ಕಳೆದ 24 ಗಂಟೆ ಅವಧಿಯಲ್ಲಿ 40,120 ಕೋವಿಡ್ ಪ್ರಕರಣಗಳು ದೃಢ

ನವದೆಹಲಿ, ಆ. 13: ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 40,120 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 585 ಸೊಂಕಿತರು ಮೃತಪಟ್ಟಿದ್ದಾರೆ. 42,295 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3,21,17,826ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 4,30,254 ತಲುಪಿದೆ. ಈವರೆಗೆ 3,13,02,345 ಸೋಂಕಿತರು ಗುಣಮುಖರಾಗಿದ್ದಾರೆ.

ಸದ್ಯ ದೇಶದಲ್ಲಿ 3,85,227 ಸಕ್ರಿಯ ಪ್ರಕರಣಗಳಿದ್ದು, ಇದು ಒಟ್ಟು ಪ್ರಕರಣಗಳ ಶೇ 1.20ರಷ್ಟಾಗಿದೆ. ಚೇತರಿಕೆ ಪ್ರಮಾಣ ಶೇ 97.46ರಷ್ಟಿದೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 2.04ರಷ್ಟಿದ್ದು, ವಾರದ ಪಾಸಿಟಿವಿಟಿ ಪ್ರಮಾಣ ಶೇ 2.13ರಷ್ಟಿದೆ. ಈವರೆಗೆ 52.95 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

Exit mobile version