ಒಮಿಕ್ರೋನ್ ಭೀತಿ : ದಕ್ಷಿಣ ಆಫ್ರಿಕಾದಿಂದ ಮುಂಬೈಗೆ 1000 ಮಂದಿ ಅಗಮನ

 ಮುಂಬೈ ನ 30 :  ದಕ್ಷಿಣ ಆಫ್ರಿಕಾದಲ್ಲಿ ಒಮಿಕ್ರೋನ್‌ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕೊರೊನಾ ರೂಪಾಂತರ ತಳಿ ಒಮಿಕ್ರೋನ್ ಪತ್ತೆಯಾದ ದಕ್ಷಿಣ ಆಫ್ರಿಕಾ ದೇಶಗಳಿಂದ ಕಳೆದ 15 ದಿನಗಳಲ್ಲಿ ಮುಂಬೈಗೆ 1,000 ಮಂದಿ ಬಂದಿದ್ದು, 66 ಮಂದಿಯ ಪಟ್ಟಿ ಸಿಕ್ಕಿದೆ ಎಂದು ಮುಂಬೈನ ಪಾಲಿಕೆಯ ಅಧಿಕಾರಿ ತಿಳಿಸಿದ್ದಾರೆ.

ಈಗಾಗಲೇ ಇದರಲ್ಲಿ 100 ಮಂದಿಯ ಗಂಟಲು ದ್ರವವನ್ನು ಸಂಗ್ರಹಿಸಲಾಗಿದ್ದು, ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ದೇಶಗಳಿಂದ 1,000 ಮಂದಿ ಮುಂಬೈಗೆ ಬಂದಿರುವುದಾಗಿ ವಿಮಾನ ನಿಲ್ದಾಣದ ಪ್ರಾಧಿಕಾರ ತಿಳಿಸಿದೆ. ಆದರೆ, ಅದರಲ್ಲಿ 466 ಮಂದಿಯ ಪಟ್ಟಿ ಮಾತ್ರ ಸಿಕ್ಕಿದ್ದು, ಅದರಲ್ಲಿ 100 ಮಂದಿಯ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಉಳಿದವರ ಮಾದರಿಯನ್ನೂ ಇಂದು ಅಥವಾ ನಾಳೆ ಸಂಗ್ರಹಿಸುವುದಾಗಿ ಬೃಹನ್ ಮುಂಬೈ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಸುರೇಶ್ ಕಾಕನಿ ಹೇಳಿದ್ದಾರೆ.

ಈಗಾಗಲೇ ಪ್ರಯೋಗಾಲಯಕ್ಕೆ ಕಳುಹಿಸಿರುವ ಮಾದರಿಗಳ ಪರೀಕ್ಷಾ ವರದಿ ಇಂದು ಅಥವಾ ನಾಳೆ ಬರಲಿದ್ದು, ಪಾಸಿಟಿವ್ ಬಂದವರಿಗೆ ಜಿನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಲಾಗುವುದು. ಆ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

Exit mobile version