ಬಾರಾಮುಲ್ಲಾ: ಆಪರೇಶನ್ ಬರಮುಲ್ಲಾ ಕಣಿವೆಯಲ್ಲಿ ಭಾರತೀಯ ಸೇನೆ ಹಾಗೂ ಉಗ್ರರ ನಡುವಿನ ಕಾದಾಟ ಮುಂದುವರಿದಿದ್ದು, ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಒಟ್ಟು ಮೂರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಇಲ್ಲಿನ ಕ್ರಿರಿ ಪ್ರದೇಶದಲ್ಲಿ ಅವಿತುಕೊಂಡಿದ್ದ ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದ ಸೇನೆ, ಒಟ್ಟು ಮೂವರು ಮೃತಪಟ್ಟರೆ, ಎನ್‌ಕೌಂಟರ್‌ನಲ್ಲಿ ಗುಂಡೇಟಿನಿಂದ ಗಾಯಗೊಂಡಿದ್ದ ಇಬ್ಬರು ಸೈನಿಕರು ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ.
ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾದ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದ ಉಗ್ರರಿಗಾಗಿ ಶೋದಕಾರ್ಯ ಮುಂದುವರಿದೆ ಎಂದು ಸೇನಾ ಮೂಲ ವರದಿ ಮಾಡಿದೆ.