vijaya times advertisements
Visit Channel

ಚಾ.ನಗರ ಆಕ್ಸಿಜನ್​ ದುರಂತ: ಸಿಎಂ, ಸಚಿವ ಸುಧಾಕರ್​​ ರಾಜೀನಾಮೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

siddaramaiah-011618825201

ಬೆಂಗಳೂರು, ಮೇ. 03: ಗಡಿಜಿಲ್ಲೆ ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ 24 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿರುವ ಘಟನೆ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್‌ ನಾಯಕರು ಸಿಎಂ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿರುವ ಈ ಘಟನೆ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದೆ. ಈ ಘಟನೆಯ ನೈತಿಕ ಹೊಣೆ ಹೊತ್ತು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಹಾಗೂ ಸಚಿವ ಸುಧಾಕರ್‌ ಕೂಡಲೇ ರಾಜೀನಾಮೆ ಕೊಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್​​​ ಮಾಡಿರುವ ಅವರು, ಸರ್ಕಾರ, ಜಿಲ್ಲಾಸ್ಪತ್ರೆ ವೈದ್ಯರು, ಜಿಲ್ಲಾಡಳಿತರ ವಿರುದ್ಧ ಹರಿಹಾಯ್ದಿದ್ದಾರೆ.

ಚಾಮರಾಜನಗರದ ಘಟನೆಯಿಂದ ಬಹಳ ನೋವಾಗಿದೆ. ಮೃತರ ಕುಟುಂಬಗಳಿಗೆ ಸಂತಾಪಗಳು. ರಾಜ್ಯದಲ್ಲಿ ಆಕ್ಸಿಜನ್​ ಸಿಗದೇ ಉಂಟಾಗಿರುವ ಸರಣಿ ಸಾವುಗಳ ಮುಂದುವರಿದ ಭಾಗವಿದು. ಈ ಸಾವಿಗೆ ಬಿಜೆಪಿ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು, ಜಿಲ್ಲಾಡಳಿತವೇ ನೇರ ಹೊಣೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿರೋದಕ್ಕೆ ಈ ಅಮಾನವೀಯ ಪ್ರಕರಣವೇ ಸಾಕ್ಷಿ. ಅಧಿಕಾರದ ಲಾಲಾಸೆಗೆ ಬಿಜೆಪಿ ಸರ್ಕಾರ ಇನ್ನಷ್ಟು ಜನರನ್ನು ಬಲಿ ಪಡೆಯುವುದು ಬೇಡ. ಜನರ ಜೀವ ರಕ್ಷಿಸಲು ಸಾಧ್ಯವಾಗದ ಇಂಥ ಸರ್ಕಾರ ಇರುವುದಕ್ಕಿಂತ ತೊಲಗುವುದೆ ಲೇಸು ಎಂದು ಕಿಡಿಕಾರಿದ್ದಾರೆ.

ಅಲ್ಲದೇ, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಆರೋಗ್ಯ ಸಚಿವ ಕೆ.ಸುಧಾಕರ್​ ಈ ಪ್ರಕರಣದ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಡಬೇಕು. ಹೈಕೋರ್ಟ್​​ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿ ಮೂಲಕ ಪ್ರಕರಣದ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. 

Latest News

ರಾಜ್ಯ

ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದಿದ್ದಕ್ಕಾಗಿ ಪ್ರಾಧ್ಯಾಪಕ ಅಮಾನತು!

ನಾವು ಸ್ವಯಂಪ್ರೇರಿತ ಕ್ರಮವನ್ನು ತೆಗೆದುಕೊಂಡಿದ್ದೇವೆ. ವಾಸ್ತವವಾಗಿ ಯಾರೂ ಇಲ್ಲದ ಕಾರಣ ವಿದ್ಯಾರ್ಥಿಯು ನಿಜವಾಗಿಯೂ ಆತಂಕಕ್ಕೊಳಗಾಗಿದ್ದಾನೆ.

ರಾಜಕೀಯ

ನೀವು ಬಡವರು ಎಂದು ಹೇಳಿಕೊಳ್ಳುತ್ತೀರಿ, ಆದ್ರೆ ನಾನು ಅಸ್ಪೃಶ್ಯರಲ್ಲಿ ಒಬ್ಬ : ಮಲ್ಲಿಕಾರ್ಜುನ ಖರ್ಗೆ

ನಾನು ಅಸ್ಪೃಶ್ಯರಲ್ಲಿ ಒಬ್ಬ. ಜನರು ನಿಮ್ಮ ಚಹಾವನ್ನು ಕುಡಿಯುತ್ತಿದ್ದರು,  ಆದರೆ ಯಾರೂ ನನ್ನ ಚಹಾವನ್ನು ಸೇವಿಸಲಿಲ್ಲ ಎಂದು ಖರ್ಗೆ ಅವರು ಪರೋಕ್ಷವಾಗಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.  

ರಾಜಕೀಯ

ಒಕ್ಕಲಿಗರಿಗೆ 4%-12% ಮೀಸಲಾತಿ ; ಇದು ಉತ್ತಮ ಬೇಡಿಕೆಯಾಗಿದೆ : ನಟ ಚೇತನ್

ಈ ಕುರಿತು ತಮ್ಮ ಫೇಸ್ಬುಕ್ ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಕರ್ನಾಟಕದ ಒಕ್ಕಲಿಗ ಲಾಬಿಗಳು ಒಕ್ಕಲಿಗರಿಗೆ 4% – 12% ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ.