New Delhi : 14 ವಿರೋಧ ಪಕ್ಷಗಳು ಏಜೆನ್ಸಿಗಳಾದ ಸಿಬಿಐ (CBI) ಮತ್ತು ಜಾರಿ ನಿರ್ದೇಶನಾಲಯ ಬಿಜೆಪಿ (BJP) ವಿರುದ್ಧದ ಪಕ್ಷಗಳನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಮೊರೆ(opposition parties to sc) ಹೋಗಿರುವುದು ಇದೀಗ ಬೆಳಕಿಗೆ ಬಂದಿದೆ.
ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಯಂತಹ ಸಂಸ್ಥೆಗಳು ಬಿಜೆಪಿ ಪಕ್ಷದ ವಿರೋಧ ಪಕ್ಷಗಳನ್ನು ಮಾತ್ರ ಪ್ರತ್ಯೇಕವಾಗಿ ಗುರಿಯಾಗಿಸಿಕೊಂಡಿವೆ ಎಂದು ಪಕ್ಷಗಳು ಆರೋಪಿಸಿವೆ.
ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಆಡಳಿತರೂಢ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ 14 ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿವೆ.
ಏಪ್ರಿಲ್ 5 ರಂದು ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.
ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಯಂತಹ ಸಂಸ್ಥೆಗಳು ಬಿಜೆಪಿಯ ವಿರೋಧಿಗಳನ್ನು ಮಾತ್ರ ಗುರಿಯಾಗಿಸಿಕೊಂಡಿವೆ ಎಂದು ಪಕ್ಷಗಳು ಒತ್ತಿ ಹೇಳಿವೆ.
ಸರಣಿ ಆರೋಪಗಳನ್ನು ಎಸಗಿರುವ ಪಕ್ಷಗಳು, ಯಾರು ಬಿಜೆಪಿಗೆ ಸೇರುತ್ತಾರೋ ಆ ನಾಯಕರ ಮೇಲಿನ ಪ್ರಕರಣಗಳನ್ನು ತಕ್ಷಣವೇ ಕೈಬಿಡಲಾಗುತ್ತದೆ ಅಥವಾ ಅದನೆಲ್ಲಾ ಸಮಾಧಿ ಮಾಡಲಾಗುತ್ತದೆ ಎಂದು ಆರೋಪಿಸಿ ಹೇಳಿದ್ದಾರೆ.
ಈ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿದ್ದು, ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಹೇಳುವ ಮೂಲಕ ವಿಪಕ್ಷಗಳ ಇಂತ ಆರೋಪಗಳಿಗೆ ತಿರುಗೇಟು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (D.Y.Chandrachud) ನೇತೃತ್ವದ ನ್ಯಾಯಾಧೀಶರು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರ ಸಲ್ಲಿಕೆಯನ್ನು ಗಮನಿಸಿದ್ದಾರೆ.
ಎರಡು ವಾರಗಳಲ್ಲಿ ಈ ಪ್ರಕರಣವನ್ನು ಪಟ್ಟಿ ಮಾಡಿದರು. ಕೇಂದ್ರ ತನಿಖಾ ಸಂಸ್ಥೆಗಳು ಅನುಸರಿಸಬೇಕಾದ ಬಂಧನದ ಪೂರ್ವ ಮತ್ತು ನಂತರದ ಮಾರ್ಗಸೂಚಿಗಳನ್ನು ಸಹ ಪಕ್ಷಗಳು ಬಯಸುತ್ತಿವೆ ಎಂದು ಹೇಳಿದರು.
ಶೇ. 95% ಪ್ರಕರಣಗಳು ವಿರೋಧ ಪಕ್ಷದ ನಾಯಕರ ವಿರುದ್ಧ ಇವೆ ಎಂದು ನಾಯಕರು ಹೇಳಿದ್ದಾರೆ. ನಾವು ಬಂಧನ ಪೂರ್ವ ಮಾರ್ಗಸೂಚಿಗಳನ್ನು ಮತ್ತು ಬಂಧನದ ನಂತರದ (opposition parties to sc) ಮಾರ್ಗಸೂಚಿಗಳನ್ನು ಕೇಳುತ್ತಿದ್ದೇವೆ ಎಂದು ಶ್ರೀ ಸಿಂಘ್ವಿ ಹೇಳಿದ್ದಾರೆ.
ಇಂಡಿಯನ್ ನ್ಯಾಷನಲ್ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಜನತಾ ದಳ-ಯುನೈಟೆಡ್, ಭಾರತ್ ರಾಷ್ಟ್ರ ಸಮಿತಿ, ರಾಷ್ಟ್ರೀಯ ಜನತಾ ದಳ, ಸಮಾಜವಾದಿ ಪಕ್ಷ,
ಶಿವಸೇನೆ (ಉದ್ಧವ್ ಠಾಕ್ರೆ ಬಣ), ನ್ಯಾಷನಲ್ ಕಾನ್ಫರೆನ್ಸ್,(National Conference) ನ್ಯಾಶನಲಿಸ್ಟ್ ಪಕ್ಷಗಳು ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿವೆ.
ಎಡಪಕ್ಷಗಳು ಮತ್ತು ಡಿಎಂಕೆ ಕೂಡ ಸೇರಿವೆ ಎಂದು ಹೇಳಲಾಗಿದೆ.
ಎಎಪಿ ಮೂಲಗಳ ಪ್ರಕಾರ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಅವರು ಒಂದೇ ಪುಟದಲ್ಲಿ ಇಲ್ಲದ ಪಕ್ಷಗಳನ್ನು ಒಟ್ಟುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರದ ಉಪ ಮುಖ್ಯಮಂತ್ರಿಯಾಗಿದ್ದ ಮನೀಶ್ ಸಿಸೋಡಿಯಾ ಅವರನ್ನು ಕಳೆದ ತಿಂಗಳು ಸಿಬಿಐ ಮತ್ತು ನಂತರ ಇಡಿ ಬಂಧಿಸಿ,
ನಿರಂತರ ವಿಚಾರಣೆಗೆ ಒಳಪಡಿಸಿತು. ಈ ತನಿಖೆ ವೇಳೆ ಕೇಂದ್ರ ಸರ್ಕಾರ ಮತ್ತು ಆಡಳಿತರೂಢ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಅರವಿಂದ್ ಕೇಜ್ರಿವಾಲ್, ಅಧಿಕಾರ ಇದೆ ಎಂದು ಅನಗತ್ಯವಾಗಿ ನಮ್ಮನ್ನು ಗುರಿಯಾಗಿಸುತ್ತಿದ್ದೀರಿ ಎಂದು ಹೇಳಿದ್ದರು.