ನವೆಂಬರ್‌ 11ರಂದು ಒನಕೆ ಓಬವ್ವ ಜಯಂತಿ ಆಚರಿಸಲು ಸರ್ಕಾರ ಆದೇಶ

ಬೆಂಗಳೂರು ನ 10 : ನವೆಂಬರ್ 11ರಂದು ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿಯನ್ನಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ನವೆಂಬರ್ 11ರಂದು ಒನಕೆ ಓಬವ್ವ ಅವರ ಜನ್ಮ ದಿನವಾಗಿದ್ದು ಈ ದಿನವನ್ನೇ ಓಬವ್ವ ಜಯಂತಿಯನ್ನಾಗಿ ಘೋಷಿಸಲಾಗಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಚರಣೆ ನಡೆಯಲಿದೆ. 

ಕರ್ನಾಟಕದ ರಾಣಿಯರಾದ ಕಿತ್ತೂರು ಚನ್ನಮ್ಮ, ರಾಣಿ ಅಬ್ಬಕ್ಕ ಸಾಲಿನಲ್ಲಿ ಒಬ್ಬರೆಂದು ಒನಕೆ ಓಬವ್ವರನ್ನು ಪರಿಗಣಿಸಲಾಗಿದೆ.

ಚಿತ್ರದುರ್ಗದ ಮೇಲೆ ಹೈದರಾಲಿಯ ಸೈನಿಕರು ಹಠಾತ್ತಾಗಿ ಅಕ್ರಮಣ ಮಾಡಿದಾಗ ಓಬ್ಬವ್ವ ತನ್ನ ಒನಕೆಯನ್ನು ಅಸ್ತ್ರವನ್ನಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿದ್ದರು. ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ತನ್ನ ಒನಕೆಯಿಂದಲೆ ಕೊಂದಿದ್ದರು.
ಕೊನೆಯಲ್ಲಿ ಎದುರಾಳಿಯು ಬೆನ್ನ ಹಿಂದೆ ಬಂದದ್ದನ್ನು ಗಮನಿಸಲಾಗದೆ ಶತ್ರುವಿನ ಕತ್ತಿಗೆ ಬಲಿಯಾದರು. ಅಂದಿನಿಂದ ಅವರು ಒನಕೆ ಓಬವ್ವ ಎಂದು ಪ್ರಸಿದ್ದಿ ಹೊಂದಿರುತ್ತಾರೆ ಹಾಗೂ ಪುಸ್ತುತ ಆ ಕಿಂಡಿಯನ್ನು ಒನಕೆ ಓಬಮ್ಮನ ಕಿಂಡಿ ಅಥವಾ ಒನಕೆ ಕಿಂಡಿ ಎಂದು ಕರೆಯಲಾಗುತ್ತಿದೆ.

ಚಿತ್ರದುರ್ಗದ ಕ್ರೀಡಾಂಗಣಕ್ಕೆ ಜನಕೆ ಓಬವ್ವ ಕ್ರೀಡಾಂಗಣ ಎಂದು ಅವರ ಹೆಸರನ್ನಿಟ್ಟು ಗೌರವಿಸಲಾಗಿದೆ. ಒನಕೆ ಓಬವ್ವರ ಜನ್ಮ ದಿನವಾದ ನವೆಂಬರ್ 11ರಂದು ಒನಕೆ ಓಬವ್ವ ಜಯಂತಿಯನ್ನು ಆಚರಣೆ ಮಾಡುವಂತೆ ಘೋಷಿಸಲಾಗಿದೆ.

Exit mobile version