ದೇಶದಲ್ಲಿ ಒಂದೇ ದಿನ 1.32 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆ

ಹೊಸದಿಲ್ಲಿ, ಜೂ. 02: ದೇಶದಲ್ಲಿ ದಿನದ ಕೊರೋನಾ ಸೋಂಕಿನ ಪ್ರಕರಣಗಳು ಇತ್ತೀಚೆಗೆ ಕಡಿಮೆಯಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,32,788 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.

ದೇಶದಲ್ಲಿ ಸದ್ಯ ಕೊರೊನಾ ಸೋಂಕಿತರ ಸಂಖ್ಯೆ 2,83,07,832ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 3,207  ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,35,102ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ 17,93,645 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,61,79,085 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,31,456 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Exit mobile version