ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದಿಗೆ ತಡೆನೀಡಿದ ಪಾಕ್ ಸರ್ಕಾರ

ಇಸ್ಲಾಮಾಬಾದ್, ಏ. 05: ಸದ್ಯ ಎರಡೂ ದೇಶಗಳ ನಡುವೆ ಇರುವ ಪರಿಸ್ಥಿತಿಯಲ್ಲಿ ಭಾರತದ ಜತೆ ಯಾವುದೇ ವ್ಯಾಪಾರ-ವಹಿವಾಟು ನಡೆಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಕುರಿತು ತಮ್ಮ ಸಚಿವ ಸಂಪುಟದ ಜತೆ ಸಮಾಲೋಚನೆ ನಡೆಸಿದ ನಂತರ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ದೇಶದ ವಿವಿಧ ವಲಯಗಳನ್ನು ಆರ್ಥಿಕ ಪುನರುತ್ಥಾನ ಕೈಗೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ದೀರ್ಘ ಸಮಾಲೋಚನೆ ನಡೆಸಿದ ಇಮ್ರಾನ್ ಖಾನ್, ಅಗತ್ಯ ವಸ್ತುಗಳನ್ನು ಕಡಿಮೆ ಬೆಲೆಗೆ ಆಮದು ಮಾಡಿಕೊಳ್ಳುವ ಚಿಂತನೆ ನಡೆಸಿದ್ದಾರೆ ಎಂದು ದಿ ಡಾನ್ ಪತ್ರಿಕೆ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮ್ಮದ್ ಖುರೇಶಿ, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಭಾರತ ರದ್ದುಗೊಳಿಸಿದೆ. ಭಾರತ ತನ್ನ ಈ ಕ್ರಮವನ್ನು ರದ್ದುಗೊಳಿಸುವವರೆಗೂ ಭಾರತದ ಜತೆಗಿನ ವ್ಯಾಪಾರ ಮತ್ತು ವಹಿವಾಟು ನಡೆಸುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Exit mobile version