ಒಮಿಕ್ರಾನ್‌ ಸೋಂಕು ಹಿನ್ನಲೆ, ಇಂದು ಸಿಎಂ ಮಹತ್ವದ ಸಭೆ

basavaraja bommai

ಬೆಂಗಳೂರು ಡಿ 3 : ಕೊರೊನಾ ಭೀತಿ ಕೊಂಚ ಕಡಿಮೆಯಾಗಿದ್ದರೂ ಕೂಡ ಇದೀಗ ರಾಜ್ಯದಲ್ಲಿ ಒಮಿಕ್ರಾನ್ ಭೀತಿ ಹೆಚ್ಚಾಗಿದೆ. ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸಿಎಂ ಇಂದು ತುರ್ತು ಸಭೆ ನಡೆಸಲಿದ್ದಾರೆ. ಆರೋಗ್ಯ ಇಲಾಖೆ ಹಾಗೂ ಇತರ ಹಿರಿಯ ಅಧಿಕಾರಿಗಳ ಜೊತೆ ಮಹತ್ವದ ಸಭೆಯನ್ನು ಸಿಎಂ ಬೊಮ್ಮಾಯಿ ಹಮ್ಮಿಕೊಂಡಿದ್ದು, ಹೊಸ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಿದ್ದಾರೆಯೇ ಎಂಬ ಕುತೂಹಲ ಕೆರಳಿದೆ.

ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಕೆಲವೊಂದು ಮಹತ್ವದ ವಿಚಾರಗಳನ್ನು ತಿಳಿಸುವ ಸಾಧ್ಯತೆ ಇದೆ. ಸಿಎಂ ಬೊಮ್ಮಾಯಿ ಅವರು ಗುರುವಾರ ದಿಲ್ಲಿ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್, ಮನ್ಸುಖ್ ಮಾಂಡವೀಯ, ಕಿರೆನ್ ರಿಜಿಜು ಮುಂತಾದವರನ್ನು ಭೇಟಿ ಮಾಡಿದ್ದರು.

18ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿರುವ ಓಮಿಕ್ರಾನ್ ಇದೀಗ ರಾಜ್ಯಕ್ಕೂ ಕಾಲಿಟ್ಟಿದೆ. ಬೆಂಗಳೂರಿನ ಓರ್ವ ವೈದ್ಯ ಸೇರಿದಂತೆ ಇಬ್ಬರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ವೈದ್ಯರ ಸಂಪರ್ಕದಲ್ಲಿದ್ದ ಐವರಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿದ್ದು, ಅವರನ್ನೂ ಕೂಡಾ ಐಸೋಲೇಷನ್‌ನಲ್ಲಿ ಇಡಲಾಗಿದೆ. ಇಬ್ಬರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಟ್ರಾಕ್‌ ಮಾಡಲಾಗಿದ್ದು ಅವರನ್ನೆಲ್ಲ ಪ್ರತ್ಯೇಕ ವಾಸಕ್ಕೆ ಒಳಪಡಿಸಲಾಗಿದೆ.

Exit mobile version