ಪ್ರತಿಪಕ್ಷಗಳ ತಂತ್ರಗಾರಿಕೆ ಸಭೆ ಶಿಮ್ಲಾ ಬದಲಿಗೆ ಬೆಂಗಳೂರಿಗೆ ಶಿಫ್ಟ್..!

Bengaluru : ಇತ್ತೀಚೆಗೆ ಬಿಹಾರದ ಪಾಟ್ನಾದಲ್ಲಿ 17ಕ್ಕೂ ಹೆಚ್ಚು ಪ್ರತಿಪಕ್ಷಗಳು ಸಭೆ ನಡೆಸಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ (Opposition meeting in Bangalore) ವಿರುದ್ದ

ಒಗ್ಗೂಟ್ಟಿನಿಂದ ಹೋರಾಟ ನಡೆಸಲು ನಿರ್ಧರಿಸಿದ್ದವು. ಚುನಾವಣೆಗೆ ರೂಪಿಸಬೇಕಾದ ತಂತ್ರಗಾರಿಕೆ ಕುರಿತು ಮುಂದಿನ ಸಭೆಯನ್ನು ಹಿಮಾಚಲ ಪ್ರದೇಶದ ಸಿಮ್ಲಾದಲ್ಲಿ ನಡೆಸಲು ನಿರ್ಧರಿಸಲಾಗಿತ್ತು.

ಆದರೆ ಇದೀಗ ಸಿಮ್ಲಾದ (Shimla) ಬದಲಿಗೆ ಬೆಂಗಳೂರಿನಲ್ಲಿ ಆ ಸಭೆಯನ್ನು ನಡೆಸಲು ತೀರ್ಮಾನಿಸಲಾಗಿದೆ. ಪ್ರತಿಪಕ್ಷ ನಾಯಕರ ಮುಂದಿನ ಸಭೆಯನ್ನು ಶಿಮ್ಲಾದಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ

ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ (Opposition meeting in Bangalore) ಹೇಳಿದ್ದಾರೆ.

ಹಿಮಾಚಲ ಪ್ರದೇಶದ (Himachal Pradesh) ಹವಾಮಾನ ವೈಪರೀತ್ಯದಿಂದಾಗಿ ಪ್ರತಿಪಕ್ಷ ನಾಯಕರ ಮುಂದಿನ ಸಭೆಯನ್ನು ಶಿಮ್ಲಾದಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಎಂದು ರಾಷ್ಟ್ರೀಯವಾದಿ

ಕಾಂಗ್ರೆಸ್ (Congress) ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಗುರುವಾರ ಮಾಹಿತಿ ನೀಡಿದ್ದು, ಹಿಮಾಚಲ ಪ್ರದೇಶದಲ್ಲಿ ಚಾಲ್ತಿಯಲ್ಲಿರುವ ಆರ್ದ್ರ ಹವಾಮಾನ ಮತ್ತು ಭಾರೀ ಮಳೆಯ ಕಾರಣ,

ಸಭೆಯ ಸ್ಥಳವನ್ನು ಶಿಮ್ಲಾದಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಪ್ರತಿಪಕ್ಷಗಳ ಬೃಹತ್ ಸಭೆಯನ್ನು ಸ್ಥಳಾಂತರಿಸುವ ನಿರ್ಧಾರವನ್ನು ಗುರುವಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನು ಓದಿ: ಜೀವನಪೂರ್ತಿ ನಿದ್ರೆಯನ್ನು ಮಾಡದೆ ಎಚ್ಚರವಾಗಿಯೇ ಬದುಕಿದ್ದ ವ್ಯಕ್ತಿಯ ಬಗ್ಗೆ ಕೇಳಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ!

ಇನ್ನು 2024 ರಲ್ಲಿ ಬಿಜೆಪಿ ವಿರುದ್ಧ ಹೋರಾಡಲು ನಮ್ಮ ಆಯಾ ರಾಜ್ಯಗಳಲ್ಲಿ ಕೆಲಸ ಮಾಡುವಾಗ ಒಟ್ಟಾಗಿ ಮುನ್ನಡೆಯುವ ಮಾರ್ಗಸೂಚಿಯನ್ನು ರೂಪಿಸುವುದು ಪಾಟ್ನಾದ ನಂತರದ ಮುಂದಿನ ಪ್ರತಿಪಕ್ಷಗಳ

ಸಭೆಯ ಮೊದಲು ಅಜೆಂಡಾ ಎಂದು ಖರ್ಗೆ (Kharge) ಹೇಳಿದ್ದರೆ, ಈ ಸಭೆಯಲ್ಲಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೇಗೆ ಮುಂದುವರಿಯಬೇಕು ಎಂಬುದರ ಕುರಿತು ಭವಿಷ್ಯದ ಕ್ರಿಯಾ

ಯೋಜನೆಯನ್ನು ಚರ್ಚಿಸಲಾಗುವುದು. ರಾಜ್ಯಗಳಲ್ಲಿ ಕೋಮು ಉದ್ವಿಗ್ನತೆಯನ್ನು ಉಂಟುಮಾಡಲು ಅಧಿಕಾರವನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬುದರ ಕುರಿತು ಚರ್ಚೆಯು

ಕೇಂದ್ರೀಕೃತವಾಗಿರುತ್ತದೆ ಎಂದು ಪವಾರ್ ಹೇಳಿದ್ದಾರೆ.

ಇದಕ್ಕೂ ಮುನ್ನ ಬಿಹಾರದ ಪಾಟ್ನಾದಲ್ಲಿ ನಡೆದ ಉದ್ಘಾಟನಾ ಸಭೆಯಲ್ಲಿ, ಎನ್ಸಿಪಿಯ ಶರದ್ ಪವಾರ್, ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ ಯುನೈಟೆಡ್ (ಜೆಡಿಯು) ಮುಖ್ಯಸ್ಥ ನಿತೀಶ್ ಕುಮಾರ್

(Nitish Kumar) , ಕಾಂಗ್ರೆಸ್ನ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ (Rahul Gandhi) ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಸಮಾಜವಾದಿಯ ಪಕ್ಷದ ಅಖಿಲೇಶ್ ಯಾದವ್,

ಎಎಪಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ 17 ಪ್ರಮುಖ ವಿರೋಧ ಪಕ್ಷದ ನಾಯಕರು ಭಾಗಿಯಾಗಿದ್ದರು.

Exit mobile version