Islamabad: ಹೊಸ ವರ್ಷದ ಸಂಭ್ರಮಾಚರಣೆಗೆ #newyearcelebration ಪಾಕಿಸ್ತಾನದಲ್ಲಿ ನಿಷೇಧ ಹೇರಿಲಾಗಿದ್ದು, ಇಡೀ ದೇಶದಾದ್ಯಂತ ಯಾವುದೇ ರೀತಿಯ ಸಂಭ್ರಮಾಚರಣೆ ಮಾಡದಂತೆ ಜನತೆಗೆ ಸೂಚನೆ ನೀಡಲಾಗಿದೆ. ಈ ಕುರಿತು ಘೋಷಣೆ ಮಾಡಿರುವ ಪಾಕಿಸ್ತಾನದ ನಿಯೋಜಿತ ಪ್ರಧಾನಿ ಅನ್ವಾರುಲ್ ಹಕ್ ಕಾಕರ್, ಇಸ್ರೇಲ್ ಮತ್ತು ಹಮಾಸ್ (Israel and Hamas) ನಡುವಿನ ಯುದ್ದದಿಂದಾಗಿ ಗಾಜಾದಲ್ಲಿರುವ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಗಾಜಾ (Gaza)ದಲ್ಲಿರುವ ಮುಗ್ದ ಜನರಿಗೆ ಬೆಂಬಲ ವ್ಯಕ್ತಪಡಿಸಲು ಮತ್ತು ಅವರ ನೋವಿನಲ್ಲಿ ನಾವೆಲ್ಲರೂ ಭಾಗಿಯಾಗುವ ಉದ್ದೇಶದಿಂದ ಹೊಸ ವರ್ಷದ ಸಂಭ್ರಮಾಚರಣೆಗೆ ನಿಷೇಧ ಹೇರಿದ್ದೇವೆ ಎಂದಿದ್ದಾರೆ. ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ಸಂಕ್ಷಿಪ್ತ ಭಾಷಣದಲ್ಲಿ, ಪ್ರಧಾನಿ ಅನ್ವಾರುಲ್ ಹಕ್ ಕಾಕರ್ (Anwarul Haque Kakar) ಅವರು, ಪ್ಯಾಲೆಸ್ತೀನ್ನಲ್ಲಿನ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮತ್ತು ನಮ್ಮ ಪ್ಯಾಲೆಸ್ತೀನ್ (Palestine) ಸಹೋದರ ಸಹೋದರಿಯರೊಂದಿಗೆ ಒಗ್ಗಟ್ಟು ಪ್ರದರ್ಶಿಸಲು, ಹೊಸ ವರ್ಷಕ್ಕೆ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ನಡೆಸದಂತೆ ಸರ್ಕಾರವು ಕಟ್ಟುನಿಟ್ಟಾದ ನಿಷೇಧವನ್ನು ವಿಧಿಸುತ್ತದೆ.
ಅಕ್ಟೋಬರ್ (October) 7 ರಂದು ಇಸ್ರೇಲಿ ಬಾಂಬ್ ದಾಳಿ ಪ್ರಾರಂಭವಾದಾಗಿನಿಂದ ಸುಮಾರು 9,000 ಮಕ್ಕಳೊಂದಿಗೆ ಹಿಂಸಾಚಾರ ಮತ್ತು ಅನ್ಯಾಯದ ಎಲ್ಲಾ ಮಿತಿಗಳನ್ನು ಇಸ್ರೇಲ್ ದಾಟಿದೆ. ಇಸ್ರೇಲಿ ಪಡೆಗಳಿಂದ ಇದುವರೆಗೆ 21,000 ಪ್ಯಾಲೆಸ್ಟೀನಿಯನ್ನರು ಕೊಲ್ಲಲ್ಪಟ್ಟಿದ್ದಾರೆ. ಇಡೀ ಪಾಕಿಸ್ತಾನ (Pakistan) ರಾಷ್ಟ್ರ ಮತ್ತು ಮುಸ್ಲಿಂ ಜಗತ್ತು ಗಾಜಾದಲ್ಲಿನ ಮುಗ್ಧ ಮಕ್ಕಳ ಹತ್ಯಾಕಾಂಡ ಮತ್ತು ನಿರಾಯುಧ ಪ್ಯಾಲೆಸ್ಟೀನಿಯನ್ನರ ನರಮೇಧದ ಬಗ್ಗೆ ಸಂಪೂರ್ಣ ದುಃಖದಲ್ಲಿದೆ.
ಇನ್ನು ಪ್ಯಾಲೆಸ್ತೀನ್ಗೆ ಸಕಾಲಿಕ ನೆರವು ನೀಡಲು ಮತ್ತು ಗಾಜಾದಲ್ಲಿರುವ ಗಾಯಾಳುಗಳನ್ನು ಸ್ಥಳಾಂತರಿಸಲು ಪಾಕಿಸ್ತಾನವು ಜೋರ್ಡಾನ್ (Jordan) ಮತ್ತು ಈಜಿಪ್ಟ್ನೊಂದಿಗೆ ಮಾತುಕತೆ ನಡೆಸುತ್ತಿದೆ. ಪಾಕಿಸ್ತಾನವು (Pakistan) ವಿವಿಧ ಜಾಗತಿಕ ವೇದಿಕೆಗಳಲ್ಲಿ ಪ್ಯಾಲೇಸ್ಟಿನಿಯನ್ ಜನರ ದುಃಸ್ಥಿತಿಯನ್ನು ಎತ್ತಿ ತೋರಿಸಲು ಪ್ರಯತ್ನಿಸಿದೆ ಮತ್ತು ಇಸ್ರೇಲಿ ರಕ್ತಪಾತವನ್ನು ತಡೆಯಲು ಭವಿಷ್ಯದಲ್ಲಿಯೂ ಇದನ್ನು ಮುಂದುವರಿಸುತ್ತದೆ. ನಾವು ಜಾಗತಿಕ ಮುಸ್ಲಿಂ (Muslim) ಸಮುದಾಯ ಈ ಬಗ್ಗೆ ಹೆಚ್ಚಿನ ನಿಗಾವಹಿಸಬೇಕೆಂದು ಇಚ್ಚಿಸುತ್ತೇವೆ ಎಂದು ಪಾಕಿಸ್ತಾನದ ಪ್ರಧಾನಿ ಹೇಳಿದ್ದಾರೆ.