ನವದೆಹಲಿ, ಜೂ. 11: ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರ ಹೆಸರುಗಳನ್ನು ನಾಮನಿರ್ದೇಶನ ಮಾಡುವಂತೆ ಕೇಂದ್ರ ಸರ್ಕಾರ ನಾಗರಿಕರಿಗೆ ಮನವಿ ಮಾಡಿದೆ.
ಪ್ರಶಸ್ತಿಗೆ ಆನ್ಲೈನ್ ನಾಮನಿರ್ದೇಶನ ಅಥವಾ ಶಿಫಾರಸು ಮಾಡುವುದು ಮುಕ್ತವಾಗಿದ್ದು, ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ನಾಮನಿರ್ದೇಶನ ಮತ್ತು ಶಿಫಾರಸುಗಳನ್ನು https://padmaawards.gov.in. ಮೂಲಕವೇ ಸಲ್ಲಿಸಬೇಕು ಎಂದು ತಿಳಿಸಿದೆ.
ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮ ಶ್ರೀಗೆ ಆಯ್ಕೆಯಾದವರನ್ನು ಗಣರಾಜ್ಯೋತ್ಸವ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಎಲ್ಲ ನಾಗರಿಕರು ನಾಮನಿರ್ದೇಶನ ಮಾಡಬೇಕು. ನಾಗರಿಕರು ಸ್ವತಃ ತಮ್ಮ ಹೆಸರನ್ನು ಸಹ ನಾಮನಿರ್ದೇಶನ ಮಾಡಬಹುದು ಅಥವಾ ಯಾವುದೇ ವ್ಯಕ್ತಿಯ ಹೆಸರನ್ನು ಶಿಫಾರಸು ಮಾಡಬಹುದು ಎಂದು ಗೃಹ ಸಚಿವಾಲಯ ತಿಳಿಸಿದೆ.