‘ಐರಾವನ್’ ತಂಡದಿಂದ ಆಕ್ಸಿಜನ್ ಆಂಬುಲೆನ್ಸ್ ಸೇವೆ

ಆರೋಗ್ಯ ಭಾರತಿ ಮತ್ತು ಸೇವಾ ಭಾರತಿ ಸಹಯೋಗದಲ್ಲಿ ‘ಐರಾವನ್’ ಚಿತ್ರತಂಡ ಇದೀಗ ಸೇವೆಗೆ ಇಳಿದಿದೆ. ಚಿತ್ರದ ನಿರ್ಮಾಪಕ ಡಾ. ನಿರಂತರ್ ಗಣೇಶ್, ಚಿತ್ರ ನಾಯಕ ಜಯರಾಮ್ ಕಾರ್ತಿಕ್ (ಜೆಕೆ) ನಟ ನಟ ವಿವೇಕ್ ಆಕ್ಸಿಜನ್​ ವಾಹನವನ್ನು ಭಾನುವಾರ ಬ್ಯಾಟರಾಯನಪುರ ವ್ಯಾಪ್ತಿಗೆ ನೀಡಿದ್ದಾರೆ. ಅದರ ಜತೆಗೆ 10 ಸಾವಿರ ಕೋವಿಡ್ ಮೆಡಿಕಲ್ ಕಿಟ್, ಒಂದಷ್ಟು ಔಷಧಗಳನ್ನೂ ವಿತರಣೆ ಮಾಡಿದ್ದಾರೆ.

ಚಿತ್ರತಂಡದ ಈ ಸೇವಾಕಾರ್ಯಕ್ಕೆ ಆರೆಸ್ಸೆಸ್​ನ ಪ್ರಾದೇಶಿಕ ಜನರಲ್ ಸೆಕ್ರೆಟರಿ ಎನ್ ತಿಪ್ಪೇಸ್ವಾಮಿ, ಕರ್ನಾಟಕ ರಾಜ್ಯದ ಆರೋಗ್ಯ ಭಾರತಿಯ ಜಂಟಿ ಕಾರ್ಯದರ್ಶಿ ಗಂಗಾಧರನ್ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ನಿರ್ಮಾಪಕ ನಿರಂತರ್, ಇಂಥ ವಿಷಮ ಕಾಲಘಟ್ಟದಲ್ಲಿ ಸಮಾಜಕ್ಕೆ ನಾವು ಮಾಡಬೇಕಾದ ಜವಾಬ್ದಾರಿ ಇದು. ಎಲ್ಲೆಡೆ ಆ್ಯಂಬುಲನ್ಸ್ ಕೊರತೆ ಕಾಡುತ್ತಿದೆ. ಅದನ್ನೇ ಗಮನದಲ್ಲಿಟ್ಟುಕೊಂಡು ಬ್ಯಾಟರಾಯನಪುರ ವ್ಯಾಪ್ತಿಗೆ ಆಕ್ಸಿಜನ್ ಸಹಿತ ಆ್ಯಂಬುಲೆನ್ಸ್ ನೀಡಿದ್ದೇವೆ. ಇದರ ಜತೆಗೆ ಕೋವಿಡ್ ಮೆಡಿಕಲ್ ಕಿಟ್ ಅನ್ನೂ ವಿತರಣೆ ಮಾಡಿದ್ದೇವೆ. ಸೋಂಕಿನ ಲಕ್ಷಣ ಕಾಣುತ್ತಿದ್ದಂತೆ ಕಿಟ್​ನಲ್ಲಿ ನೀಡಿದ ಔಷಧಗಳನ್ನು ತೆಗೆದುಕೊಳ್ಳಬಹುದು. ಯಾವ್ಯಾವುದನ್ನು ಹೇಗೆ ತೆಗೆದುಕೊಳ್ಳಬೇಕು ಎಂಬ ಮಾಹಿತಿಯನ್ನೂ ನೀಡಿದ್ದೇವೆ ಎಂದಿದ್ದಾರೆ.

Latest News

ರಾಜಕೀಯ

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.

ದೇಶ-ವಿದೇಶ

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ದೇಶ-ವಿದೇಶ

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.

ರಾಜಕೀಯ

`ನನ್ನಲ್ಲೂ ದಾಖಲೆಗಳಿವೆ ; `ಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, 2, 3 ಆಗುತ್ತವೆ, ಬಿಚ್ಚಲೇ? : ಹೆಚ್.ಡಿಕೆ

ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್ ಮಾಡುವ ಅಶ್ವತ್ ನಾರಾಯಣ್, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ?