ದಾವಣಗೆರೆ : ಸಿದ್ದರಾಮಯ್ಯ(Siddaramaiah) ಅವರ 75ನೇ ವರ್ಷದ ಹುಟ್ಟುಹಬ್ಬದ(Birthday) ಸಿದ್ದರಾಮೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಪ್ರಾರಂಭಗೊಂಡಿದೆ. ಕಾಂಗ್ರೆಸ್ ಪಕ್ಷದ(Congress Party) ಬಹುತೇಕ ನಾಯಕರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ‘ವಂದೇ ಮಾತರಂ’ ಹಾಡುವ ಮೂಲಕ ಸಿದ್ದರಾಮೋತ್ಸವ ಆರಂಭವಾಗಿದೆ.
ಮುಖ್ಯ ವೇದಿಕೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಸೇರಿ 45 ಗಣ್ಯರಿಗೆ ಮಾತ್ರ ಕೂರಲು ವ್ಯವಸ್ಥೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ‘ಮೈಸೂರು ಹುಲಿಯಾʼ, ‘ಸೆಲ್ಫ್ ಮೇಡ್ ಸಿದ್ದಣ್ಣ’ ಹಾಡುಗಳನ್ನು ರಿಲೀಸ್ ಮಾಡಲಾಯಿತು. ಕಾಂಗ್ರೆಸ್ ನಾಯಕ ಮತ್ತು ಸಂಗೀತ ನಿರ್ದೇಶಕ ಸಾಧುಕೋಕಿಲ(Sadhu Kokila) ಮತ್ತು ಹಂಸಲೇಖ(Hamsalekha) ತಂಡ ಸಂಗೀತ ಕಾರ್ಯಕ್ರಮ ನೀಡಿದ್ದು, ಅಭಿಮಾನಿಗಳು ಕಂಬಳಿ ಬೀಸಿ ಡ್ಯಾನ್ಸ್ ಮಾಡಿ, ಚಪ್ಪಾಳೆ ಶಿಳ್ಳೆಯಿಂದ ಕುಣಿದು ಕುಪ್ಪಳಿಸಿದ್ದಾರೆ. ಇದೇ ವೇಳೆ `ಮತ್ತೊಮ್ಮೆ ಸಿದ್ದರಾಮಯ್ಯʼ ಘೋಷಣೆಗಳು ಎಲ್ಲೆಡೆ ಮೊಳಗಿವೆ. ಇನ್ನು ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹುಬ್ಬಳ್ಳಿಯಿಂದ(Hubbali) ಹೊರಟಿದ್ದ ರಾಹುಲ್ ಗಾಂಧಿ ಅವರು ಚಿತ್ರದುರ್ಗದ(Chitradurga) ಮುರುಘಾಮಠಕ್ಕೆ ಭೇಟಿ ನೀಡಿದ್ದರು.
ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು, ರಾಹುಲ್ ಗಾಂಧಿ ಅವರಿಗೆ ಲಿಂಗಧಾರಣೆ ಮಾಡಿ, ವಿಭೂತಿ ಮತ್ತು ಲಿಂಗ ಪೂಜೆ ತತ್ವದ ಉಪದೇಶ ಮಾಡಿದರು. ಈ ವೇಳೆ ಲಿಂಗ ಪೂಜೆ ಪಾಲಿಸುವುದಾಗಿ ರಾಹುಲ್ ಗಾಂಧಿ ಪ್ರತಿಜ್ಞೆ ಮಾಡಿದರು. ಇದಕ್ಕೂ ಮುನ್ನ ಹಲವು ಮಠಾಧೀಶರೊಂದಿಗೆ ಚರ್ಚೆ ನಡೆಸಿದ ರಾಹುಲ್ ಗಾಂಧಿ ಅವರು, ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಬಸವಣ್ಣನವರ ಭಾವಚಿತ್ರವನ್ನು ನೀಡಿ ಆರ್ಶೀವಾದ ಪಡೆದುಕೊಂಡರು. ಈ ವೇಳೆ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ರಾಜ್ಯಾಧ್ಯಕ್ಷ(Congress State President) ಡಿ.ಕೆ.ಶಿವಕುಮಾರ್(DK Shivkumar),

ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ, ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಸಾಥ್ ನೀಡಿದರು.
ಇನ್ನು ವೇದಿಕೆ ಮೇಲೆ ಆರ್.ವಿ.ದೇಶಪಾಂಡೆ, ಜಮೀರ್ ಅಹಮ್ಮದ್, ದಿನೇಶ್ ಗುಂಡೂರಾವ್, ಯತೀಂದ್ರ ಸಿದ್ದರಾಮಯ್ಯ, ಜಿ.ಪರಮೇಶ್ವರ್, ಲಕ್ಷ್ಮಿ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಬಿ.ಎಲ್.ಶಂಕರ್, ರಮೇಶ್ ಕುಮಾರ್, ಕೆ.ಎನ್.ರಾಜಣ್ಣ, ನಾಸೀರ್ ಹುಸೇನ್, ಆರ್.ವಿ.ಸುದರ್ಶನ್, ಭೀಮಾ ನಾಯಕ್ ಸೇರಿ ಹಲವು ಗಣ್ಯರಿಗೆ ಅವಕಾಶ ನೀಡಲಾಗಿತ್ತು.