2021ನೇ ಸಾಲಿನ “ಪದ್ಮ‌ ಪ್ರಶಸ್ತಿ” ಪ್ರಕಟ: ಕರ್ನಾಟಕದ ಐವರು ಸೇರಿದಂತೆ 119 ಮಂದಿಗೆ ಗೌರವ

ನವದೆಹಲಿ, ಜ. 27: ಕೇಂದ್ರ ಸರ್ಕಾರದ ವತಿಯಿಂದ ನೀಡಲಾಗುವ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಕರ್ನಾಟಕದ ಐವರು ಸೇರಿದಂತೆ ದೇಶದ 119 ಮಂದಿ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಕರ್ನಾಟಕದಿಂದ ಸಾಹಿತ್ಯ ಕ್ಷೇತ್ರದಿಂದ ಡಾ.ಚಂದ್ರಶೇಖರ ಕಂಬಾರ ಅವರಿಗೆ ಪದ್ಮ ಭೂಷಣ, ಆರೋಗ್ಯ ಕ್ಷೇತ್ರದಿಂದ ಡಾ.ಬಿ.ಎಂ. ಹೆಗ್ಡೆ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಉಳಿದಂತೆ ಕ್ರೀಡಾ ಕ್ಷೇತ್ರದಿಂದ ಕೆ.ವೈ. ವೆಂಕಟೇಶ್, ಕಲೆ ಮಾತಾ ಬಿ. ಮಂಜಮ್ಮ ಹಾಗೂ ಶಿಕ್ಷಣ ಕ್ಷೇತ್ರದಿಂದ ರಂಗಸ್ವಾಮಿ ಲಕ್ಷ್ಮೀ ನಾರಾಯಣ ಕಶ್ಯಪ್ ಅವರಿಗೆ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಅವರಿಗೆ ಈ ಗೌರವ ನೀಡಲಾಗುತ್ತದೆ. 2021ನೇ ಸಾಲಿನಲ್ಲಿ ಒಟ್ಟು 119 ಮಂದಿಯನ್ನು ಪದ್ಮಶ್ರೀ, ಪದ್ಮ ಭೂಷಣ, ಪದ್ಮ ವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಧಕರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ಅಲ್ಲದೇ, ಖ್ಯಾತ ಹಿನ್ನೆಲೆ ಗಾಯಕ ಎಸ್​.ಪಿ. ಬಾಲಸುಬ್ರಹ್ಮಣ್ಯ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ. ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಅವರಿಗೆ ಪದ್ಮ ವಿಭೂಷಣ ನೀಡಲಾಗಿದೆ. ಒಟ್ಟು 119 ಸಾಧಕರಿಗೆ ಪದ್ಮಶ್ರೀ, ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟ ಮಾಡಲಾಗಿದೆ.

Exit mobile version