ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನದ ಹಿನ್ನೆಲೆ ಭಾರತದಲ್ಲಿ ನಾಳೆ ಒಂದು ದಿನದ ಶೋಕಾಚರಣೆ

Shenzo abe

ಜಪಾನ್‌ನ(Japan) ಮಾಜಿ ಪ್ರಧಾನಿ(Former Primeminister) ಶಿಂಜೋ ಅಬೆ(Shinzo Abe) ಅವರ ನಿಧನದ ಕುರಿತು ಭಾರತ ಶುಕ್ರವಾರ ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದು, ಈ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು, ಶಿಂಜೋ ಅಬೆ ಅವರು ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸಲು ಅಪಾರ ಕೊಡುಗೆ ನೀಡಿದ ಜಾಗತಿಕ ರಾಜಕಾರಣಿ ಎಂದು ಬಣ್ಣಿಸಿದ್ದಾರೆ. ನಾರಾ ನಗರದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಭಾಷಣ ಮಾಡುವಾಗ ದುಷ್ಕರ್ಮಿ ಹಾರಿಸಿದ ಗುಂಡು ತಗುಲಿ ಸುಮಾರು ಐದೂವರೆ ಗಂಟೆಗಳ ಬಳಿಕ 67 ವರ್ಷದ ಅಬೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮಾಜಿ ಪ್ರಧಾನಿಯ ಮೇಲೆ ಗುಂಡು ಹಾರಿಸಿದ ಜಪಾನ್‌ನ ಮಾರಿಟೈಮ್ ಸೆಲ್ಫ್ ಡಿಫೆನ್ಸ್ ಫೋರ್ಸ್‌ನ ಮಾಜಿ ಸದಸ್ಯ ಟೆಟ್ಸುಯಾ ಯಮಗಾಮಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. “ನನ್ನ ಆತ್ಮೀಯ ಸ್ನೇಹಿತರಲ್ಲೊಬ್ಬರಾದ ಶಿಂಜೊ ಅಬೆ ಅವರ ದುರಂತ ನಿಧನದಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಮತ್ತು ದುಃಖಿತನಾಗಿದ್ದೇನೆ. ಅವರು ಅತ್ಯುನ್ನತ ಜಾಗತಿಕ ರಾಜಕಾರಣಿ, ಅತ್ಯುತ್ತಮ ನಾಯಕ ಮತ್ತು ಗಮನಾರ್ಹ ಆಡಳಿತಗಾರರಾಗಿದ್ದರು. ಜಪಾನ್ ಮತ್ತು ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು” ಎಂದು ಪ್ರಧಾನಿ ಮೋದಿ ಸರಣಿ ಟ್ವೀಟ್‌ಗಳ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಬಗ್ಗೆ ನಮ್ಮ ಆಳವಾದ ಗೌರವದ ಸಂಕೇತವಾಗಿ, 9 ಜುಲೈ 2022 ರಂದು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುತ್ತದೆ” ಎಂದು ಮೋದಿ ಹೇಳಿದರು. ಅಬೆ ಅವರು ಭಾರತ-ಜಪಾನ್ ಸಂಬಂಧಗಳನ್ನು ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಮಟ್ಟಕ್ಕೆ ಏರಿಸಲು ಅಪಾರ ಕೊಡುಗೆ ನೀಡಿದ್ದಾರೆ ಮತ್ತು ಈ ಕಷ್ಟದ ಕ್ಷಣದಲ್ಲಿ ನಾವು ನಮ್ಮ ಜಪಾನಿನ ಸಹೋದರ, ಸಹೋದರಿಯರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಹೇಳಿದರು.

Exit mobile version