ನಾಯಕತ್ವ ಬದಲಾವಣೆಗೆ ತೆರೆ: ಸರ್ಕಾರದ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ

ಬೆಂಗಳೂರು, ಜು. 26: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಸಂಚಲನ ಮೂಡಿಸಿದ್ದ ನಾಯಕತ್ವ ಬದಲಾವಣೆ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದೆ. ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಘೋಷಿಸಿದ್ದಾರೆ.

ಸಮ್ಮಿಶ್ರ ಸರ್ಕಾರ ಉರುಳಿ ರಾಜ್ಯದಲ್ಲಿ ಕಮಲ ಅರಳಿ ಇಂದಿಗೆ ಎರಡು ವರ್ಷ ತುಂಬಿದೆ. ಸರ್ಕಾರದ ಸಾಧನ ಸಮಾವೇಶದಲ್ಲಿ ಗದ್ಗಿತರಾಗಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ,ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಎಲ್ಲರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದಕ್ಕೆ ಶಿಕಾರಿಪುರದ ಜನತೆ ನನ್ನನ್ನು ಏಳು ಭಾರಿ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಕರ್ನಾಟಕದ ಜನತೆ ನನ್ನನ್ನು ಕೈಬಿಡಲಿಲ್ಲ. ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣ ಎಂದು ಹೇಳಿದರು.

ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರಕ್ಕೆ ಅವಕಾಶ ಕೊಡಲ್ಲ ಆದರೆ ಜೆ.ಪಿ. ನಡ್ಡಾ ಅವರು ನನಗೆ 2 ವರ್ಷ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಟ್ಟರು. ಪ್ರಧಾನಿ ಮೋದಿ, ಅಮಿತ್ ಶಾ ಜೋಡಿ ಮತ್ತೊಮ್ಮೆ ಲೋಕಸಭೆ ಚುನಾವಣೆಯಲ್ಲಿ ಗೆದ್ದು ದೇಶವನ್ನು ಮುನ್ನಡೆಸುವ ಅವಕಾಶ ಸಿಗಬೇಕು ಎಂದರು.

ಎರಡು ವರ್ಷದ ಬಿಜೆಪಿ ಸಾಧಾನ ಸಮಾವೇಶದಲ್ಲೇ ಮುಖ್ಯಮಂತ್ರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ ಬಿಎಸ್ವೈ, ಸಾಧನಾ ಸಮಾವೇಶ ಮುಗಿದ ಬಳಿಕ, ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಪಕ್ಷದ ಕಾರ್ಯಕ್ರಮದಲ್ಲೇ ಘೋಷಣೆ ಮಾಡಿದರು.

Exit mobile version