Bengaluru : ಸದಾ ಚಲನಶೀಲವಾಗಿ, ಸದಾ ಜನಸಾಮಾನ್ಯರ ಭಾವನೆಗಳಿಗೆ ಸ್ಪಂದಿಸುವಂತಹ ಕೆಲಸ ಮಾಡುವ ಭಾರತ (India) ದೇಶದ ಏಕೈಕ ರಾಜಕೀಯ (Political) ಪಕ್ಷವೆಂದರೇ ಅದು ನಮ್ಮ ಭಾರತೀಯ ಜನತಾ ಪಾರ್ಟಿ (BJP).
ದೇಶದ ಬೇರೆ ಯಾವ ಪಕ್ಷಗಳಲ್ಲಿಯೂ ಇಲ್ಲದ ಪ್ರಜಾಪ್ರಭುತ್ವ (Democracy) ನಮ್ಮ ಪಕ್ಷದಲ್ಲಿರುವುದು ವಿಶೇಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ(Bengaluru) ಮಾತನಾಡಿದ ಅವರು,
ರಾಜ್ಯದಲ್ಲಿನ ಇತರ ಹಿಂದುಳಿದ ವರ್ಗಗಳ ಮೀಸಲಾತಿ ಸಂಬಂಧಿಸಿದಂತೆ ಈಗಾಗಲೇ ಸಮಿತಿಗಳು ಮತ್ತು ಆಯೋಗಗಳು ಸಮಗ್ರ ಮಾಹಿತಿಯನ್ನು ಕಲೆ ಹಾಕುತ್ತಿದ್ದು, ಆ ಆಯೋಗಗಳು ಅಂತಿಮ ವರದಿ ಸಲ್ಲಿಸಿದ ನಂತರ, https://youtu.be/oJ9OkEQUMNg
ಯಾವ ಸಮುದಾಯಕ್ಕೂ ಅನ್ಯಾಯವಾಗದಂತೆ ಕಾನೂನಾತ್ಮಕವಾಗಿ ಮತ್ತು ಸಂವಿಧಾನಾತ್ಮಕವಾಗಿ (Our Party has more Democracy) ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ.
ಇದನ್ನೂ ಓದಿ : https://vijayatimes.com/floating-post-office-in-india/
ಬಿಜೆಪಿ ಎಂದೆಂದಿಗೂ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಎಲ್ಲಾ ವರ್ಗಗಳ ಅಭ್ಯುದಯಕ್ಕೆ ಬಿಜೆಪಿ ಸದಾ ಶ್ರಮಿಸುತ್ತದೆ ಎಂದಿದ್ದಾರೆ. ಇನ್ನು ರಾಜ್ಯ ಬಿಜೆಪಿ ಸರ್ಕಾರವು (State BJP Government)
ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿನಾಂಕ 1 ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಲು ಅನುಮೋದಿಸಿದೆ.
ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ 1,282.72 ಕೋಟಿ ರೂ. ಭರಿಸಲಿದೆ ಎಂದು ತಿಳಿಸಿದ್ದಾರೆ. ರಾಜ್ಯದ ಪರಿಶಿಷ್ಟ ಜಾತಿ(SC) ಮತ್ತು ಪರಿಶಿಷ್ಟ ಪಂಗಡ(ST) ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಜಸ್ಟಿಸ್ ನಾಗಮೋಹನ್ ದಾಸ್ ಸಮಿತಿಯ ವರದಿ ಅನುಷ್ಠಾನಕ್ಕೆ ನಿರ್ಧರಿಸಲಾಗಿದೆ.
ಇದನ್ನೂ ಓದಿ : https://vijayatimes.com/i-became-youth-being-with-rahul-gandhi/
ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15 ರಿಂದ ಶೇ. 17ಕ್ಕೆ ಹಾಗೂ ಪರಿಶಿಷ್ಟ ಪಂಗಡ (Our Party has more Democracy) ಮೀಸಲಾತಿಯನ್ನು ಶೇ. 3 ರಿಂದ ಶೇ.7 ಕ್ಕೆ ಏರಿಸಲು ನಿರ್ಣಯಿಸಲಾಗಿದೆ.
ಬಡವರ,ಶ್ರಮಿಕರ,ರೈತರ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದೆ.
ಸರ್ಕಾರದ ಯೋಜನೆಗಳು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಫಲಾನುಭವಿಗಳಿಗೆ ತಲುಪುವ ಉದ್ದೇಶದಿಂದ ಹಲವಾರು ಯೋಜನೆಗಳಲ್ಲಿ ನೇರ ನಗದು ಪಾವತಿಯನ್ನು ಜಾರಿಗೆ ತಂದ ಕೀರ್ತಿ ಕರ್ನಾಟಕ ಸರ್ಕಾರದ್ದಾಗಿದೆ ಎಂದು ತಿಳಿಸಿದ್ದಾರೆ.
- ಮಹೇಶ್.ಪಿ.ಎಚ್