- ತೈಲ ಬೆಲೆ ಏರಿಕೆ ಹಾಗೂ ಯುದ್ಧ ಪರಿಣಾಮ ಎದುರಿಸಲು ಸಾರ್ವಜನಿಕ ಸಹಕಾರಕ್ಕೆ ಪ್ರಧಾನಿ ಮೋದಿ ಕರೆ
- ಒಂದು ವರ್ಷ ಚಿನ್ನ ಖರೀದಿ ನಿಲ್ಲಿಸಿ ದೇಶದ ಆರ್ಥಿಕತೆಗೆ ಬೆಂಬಲ ನೀಡುವಂತೆ ಜನತೆಗೆ ಮನವಿ
- ಜಾಗತಿಕ ಆರ್ಥಿಕ ಒತ್ತಡದ ನಡುವೆ ದೇಶದ ವಿದೇಶಿ ವಿನಿಮಯ ಉಳಿಸಲು ಹೊಸ ಸಂದೇಶ (P M Modi appeals the nation not to buy gold and reduce fuel use)
Hydrabad: ಜಾಗತಿಕ ಯುದ್ಧ ಪರಿಸ್ಥಿತಿ, ತೈಲ ಬೆಲೆ ಏರಿಕೆ ಹಾಗೂ ಪೂರೈಕೆ ಸರಪಳಿಯ ಅಡಚಣೆಗಳಿಂದ ವಿಶ್ವ ಆರ್ಥಿಕತೆ ಸಂಕಷ್ಟದಲ್ಲಿರುವ ಹಿನ್ನೆಲೆ, ದೇಶದ ಜನರು ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi )ಕರೆ ನೀಡಿದರು.
ಜೊತೆಗೆ ಮುಂದಿನ ಒಂದು ವರ್ಷದವರೆಗೆ ಚಿನ್ನ ಖರೀದಿಯನ್ನು ಸಾಧ್ಯವಾದಷ್ಟು ಕಡಿಮೆ ಮಾಡುವಂತೆ ಅವರು ಮನವಿ ಮಾಡಿದರು. (P M Modi appeals the nation not to buy gold and reduce fuel use)
ಸಿಕಂದರಾಬಾದ್‌ನ ಪರೇಡ್ ಮೈದಾನದಲ್ಲಿ ನಡೆದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ, ದೇಶದ ಆರ್ಥಿಕ ಸ್ಥಿರತೆಗೆ ಜನರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.

ಕೋವಿಡ್ ಬಳಿಕದ ಜಾಗತಿಕ ಆರ್ಥಿಕ ಕುಸಿತ, ವಿವಿಧ ರಾಷ್ಟ್ರಗಳ ನಡುವಿನ ಯುದ್ಧ ಪರಿಸ್ಥಿತಿ ಮತ್ತು ಕಚ್ಚಾ ತೈಲದ ಬೆಲೆ ಏರಿಕೆಯಿಂದ ಅನೇಕ ದೇಶಗಳು ಸಂಕಷ್ಟ ಎದುರಿಸುತ್ತಿವೆ ಎಂದು ಮೋದಿ ಹೇಳಿದರು.
ಇಂತಹ ಪರಿಸ್ಥಿತಿಯಲ್ಲಿ ಭಾರತವೂ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಆದರೆ ಕೇಂದ್ರ ಸರ್ಕಾರ ತೈಲ ಬೆಲೆಗಳ ಹೊರೆ ನೇರವಾಗಿ ಜನರ ಮೇಲೆ ಬೀಳದಂತೆ ವಿವಿಧ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ವಿವರಿಸಿದರು.
ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ವಿದ್ಯುತ್ ವಾಹನಗಳಿಗೆ ಉತ್ತೇಜನ ನೀಡಲಾಗುತ್ತಿದೆ.
ರೈಲ್ವೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಡೀಸೆಲ್ ಬಳಕೆಯನ್ನು ಕಡಿಮೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಇಂಧನ ಆಮದು ಕಡಿಮೆಯಾದರೆ ದೇಶದ ವಿದೇಶಿ ವಿನಿಮಯ ಸಂಗ್ರಹ ಹೆಚ್ಚಲು ಸಹಕಾರಿಯಾಗುತ್ತದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು.
ಚಿನ್ನದ ಆಮದು ದೇಶದ ಆರ್ಥಿಕತೆಗೆ ಹೆಚ್ಚಿನ ಒತ್ತಡವನ್ನುಂಟು ಮಾಡುತ್ತದೆ ಎಂದು ಹೇಳಿದ ಮೋದಿ, ಹಬ್ಬಗಳು ಹಾಗೂ ಶುಭ ಸಮಾರಂಭಗಳ ಸಂದರ್ಭದಲ್ಲಿಯೂ ಜನರು ಚಿನ್ನ ಖರೀದಿಯನ್ನು ಮಿತಿಗೊಳಿಸಬೇಕು ಎಂದು ಮನವಿ ಮಾಡಿದರು.
“ಒಂದು ವರ್ಷ ಚಿನ್ನ ಖರೀದಿಯನ್ನು ತಡೆಯೋಣ. ಇದರಿಂದ ದೇಶದ ವಿದೇಶಿ ವಿನಿಮಯ ಸಂಗ್ರಹ ಹೆಚ್ಚಾಗುತ್ತದೆ” ಎಂದು ಅವರು ಹೇಳಿದರು.
ರೈತರಿಗೆ ರಸಗೊಬ್ಬರ ಸಬ್ಸಿಡಿ ನೀಡುವ ಮೂಲಕ ಸರ್ಕಾರ ದೊಡ್ಡ ಮಟ್ಟದಲ್ಲಿ ನೆರವು ನೀಡುತ್ತಿದೆ ಎಂದು ಪ್ರಧಾನಿ ತಿಳಿಸಿದರು.
ಅನೇಕ ರಾಷ್ಟ್ರಗಳಲ್ಲಿ ಯೂರಿಯಾ ಚೀಲದ ಬೆಲೆ ಸಾವಿರಾರು ರೂಪಾಯಿಗಳಿದ್ದರೂ ಭಾರತದಲ್ಲಿ ಕೇಂದ್ರದ ಸಹಾಯಧನದಿಂದ ಕಡಿಮೆ ದರದಲ್ಲಿ ಲಭ್ಯವಾಗುತ್ತಿದೆ ಎಂದು ಅವರು ಹೇಳಿದರು.
ದೇಶದ ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಹೊರೆ ತಗ್ಗಿಸಲು ಸರ್ಕಾರ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ ಎಂಬುದನ್ನೂ ಪ್ರಧಾನಿ ಉಲ್ಲೇಖಿಸಿದರು.
ಇದೇ ವೇಳೆ ರಾಜಕೀಯ ವಿಚಾರಗಳ ಮೇಲೂ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಹಾಗೂ ಬಿಆರ್‌ಎಸ್ ಪಕ್ಷಗಳು ಕುಟುಂಬ ಆಧಾರಿತ ರಾಜಕಾರಣ ಮಾಡುತ್ತಿವೆ ಎಂದು ಆರೋಪಿಸಿದ ಅವರು,
ದೇಶದ ಜನರು ಈಗ ಅಭಿವೃದ್ಧಿ ಮತ್ತು ಸ್ಥಿರ ಆಡಳಿತ ಬಯಸುತ್ತಿದ್ದಾರೆ ಎಂದರು.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಾಧನೆಗೆ ಜನರು ನೀಡಿದ ಬೆಂಬಲವನ್ನು ಉಲ್ಲೇಖಿಸಿದ ಮೋದಿ, ತೆಲಂಗಾಣದಲ್ಲಿಯೂ ಬಿಜೆಪಿ ಸರ್ಕಾರ ರಚನೆಯ ವಿಶ್ವಾಸ ವ್ಯಕ್ತಪಡಿಸಿದರು.
ತೆಲಂಗಾಣ ರಾಜ್ಯಕ್ಕೆ ಜಹೀರಾಬಾದ್ ಕೈಗಾರಿಕಾ ಕಾರಿಡಾರ್ ಮತ್ತು ಪಿಎಂ ಮಿತ್ರ ಜವಳಿ ಪಾರ್ಕ್ ಮಂಜೂರಾಗಿರುವುದರಿಂದ
ಸಾವಿರಾರು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.
ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಕೈಗಾರಿಕಾ ಅಭಿವೃದ್ಧಿಯ ಪಾತ್ರ ಮಹತ್ವದ್ದಾಗಿದೆ ಎಂದು ಪ್ರಧಾನಿ ತಿಳಿಸಿದರು.
ಜನರ ಸಹಕಾರ, ಇಂಧನ ಉಳಿತಾಯ ಮತ್ತು ಸ್ವದೇಶಿ ಆರ್ಥಿಕ ಚಿಂತನೆಗಳಿಂದ ಭಾರತ ಮತ್ತಷ್ಟು ಬಲಿಷ್ಠ ರಾಷ್ಟ್ರವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನು ಓದಿ :https://vijayatimes.com/sensex-falls-1000-points-investors-anxiety-increases/