ಬೆಂಗಳೂರು, ಡಿ. 18: ಖಾಸಗಿ ಶಾಲೆಗಳ ಒಕ್ಕೂಟ ಡಿಸೆಂಬರ್ 20ರಿಂದ ಖಾಸಗಿ ಶಾಲೆಗಳನ್ನು ಮುಚ್ಚಿ, ಆನ್ ಲೈನ್ ಕ್ಲಾಸ್ ಬಂದ್ ಮಾಡಲು ನಿರ್ಧರಿಸಿರುವುದರಿಂದ ರಾಜ್ಯ ಸರ್ಕಾರಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.
ಖಾಸಗಿ ಶಾಲೆಗಳ ಬೇಡಿಕೆಗಳಿಗೆ ಸರ್ಕಾರದಿಂದ ಯಾವುದೇ ಸ್ಪಂದನೆ ವ್ಯಕ್ತವಾಗದ ಕಾರಣ ಅಂತಿಮವಾಗಿ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಇಳಿಯಲು ನಿರ್ಧಾರ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸುಮಾರು 10 ಸಾವಿರ ಖಾಸಗಿ ಶಾಲೆಗಳನ್ನು ಮುಚ್ಚಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ.
ಈಗಾಗಲೇ ಜಿಲ್ಲಾ ಕೇಂದ್ರಗಳಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ಖಾಸಗಿ ಶಾಲಾ ಒಕ್ಕೂಟದ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ನೇತೃತ್ವದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ವೇಳೆ ಡಿಸೆಂಬರ್ 10 ರ ಒಳಗೆ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಗಡುವು ನೀಡಿದ್ದರು. ಇದೀಗ ಡಿಸೆಂಬರ್ 20 ರಿಂದ ಶಾಲೆಗಳನ್ನು ಮುಚ್ಚಿ ಆನ್ ಲೈನ್ ಕ್ಲಾಸ್ ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ.