿವಕುಮಾರ್
ಹೈಕಮಾಂಡ್ (High Command) ಕೊಡುವ ಯಾವುದೇ ತೀರ್ಮಾನಕ್ಕೆ ನಾನು ಸಂಪೂರ್ಣವಾಗಿ ಬದ್ಧನಾಗಿದ್ದೇನೆ, ಇಂದು ಸಂಜೆ 7 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಎಂದು ನವದೆಹಲಿಯಲ್ಲಿ ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸಿದ್ದರಾಮಯ್ಯ ನಿವಾಸದ ಮುಂದೆ ಹೆಚ್ಚಿದ ಪೊಲೀಸ್ ಭದ್ರತೆ:
ಅಭಿಮಾನಿಗಳು ಸಿದ್ದರಾಮಯ್ಯ ನಿವಾಸದ ಬಳಿ ಬರುವ ಮುನ್ಸೂಚನೆ ಸಿಕ್ಕಿರುವುದರಿಂದ ಭದ್ರತೆ ಹೆಚ್ಚಿಸಲಾಗಿದೆ. 70 ಕ್ಕೂ ಹೆಚ್ಚು ಪೊಲೀಸರು ಮತ್ತು ಒಂದು ಕೆಎಸ್ಆರ್ಪಿ ವ್ಯಾನ್,ನಿಯೋಜಿಸಲಾಗಿದೆ. ಸಿದ್ದು ಸರ್ಕಾರಿ ನಿವಾಸ ಕುಮಾರಕೃಪಾ ಬಳಿ ಇದೆ, ಇಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ.
ರಶ್ಮಿತಾ ಅನೀಶ್