ಕರ್ನಾಟಕದಲ್ಲಿ ಇಬ್ಬರಿಗೆ ಒಮಿಕ್ರಾನ್ ಸೋಂಕು ಪತ್ತೆ

ಬೆಂಗಳೂರು ಡಿ 2 : ಒಮಿಕ್ರಾನ್‌ ಭೀತಿ ಹೆಚ್ಚಾಗಿರುವ ಬೆನ್ನಲ್ಲೇ ರಾಜ್ಯದಲ್ಲಿ ಇಬ್ಬರಿಗೆ ಒಮಿಕ್ರಾನ್‌ ಸೋಂಕು ಪತ್ತೆಯಾಗಿದೆ.  ಭಾರತದಲ್ಲಿ ಮೊದಲ ಬಾರಿಗೆ ಒಮಿಕ್ರಾನ್​ ತಳಿಯ ಕೊರೊನಾ​​​ ಪತ್ತೆಯಾಗಿದ್ದು, ಅದು ಕರ್ನಾಟಕದಲ್ಲೇ ಅಂತ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕರ್ನಾಟಕದ ಇಬ್ಬರಲ್ಲಿ ಒಮಿಕ್ರಾನ್​ ಸೋಂಕು ಇರುವುದು ದೃಢಪಟ್ಟಿದೆ. 66 ವರ್ಷದ ವೃದ್ಧ, 46 ವರ್ಷದ ವ್ಯಕ್ತಿಗೆ ಒಮಿಕ್ರಾನ್​ ಸೋಂಕು ತಗುಲಿದೆ ಅಂತ  ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕರ್ನಾಟಕದ ಮೂಲಕವೇ ಭಾರತಕ್ಕೆ ಒಮಿಕ್ರಾನ್ ಎಂಟ್ರಿ ಕೊಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ. ಪ್ರಾಥಮಿಕ, ದ್ವಿತೀಯ ಸಂಪರ್ಕಿತರನ್ನು ಪತ್ತೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕರ್ನಾಟಕದ ಇಬ್ಬರಿಗೆ ಒಮಿಕ್ರಾನ್ ವೈರಸ್ ದೃಢವಾಗಿದ್ದು, ಈ ಪೈಕಿ ಬೆಂಗಳೂರಿನ ಒಬ್ಬರಿಗೆ ​ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಓರ್ವ ಸೋಂಕಿತ ವಾಪಸ್ ವಿದೇಶಕ್ಕೆ ಹೋಗಿರುವ ಮಾಹಿತಿ ಇದೆ. ಕೇಸ್​ ಪತ್ತೆಯಾಗಿರುವ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುಂಜಾಗ್ರತೆ ವಹಿಸಿ. ಹೆಚ್ಚು ಜನರು ಸೇರುವ ಕಾರ್ಯಕ್ರಮಗಳಿಂದ ದೂರವಿರಿ ಅಂತ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

Exit mobile version