ವಿಧಾನಸೌಧದೊಳಗೆ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ‌ ಕೂಗಿದ್ದ ಮೊಹಮ್ಮದ್ ಶಫಿ ನಾಶಿಪುಡಿ ಸೇರಿ 3 ಬಂಧನ; ಕುಟುಂಬಸ್ಥರ ಕಣ್ಣೀರು.

Bengaluru: ನಾಸಿರ್‌ ಹುಸೇನ್‌ (Nasir Hussain) ಅವರು ರಾಜ್ಯಸಭಾ ಸದಸ್ಯರಾಗಿ (Pakistan Zindabad slogan Case) ಆಯ್ಕೆಯಾಗಿದ್ದ ವೇಳೆ ವಿಧಾನಸೌಧದಲ್ಲಿ

ಪಾಕಿಸ್ತಾನ ಜಿಂದಾಬಾದ್ (Pakistan Zindabad slogans) ಘೋಷಣೆ ಕೂಗಿದ್ದ ದೇಶದ್ರೋಹದ ಪ್ರಕರಣಕ್ಕೆ (Sedition Case) ಸಂಬಂಧಪಟ್ಟಂತೆ ಮೂವರು

ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಎಫ್‌ಎಸ್‌ಎಲ್‌ ವರದಿಯಲ್ಲಿ ದೃಢವಾದ ಬಳಿಕ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ವಿಧಾನಸೌಧ ಪೊಲೀಸರು

ಮೂವರನ್ನು ವಶಕ್ಕೆ ಪಡೆದುಕೊಂಡಿದ್ದು, ಅಶೋಕನಗರ ಪೊಲೀಸ್ (Pakistan Zindabad slogan Case) ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಇಲ್ತಾಜ್, ಮುನಾವರ್ ಹಾಗೂ ಮೊಹಮದ್ ಶಫಿ ನಾಶಿ ಪುಡಿ ಬಂಧಿತರು ಎನ್ನಲಾಗಿದೆ. ದೆಹಲಿ ಮೂಲದ ಇಲ್ತಾಜ್, ಆರ್‌.ಟಿ. ನಗರದ (R T Nagar) ಮುನಾವರ್ ಹಾಗೂ

ಮೊಹಮ್ಮದ್ ಶಫಿ ನಾಶಿ ಪುಡಿ ಬ್ಯಾಡಗಿಯವನಾಗಿದ್ದಾನೆ. ಹೀಗಾಗಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿರುವ ನಾಶಿಪುಡಿ ಮನೆಯಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರು ಕಣ್ಣೀರು

ಹಾಕುತ್ತಿರುವುದು (Pakistan Zindabad slogan Case) ಕಂಡು ಬಂದಿದೆ.

ಮನೆಯಿಂದ ಹೊರಗೆ ಬಾರದ ಕುಟುಂಬ ಸದಸ್ಯರು, ಗೇಟ್‌ಗೆ ಬೀಗ ಹಾಕಿಕೊಂಡು ಮನೆಯ ಒಳಗಡೆ ಇರುವುದು ಕಂಡುಬಂದಿದ್ದು, ಮನೆಯ ಲೈಟ್ ಆಫ್ ಮಾಡಿಕೊಂಡು ಕುಟುಂಬದಲ್ಲಿ

ಸದಸ್ಯರು ಕತ್ತಲೆಯಲ್ಲಿ ಕುಳಿತಿದ್ದಾರೆ. ಸಹೋದರ ಬಂಧನ ವಿಚಾರ ತಿಳಿದು ನಾಶಿಪುಡಿ ಸಹೋದರಿ ಕಣ್ಣೀರು ಹಾಕಿದ್ದಾರೆ.

ಏನಿದು ಘಟನೆ?
ಫೆ. 27ರಂದು ರಾಜ್ಯಸಭಾ ಚುನಾವಣೆಯ (Rajya Sabha Election) ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್‌ (Congress) ಕಾರ್ಯಕರ್ತರ ಸಂತಸ ಮುಗಿಲು ಮುಟ್ಟಿತ್ತು.

ಗೆಲುವು ಸಾಧಿಸಿದ ಕಾಂಗ್ರೆಸ್‌ನ ಮೂವರು ಸದಸ್ಯರ ಪೈಕಿ ನಾಸಿರ್ ಹುಸೇನ್ ಬೆಂಬಲಿಗರು ಶತ್ರು ರಾಷ್ಟ್ರ ಪಾಕಿಸ್ತಾನ ಪರ ಜೈಕಾರ ಕೂಗಿ ಉದ್ಧಟತನ ಮೆರೆದಿದ್ದರು. ಭಾರತದ

ಸೌರ್ವಭೌಮತ್ವವನ್ನು ಧಿಕ್ಕರಿಸಿ ಪಾಕ್‌ ಪರ ಘೋಷಣೆ ಕೂಗಿರುವ ಬಗ್ಗೆ ರಾಜ್ಯ ಸೇರಿ ದೇಶಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗಿದ್ದವು.

ಇಂಥದ್ದೊಂದು ಕೃತ್ಯ, ಅಕ್ಷಮ್ಯ ಅಪರಾಧ ವಿಧಾನಸೌಧದೊಳಗೆ (Vidhanasoudha) ನಡೆದಿತ್ತು. ಇದಕ್ಕೆ ಬಿಜೆಪಿ ಸೇರಿದಂತೆ ನಾಗರಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದ್ದಲ್ಲದೆ,

ಆರೋಪಿಗಳ ಬಂಧನಕ್ಕೆ ಒತ್ತಾಯಗಳು ಕೇಳಿಬಂದಿದ್ದವು.

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಂದು ಆರೋಪಿಸಲಾದ ಪ್ರಕರಣದ ವಿಡಿಯೋಗಳು ಅಸಲಿ ಎಂಬುದನ್ನು ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು

ಖಚಿತಪಡಿಸಿದ್ದಾರೆ ಎಂಬುದು ಗೊತ್ತಾಗಿದೆ. ಮಾಧ್ಯಮಗಳಲ್ಲಿಪ್ರಸಾರವಾಗಿದ್ದ ಹಾಗೂ ಘಟನಾ ಸ್ಥಳದಲ್ಲಿದ್ದವರು ಚಿತ್ರೀಕರಿಸಿದ್ದ ವಿಡಿಯೊಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ವೈಜ್ಞಾನಿಕವಾಗಿ ಪರೀಕ್ಷೆ ನಡೆಸಿದ್ದ ತಜ್ಞರು, ಎಲ್ಲವಿಡಿಯೊಗಳು ಅಸಲಿ ಎಂಬುದಾಗಿ ಪೊಲೀಸರಿಗೆ ವರದಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Exit mobile version