ಒಬಿಸಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಲ್ಲಿ ಶೇ. 27ರಷ್ಟು ಮೀಸಲಾತಿ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ, ಜು. 29: ಒಬಿಸಿ ಸಮುದಾಯದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯುವುದಾದರೆ ಅವರಿಗೆ ಶೇ. 27ರಷ್ಟು ಮೀಸಲಾತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಹಾಗೇ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ (EWS) ಶೇ. 10ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದೆ.

ಈ ಮೀಸಲಾತಿ ಎಂಬಿಬಿಎಸ್ (MBBS) ಮತ್ತು ಬಿಡಿಎಸ್​(BDS)ಗೂ ಅನ್ವಯವಾಗಲಿದ್ದು, ಆಲ್ ಇಂಡಿಯಾ ಕೋಟಾದಡಿ ಬರುವ ಎಲ್ಲ ಸ್ನಾತಕೋತ್ತರ ವೈದ್ಯಕೀಯ ಕಾಲೇಜುಗಳಲ್ಲಿ ಕೂಡ ಒಬಿಸಿ ವಿದ್ಯಾರ್ಥಿಗಳಿಗೆ ಶೇ. 27ರಷ್ಟು ಮೀಸಲಾತಿ ನೀಡಲಾಗುವುದು. ಹಾಗೇ, ಆರ್ಥಿಕವಾಗಿ ಹಿಂದುಳಿದಿರುವವರಿಗೆ ಶೇ. 10ರಷ್ಟು ಮೀಸಲಾತಿ ನೀಡಲಾಗುವುದು. ಈ ವರ್ಷದಿಂದಲೇ ಈ ಮೀಸಲಾತಿ ಅನ್ವಯವಾಗಲಿದೆ.

ಈ ಮೀಸಲಾತಿಯಿಂದಾಗಿ ಎಂಬಿಬಿಎಸ್​ನ 1,500 ಒಬಿಸಿ (OBC) ಅಭ್ಯರ್ಥಿಗಳು, ಸ್ನಾತಕೋತ್ತರ ವಿಭಾಗದ 2,500 ಒಬಿಸಿ ವಿದ್ಯಾರ್ಥಿಗಳು, ಎಂಬಿಬಿಎಸ್​ನ ಆರ್ಥಿಕವಾಗಿ ಹಿಂದುಳಿದ (EWS) 550 ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿಭಾಗದ 1000 EWS ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Exit mobile version