Bengaluru: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಸುದೀರ್ಘ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ.

ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ನಡೆದುಕೊಂಡ ರೀತಿಯ ಬಗ್ಗೆ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದು ಸಿಎಂ ಸಿದ್ದರಾಮಯ್ಯ (CM Siddaramaiah)ಗೆ ಬಹಿರಂಗ ಪತ್ರ ಬರೆದಿದ್ದಾರೆ. ಹಿರಿಯ ಲೇಖಕರಾದ ಡಾ. ವಿಜಯಾ, ಸಾಹಿತಿ ಡಾ.ಜಿ ರಾಮಕೃಷ್ಣ, ವಸುಂಧರಾ ಭೂಪತಿ (Dr. G Ramakrishna, Vasundhara Bhupati) ಮೀನಾಕ್ಷಿ ಬಾಳಿ ಕೆ, ನೀಲಾ, ಕೆ.ಎಸ್ ವಿಮಲಾ, ಕುಂ ವೀರಭದ್ರಪ್ಪ, ಮುಜಫರ್ ಅಸ್ಸಾದಿ ಸೇರಿದಂತೆ ಒಟ್ಟು 107 ಮಂದಿಯ ಸಹಿಯುಳ್ಳ ಪತ್ರ ಬರೆಯಲಾಗಿದ್ದು, ‘ಪಜ್ಞಾವಂತ ನಾಗರಿಕರ ಬಹಿರಂಗ ಪತ್ರ’ ಎಂದು ಹೆಸರಿಸಲಾಗಿದೆ. 16 ಬೇಡಿಕೆಗಳನ್ನೂ ಈ ಪತ್ರದ ಮೂಲಕ ಸಿಎಂ ಮುಂದಿಡಲಾಗಿದೆ.
ಆ ಪತ್ರದಲ್ಲಿರುವ ಬೇಡಿಕೆಗಳು ಯಾವುವು?
ಆರೋಪಿಯನ್ನು ಕೂಡಲೇ ಬಂಧಿಸಬೇಕು
ಚುನಾವಣಾ ಸ್ಪರ್ಧೆಗೆ ಪ್ರಕರಣ ಹೊರ ಬಂದಮೇಲೂ ಅವಕಾಶ ನೀಡಬಾರದಾಗಿತ್ತು.
ಎಸ್ಐಟಿ (SIT) ತನಿಖೆಯು ಕಾಯ್ದೆ ಅನುಸಾರ ಕಾಲಮಿತಿಯೊಳಗೆ ನಡೆಯಬೇಕು.
ಹಗರಣ ಬಯಲಾಗಿ ಐದು ದಿನಗಳಾದರೂ ಆರೋಪಿಯನ್ನು ಸ್ವತಂತ್ರವಾಗಿ ಬಿಟ್ಟಿದ್ದು ತಪ್ಪು.
ಐಟಿ, ಐಪಿಸಿ (IT, IPC) ಕಾಯ್ದೆಗಳ ಅಡ್ಡಿಯಲ್ಲಿ ಮೊಕದ್ದಮೆ ದಾಖಲಿಸಬೇಕು.

ಸಂತ್ರಸ್ತ ಮಹಿಳೆಯರು ಭೀತಿಯಿಲ್ಲದೆ ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು.
ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ಡಿ ರೇವಣ್ಣ (H D Revanna) ವಿಧಾನಸಭೆ ಸದಸ್ಯತ್ವ ತಾತ್ಕಾಲಿಕವಾಗಿ ರದ್ದು ಮಾಡಬೇಕು.
ಆರೋಪ- ಪ್ರತ್ಯಾರೋಪಗಳಲ್ಲಿ ತೊಡಗಿರುವ ರಾಜಕೀಯ ನಾಯಕ ನಡುವಳಿಕೆಗೆ ಕಡಿವಾಣ ಹಾಕಬೇಕು.
ಪ್ರಜ್ವಲ್ ಚಾಲಕ ಕಾರ್ತಿಕ್ನನ್ನು (Karthik) ಕೂಡಲೇ ಬಂಧಿಸಬೇಕು.
ಬಿಜೆಪಿ ಮುಖಂಡ ದೇವರಾಜೇಗೌಡ (Devarajegowda) ವಿರುದ್ಧವೂ ಗಂಭೀರ ಪ್ರಕರಣಗಳು ದಾಖಲು ಮಾಡಬೇಕು.
ವಿಡಿಯೋಗಳನ್ನು ಹಂಚಿದವರ ವಿರುದ್ಧ ಮಾನಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ (Election sabotage) ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ ಕೇಸ್ ಹೂಡಬೇಕು.
ಹಳೇ ವಿಡಿಯೋ ಎಂದು ರೇವಣ್ಣ ಹೇಳಿದ್ದಾರೆ.
ವಿಕೃತಿ ಮುಂದುವರೆಯಲು ಬಿಟ್ಟಿರುವ ಕುಟುಂಬದ ಎಲ್ಲಾ ಸದಸ್ಯರನ್ನ Accompliceಗಳೆಂದು ಪರಿಗಣಿಸಬೇಕು.
ವಿಕೃತಿ ಮುಂದುವರೆಯಲು ಬಿಟ್ಟಿರುವ ಕುಟುಂಬ ಸದಸ್ಯರ ವಿರುದ್ದವೂ ಮೊಕದ್ದಮೆ ಹೂಡಬೇಕು.
ಪ್ರಜ್ವಲ್ ದೇಶ ಬಿಟ್ಟು ಪರಾರಿಯಾಗಿರುವುದು ಗೃಹ ಇಲಾಖೆ ಮತ್ತು ಗುಪ್ತಚರ ಇಲಾಖೆಯ ವೈಫಲ್ಯ.
ಗೃಹ ಇಲಾಖೆ, ಗುಪ್ತಚರ ಇಲಾಖೆ ಅಧಿಕಾರಿಗಳನ್ನು ವಜಾ ಮಾಡಬೇಕು.
ಪ್ರಜ್ವಲ್ ಪ್ರಕರಣದಲ್ಲಿ ಸರ್ಕಾರದ ನಡೆ ಹಾಗೂ ಹೆಚ್ಡಿ ಕುಮಾರಸ್ವಾಮಿ (H D Kumaraswamy) ಕುಟುಂಬದ ವಿರುದ್ಧ ಪತ್ರದಲ್ಲಿ ಬೇಸರ ವ್ಯಕ್ತಪಡಿಸಲಾಗಿದೆ. ಸಂತ್ರಸ್ತರ ಪೋಟೋ, ವಿಡಿಯೋ ದಾಖಲಿಸಿ ಇಟ್ಟುಕೊಂಡಿರುವುದು, ದೂರು ಕೊಡದಂತೆ ಬೆದರಿಸುವುದು, ಅಪಹರಿಸುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಲಾಗಿದ್ದು, ಅನೇಕ ವರ್ಷಗಳಿಂದ ನಡೆದುಕೊಂಡ ಬಂದ ಹಗರಣವಿದು. ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗೆ, ಚುನಾವಣೆ ಲಾಭಕ್ಕಾಗಿ ಬಳಸುತ್ತಿರುವುದು ಆಘಾತಕಾರಿಯಾಗಿದೆ ಎಂದು ಉಲ್ಲೇಖಿಸಲಾಗಿದೆ.