ಪದ್ಮಶ್ರೀ ಪುರಸ್ಕೃತ ಪರಿಸರವಾದಿ ಪ್ರೊ. ರಾಧಾಮೋಹನ್ ನಿಧನ

ಭುವನೇಶ್ವರ, ಜೂ. 11: ಪದ್ಮಶ್ರೀ ಪುರಸ್ಕೃತ ಪರಿಸರವಾದಿ ಮತ್ತು ಒಡಿಶಾದ ಮಾಜಿ ಮಾಹಿತಿ ಆಯುಕ್ತ ಪ್ರೊ. ರಾಧಾಮೋಹನ್ (78) ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನ್ಯುಮೋನಿಯಾದಿಂದ ಬಳಲುತ್ತಿದ್ದ ರಾಧಾ ಮೋಹನ್ ಅವರಿಗೆ ಕೆಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಗಾಂಧಿವಾದಿ ರಾಧಾ ಮೋಹನ್ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಸಂತಾಪ ಸೂಚಿಸಿದ್ದಾರೆ.

ನಯಾಗಡ ಜಿಲ್ಲೆಯ ಪುಟ್ಟ ಹಳ್ಳಿಯೊಂದರಲ್ಲಿ 1943ರಲ್ಲಿ ಜನಿಸಿದ ರಾಧಾಮೋಹನ್ ಪುರಿಯ ಎಸ್‌ಸಿಎಸ್ ಕಾಲೇಜಿನಲ್ಲಿ ಅರ್ಥಶಾಸ್ತ್ರದಲ್ಲಿ ಪದವಿ ಪಡೆದು, ಅಪ್ಲೈಡ್ ಎಕನಾಮಿಕ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಪದವಿ ಕಲಿತ ಪುರಿಯ ಎಸ್‌ಸಿಎಸ್ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ ನಿವೃತ್ತಿಯಾದ ನಂತರ, ರಾಜ್ಯ ಸರ್ಕಾರ ಇವರನ್ನು ಮಾಹಿತಿ ಆಯುಕ್ತರನ್ನಾಗಿ ನೇಮಿಸಿತ್ತು. ಒಡಿಶಾದ ನಯಾಗಡ ಜಿಲ್ಲೆಯಲ್ಲಿರುವ ಬರಡು ಭೂಮಿಯನ್ನು ಮೂವತ್ತು ವರ್ಷಗಳ ಕಾಲ ಹಸಿರಾಗಿಸಿದ ಪ್ರೊ. ರಾಧಾ ಮೋಹನ್ ಮತ್ತು ಅವರ ಪುತ್ರಿ ಸಬರಮತಿ ಇಬ್ಬರಿಗೂ ಕಳೆದ ವರ್ಷ ಭಾರತದ ಸರ್ಕಾರ ‘ಪದ್ಮಶ್ರೀ‘ ಪ್ರಶಸ್ತಿ ನೀಡಿ ಗೌರವಿಸಿತ್ತು.

ರಾಧಾ ಮೋಹನ್ ಅವರು ಪರಿಸರ ಸೇವೆಯನ್ನು ಗೌರವಿಸಿದ ವಿಶ್ವ ಸಂಸ್ಥೆ (ಯುಎನ್‌ಇಪಿ) ‘ದಿ ಗ್ಲೋಬಲ್ ರೋಲ್ ಆಫ್ ಆನರ್’ ನೀಡಿ ಗೌರವಿಸಿತ್ತು. ಒಡಿಶಾ ಸರ್ಕಾರ ಪ್ರೊಫೆಸರ್ ಅವರ ಅತ್ಯುತ್ತಮ ಸಾಮಾಜಿಕ ಸೇವೆಗಾಗಿ ‘ಉಟ್ಕಲ್ ಸೇವಾ ಸಮ್ಮಾನ್‘ ಪ್ರಶಸ್ತಿ ನೀಡಿ ಗೌರವಿಸಿತ್ತು.

Latest News

ದೇಶ-ವಿದೇಶ

“ನಮ್ಮ ಮೆಸ್ ಊಟವನ್ನು ಪ್ರಾಣಿಗಳೂ ಸಹ ತಿನ್ನಲು ಸಾಧ್ಯವಿಲ್ಲ”; ಕಣ್ಣೀರಿಟ್ಟ ಪೇದೆ, ವೀಡಿಯೋ ವೈರಲ್

ಅಷ್ಟೇ ಅಲ್ಲದೇ ನನ್ನನ್ನು ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ದಾರಿಹೋಕರ ಬಳಿ ಮನೋಜ್ ಕುಮಾರ್ ಅಳಲು ತೋಡಿಕೊಂಡಿದ್ದಾರೆ.

ದೇಶ-ವಿದೇಶ

ರೇಷನ್ ಕಾರ್ಡ್ ಹೊಂದಿರುವ ಬಡವರಿಗೆ ರಾಷ್ಟ್ರಧ್ವಜ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ : ರಾಹುಲ್ ಗಾಂಧಿ

ಇದು ಬಿಜೆಪಿ ಸರ್ಕಾರದ ಪ್ರಚಾರ ಪಿತೂರಿ. ಈ ರೀತಿ ಮಾಡುವ ಮೂಲಕ ಬಿಜೆಪಿಯು “ರಾಷ್ಟ್ರೀಯತೆ”ಯನ್ನು ಮಾರಾಟ ಮಾಡುತ್ತಿದೆ ಮತ್ತು ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ.

ರಾಜಕೀಯ

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.

ದೇಶ-ವಿದೇಶ

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.