ಬೆಂಗಳೂರು, ಡಿ. 29: ಮೊಬೈಲ್ ಅಪ್ಲಿಕೇಶನ್ ಮೂಲಕ ಸಾಲ ನೀಡಿ ದುಬಾರಿ ಬಡ್ಡಿ ಪಡೆಯುತ್ತಿದ್ದ ಮೂವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮೂವರನ್ನು ಪೊಲೀಸರು ಬಂಧಿಸಿದ್ದು, ಇವರುಗಳಿಂದ ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳು, ವಿವಿಧ ಬ್ಯಾಂಕುಗಳು ಚೆಕ್ ಬುಕ್ಗಳು, ಸಿಮ್ ಕಾರ್ಡ್ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತ ಆರೋಪಿಗಳು ಮೊಬೈಲ್ ಅಪ್ಲಿಕೇಶನ್ ಮೂಲಕ ಆನ್ಲೈನ್ ಸಾಲ ನೀಡಿ ದುಬಾರಿ ಬಡ್ಡಿ, ಚಕ್ರಬಡ್ಡಿ ವಿಧಿಸಿ ಬೆದರಿಸುತ್ತಿದ್ದರಲ್ಲದೆ, ಸಾಲ ಪಡೆದ ಸಂಬಂಧಿಕರಿಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು 3 ಜನರನ್ನು ಬಂಧಿಸಿದ್ದಾರೆ.
I greatly applaud @CCBBangalore for cracking down on mobile-app based instant loan companies.
— Pratap Reddy, IPS ಪೊಲೀಸ್ ಆಯುಕ್ತರು, ಬೆಂಗಳೂರು ನಗರ (@CPBlr) December 28, 2020
These microloan apps used to lend money at a high-interest rate and harass the defaulters through coercive methods. pic.twitter.com/B6ay95hEcf