ಸಾವಿರ ಗಡಿ ದಾಟಿದ ಓಮಿಕ್ರಾನ್

ನವದೆಹಲಿ ಡಿ 31 : ದೇಶದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್‌ ಆರ್ಭಟ ಹೆಚ್ಚಾಗಿದ್ದು 1000ಕ್ಕೂ ಅಧಿಕ ಪ್ರಕರಣದಲ್ಲಿ ದಾಖಲಾಗಿವೆ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ.. ಮಹಾರಾಷ್ಟ್ರದಲ್ಲೇ ಅತಿ ಹೆಚ್ಚು ಓಮಿಕ್ರಾನ್‌ ಪ್ರಕರಣಗಳು ದೃಢಪಟ್ಟಿವೆ.

ದೇಶದ 23 ರಾಜ್ಯಗಳಲ್ಲಿ ಈವರೆಗೆ ಒಟ್ಟು 1,270 ಓಮಿಕ್ರಾನ್‌ ಸೋಂಕು ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 450 ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಒಟ್ಟು 125 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ ಆರೋಗ್ಯ ಸಚಿವಾಲಯ ತಿಳಿಸಿದೆ.

ದೆಹಲಿಯಲ್ಲಿ 320 ಪ್ರಕರಣಗಳು ದೃಢಪಟ್ಟಿದ್ದು, 57 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಗುಜರಾತ್‌ನಲ್ಲಿ 97, ರಾಜಸ್ತಾನ್‌ನಲ್ಲಿ 69 ಹಾಗೂ ದಕ್ಷಿಣ ಭಾರತದ ಕೇರಳದಲ್ಲಿ 109, ತೆಲಂಗಾಣದಲ್ಲಿ 62, ಆಂಧ್ರಪ್ರದೇಶದಲ್ಲಿ 16, ತಮಿಳುನಾಡಿನಲ್ಲಿ 46, ಕರ್ನಾಟಕದಲ್ಲಿ 34 ಓಮಿಕ್ರಾನ್‌ ಪ್ರಕರಣಗಳು ವರದಿಯಾಗಿವೆ.

ದೇಶದಲ್ಲಿ ನವೆಂಬರ್‌ನಲ್ಲಿ ಓಮಿಕ್ರಾನ್‌ ಪತ್ತೆಯಾಯಿತು. ಈವರೆಗೆ 374 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ.

ಅಷ್ಟೇ ಅಲ್ಲದೇ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ದಿನೇ ದಿನೆ ಏರುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 16,764 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಮತ್ತೆ ಆತಂಕ ಮೂಡಿಸಿದೆ ಜೊತೆಗೆ ಹೊಸವರ್ಷಾಚರಣೆ ಹಿನ್ನಲೆಯಲ್ಲಿ ಇನ್ನಷ್ಟು ಪ್ರಕರಣಗಳು ಹೆಚ್ಚಾಗುವ ಸಂಭವಕೂಡ ಇದೆ,

Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.