- ಭಾರತದಲ್ಲಿ ಪಾಕಿಸ್ತಾನ ಸರ್ಕಾರದ ಅಧಿಕೃತ ಎಕ್ಸ್ ಅಕೌಂಟ್ ಬ್ಯಾನ್ (Pakistan government official X account ban)
- ಪಹಲ್ಗಾಮ್ ದಾಳಿಗೆ ಪಾಕಿಸ್ತಾನದ ವಿರುದ್ಧ ಭಾರತದ ಪ್ರತೀಕಾರದ ಕ್ರಮ
- ಭಾರತದಲ್ಲಿ ಪಾಕಿಸ್ತಾನದ ಸರ್ಕಾದ ಎಕ್ಸ್ ಖಾತೆ ಚಟುವಟಿಕೆ ನಿಷೇಧ
New delhi: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ (Pahalgam Attack) ಪಾಕ್ (Pakistan) ವಿರುದ್ಧ ತಿರುಗಿಬಿದ್ದಿರುವ ಭಾರತ, ಪಾಕಿಸ್ತಾನ ಸರ್ಕಾರದ ಎಕ್ಸ್ (Govt Ex) ಖಾತೆಯನ್ನು ಭಾರತದಲ್ಲಿ ಸ್ಥಗಿತಗೊಳಿಸಿದೆ.ಬುಧವಾರ ನಡೆದ ಸಿಸಿಎಸ್ ಸಭೆಯಲ್ಲಿ ಉಗ್ರರ ದಾಳಿಗೆ (Attack by terrorists) ಪ್ರತಿಯಾಗಿ, ಸಿಂಧೂ ಜಲ ಒಪ್ಪಂದವನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸುವುದು ಸೇರಿದಂತೆ ಪಾಕಿಸ್ತಾನದ ವಿರುದ್ಧ ಭಾರತ ಹಲವಾರು ಕ್ರಮಗಳನ್ನು ಕೈಗೊಂಡಿತ್ತು. ಇದಾದ ಬಳಿಕ ಈಗ ಪಾಕ್ ಸರ್ಕಾರದ ಎಕ್ಸ್ ಖಾತೆಯನ್ನು ಭಾರತ ಸ್ಥಗಿತಗೊಳಿಸಿದೆ.
ಪಾಕಿಸ್ತಾನಿ ಪ್ರಜೆಗಳಿಗೆ ಸಾರ್ಕ್ ವೀಸಾ ವಿನಾಯಿತಿ (SAARC Visa Exemption) ಯೋಜನೆಯನ್ನು ಬುಧವಾರ ಭಾರತ ಸ್ಥಗಿತಗೊಳಿಸಿತ್ತು. ಇದರ ಅಡಿ ಪಾಕಿಸ್ತಾನಿ ನಾಗರಿಕರಿಗೆ (Pakistani citizens) ನೀಡಲಾದ ಯಾವುದೇ ಅಸ್ತಿತ್ವದಲ್ಲಿರುವ ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ.
48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಪಾಕ್ ಪ್ರಜೆಗಳಿಗೆ ಸೂಚಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್‌ನ್ನು (Attari Border) ತಕ್ಷಣದಿಂದ ಮುಚ್ಚಲು ಆದೇಶಿಸಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ (Vikram Mistry) ತಿಳಿಸಿದ್ದರು.ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ, ಭಾರತವು ಪಾಕಿಸ್ತಾನ ವಿರುದ್ಧ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ.

ಈ ಕುರಿತು ನಿನ್ನೆ ಸಂಜೆ ಮಾಹಿತಿ ನೀಡಿದ್ದ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ (Vikram Mishri) ,ಭಾರತ ಮತ್ತು ಪಾಕಿಸ್ತಾನದ ರಾಯಭಾರಿ ಕಚೇರಿಗಳಲ್ಲಿನ ಸಿಬ್ಬಂದಿ ಸಂಖ್ಯೆಯನ್ನು 55 ರಿಂದ 30ಕ್ಕೆ ಇಳಿಸುವ ನಿರ್ಧಾರ ಪ್ರಕಟಿಸಿದ್ದರು. ಈ ಪ್ರಕ್ರಿಯೆ ಮೇ 1ರೊಳಗೆ ಪೂರ್ಣಗೊಳ್ಳಲಿದೆ ಎಂದೂ ಮಿಶ್ರಿ ಸ್ಪಷ್ಟಪಡಸಿದ್ದರು.
ಅದೇ ರೀತಿ ಭಾರತವು ಪಾಕಿಸ್ತಾನದ ರಾಯಭಾರಿ ಕಚೇರಿಯಿಂದ ರಕ್ಷಣಾ (India seeks protection from Pakistan embassy) , ನೌಕಾ ಮತ್ತು ವಾಯು ಸಲಹೆಗಾರರನ್ನು ಹೊರಹಾಕಿ ಆದೇಶ ಹೊರಡಿಸಿದೆ. ಅವರನ್ನು ಬೇಡವಾದ ವ್ಯಕ್ತಿಗಳು (persona non grata) ಎಂದು ಘೋಷಿಸಿರುವ ಭಾರತ, ಒಂದು ವಾರದೊಳಗೆ ದೇಶ ತೊರೆಯುವಂತೆ ಸೂಚನೆ ನೀಡಿದೆ.
ಇನ್ನು ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾಗುತ್ತಿದ್ದ SAARC ವೀಸಾ ವಿನಾಯಿತಿ ಯೋಜನೆಯನ್ನು ಭಾರತವು ರದ್ದು ಮಾಡಿದೆ. ಈ ಯೋಜನೆಯಡಿ ನೀಡಲಾದ ವೀಸಾಗಳನ್ನು ತಕ್ಷಣದಿಂದಲೇ ರದ್ದು ಮಾಡಲಾಗಿದೆ. ಇದಕ್ಕೆ ಪೂರಕವಾಗಿ ಭಾರತ ಮತ್ತು ಪಾಕಿಸ್ತಾನದ (India and Pakistan) ನಡುವಿನ ಅಟ್ಟಾರಿ ಚೆಕ್ ಪೋಸ್ಟ್‌ನ್ನು ಮುಚ್ಚಲಾಗಿದೆ. ಅಲ್ಲದೇ ಅಧಿಕೃತ ದಾಖಲೆಗಳೊಂದಿಗೆ ಭಾರತಕ್ಕೆ ಬಂದಿರುವ ಪಾಕಿಸ್ತಾನಿ ಪ್ರಜೆಗಳು (Pakistani citizens) , ಮೇ 1ರ ಗಡುವಿನ ಮೊದಲು ಸ್ವದೇಶಕ್ಕೆ ಮರಳಬೇಕು ಎಂದು ಆದೇಶ ಹೊರಡಿಸಲಾಗಿದೆ.
ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸುವವರೆಗೆ ಒಪ್ಪಂದವು ಅಮಾನತ್ತಿನಲ್ಲಿರುತ್ತದೆ (Pakistan government official X account ban) ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ (Foreign Secretary Vikram Misri) ಸ್ಪಷ್ಟಪಡಿಸಿದ್ದಾರೆ.