Bengaluru : ಮುಂಬರುವ ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಈಗಾಗಲೇ (operation INC towards blore north) ಅನೇಕ ತಂತ್ರಗಾರಿಕೆಗಳನ್ನು
ರೂಪಿಸುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಇದೀಗ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಗೆಲ್ಲಲು ಆಪರೇಷನ್ (Operation) ಹಸ್ತಕ್ಕೆ
ಮುಂದಾಗಿದ್ದಾರೆ. ಅದರ ಭಾಗವಾಗಿ ಬಿಜೆಪಿ ಶಾಸಕರ ಬೆಂಬಲಿಗರು ಮತ್ತು ಎರಡನೇ ಹಂತದ ನಾಯಕರನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯುವ ಪ್ರಯತ್ನ ಶುರುವಾಗಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಸದ್ಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದರೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಐವರು ಬಿಜೆಪಿ
ಶಾಸಕರಲ್ಲಿ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ (S.T. Somashekar) , ಮಹಾಲಕ್ಷ್ಮೀ ಲೇಔಟ್ ಶಾಸಕ ಗೋಪಾಲಯ್ಯ ಮತ್ತು ರಾಜರಾಜೇಶ್ವರಿ ಕ್ಷೇತ್ರದ ಶಾಸಕ ಮುನಿರತ್ನ
(Muniratna) ಅವರನ್ನು ಸೆಳೆಯುವ ನಿಟ್ಟಿನಲ್ಲಿ ಪ್ರಯತ್ನಗಳು (operation INC towards blore north) ನಡೆಯುತ್ತಿವೆ ಎನ್ನಲಾಗಿದೆ.
ಈಗಾಗಲೇ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರನ್ನು ಕಾಂಗ್ರೆಸ್ ಕರೆತರುವ ಜವಾಬ್ದಾರಿಯನ್ನು ನೆಲಮಂಗಲ ಶಾಸಕ ಶ್ರೀನಿವಾಸ್ ಅವರಿಗೆ ವಹಿಸಿದ್ದಾರೆ. ಇನ್ನೊಂದೆಡೆ
ವಿದ್ಯುತ್ ನಿಗಮಗಳಿಗೆ ಶಾಕ್ ನೀಡಿದ ಸರ್ಕಾರ ; ಗೃಹಜ್ಯೋತಿಯ ಅರ್ಧ ಮೊತ್ತ ಮಾತ್ರ ಬಿಡುಗಡೆ..!
ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜ್ (Bairati Basavaraj) ಬೆಂಬಲಿಗರು ಮತ್ತು ಮಾಜಿ ಕಾರ್ಪೊರೇಟರ್ಗಳು ಕಾಂಗ್ರೆಸ್ ಸೇರಿದ್ದಾರೆ.ಈ ನಡುವೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ
ನಾಯ್ಡು ಸೋಮವಾರ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಅವರು ಕೂಡ ಕಾಂಗ್ರೆಸ್ (Congress) ಸೇರುವ ಸಾಧ್ಯತೆ ಹೆಚ್ಚಿದೆ. ಅದೇ ರೀತಿ ಕೆಪಿಸಿಸಿ ಕಚೇರಿಯಲ್ಲಿ ನೂತನವಾಗಿ ನೇಮಕಗೊಂಡ
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸಯ್ಯದ್ ನಸೀರ್ ಹುಸೇನ್ ಅವರ ಸಮ್ಮುಖದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಇನ್ನು ಈ ಕುರಿತು ಟ್ವೀಟ್ (Tweet) ಮಾಡಿರುವ ಡಿ.ಕೆ.ಶಿವಕುಮಾರ್ ಅವರು, ಯಶವಂತಪುರ ವಿಧಾನಸಭಾ ಕ್ಷೇತ್ರದ ಅನ್ಯ ಪಕ್ಷದ ಕಾರ್ಯಕರ್ತರು, ಮುಖಂಡರು ಇಂದು ಕಾಂಗ್ರೆಸ್ ಪಕ್ಷದ
ತತ್ವ ಸಿದ್ಧಾಂತವನ್ನು ನಂಬಿ ಪಕ್ಷ ಸೇರ್ಪಡೆಯಾದರು. ಅವರನ್ನು ಸ್ವಾಗತಿಸಿ, ಶುಭ ಹಾರೈಸಿದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ, ಸಂವಿಧಾನ, ರಾಷ್ಟ್ರಧ್ವಜ ನೀಡಿದ ಪಕ್ಷ ನಮ್ಮದು.
ಕಾಂಗ್ರೆಸ್ ಪಕ್ಷ ಪ್ರತಿಯೊಂದು ವರ್ಗದ ಜನರ ಬದುಕು ಉತ್ತಮಗೊಳಿಸಲು ಹಲವಾರು ಯೋಜನೆಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದೆ. ಕಾಂಗ್ರೆಸ್ನ ಅನ್ನಭಾಗ್ಯ, ಕ್ಷೀರಭಾಗ್ಯ, ಗೃಹಲಕ್ಷ್ಮಿ,
ಗೃಹಜ್ಯೋತಿ ಸೇರಿದಂತೆ ಹಲವು ಯೋಜನೆಗಳು ಜನರ ಜೀವನಕ್ಕೆ ಆಸರೆಯಾಗಿವೆ. ನುಡಿದಂತೆ ನಡೆಯುವ ಮೂಲಕ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಜನಪರ ಆಡಳಿತ ನೀಡುತ್ತಿದೆ.
ಕಾಂಗ್ರೆಸ್ ಪಕ್ಷದ ಶಕ್ತಿ ಮತ್ತಷ್ಟು ಬಲಗೊಳ್ಳುತ್ತಿದೆ ಎಂದಿದ್ದಾರೆ.