ಸಿಎಂ ಸಿದ್ದರಾಮಯ್ಯ ಅವರಿಂದ 148 ಪಲ್ಲಕ್ಕಿ ಬಸ್​ಗಳಿಗೆ ಚಾಲನೆ: ಪಲ್ಲಕ್ಕಿ ವೈಶಿಷ್ಟ್ಯತೆಗಳು ಏನು

Bengaluru: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಿಧಾನಸೌಧದ ಮುಂಭಾಗದಲ್ಲಿ ಪಲ್ಲಕ್ಕಿ ಬಸ್​ಗಳಿಗೆ (Pallakki Bus) ಅಧಿಕೃತವಾಗಿ ಚಾಲನೆ ನೀಡಿದರು. ಕೆಎಸ್​ಆರ್​ಟಿಸಿಯಲ್ಲಿ ಇಂದಿನಿಂದ ಪಲ್ಲಕ್ಕಿ ಉತ್ಸವ ಆರಂಭವಾಗಲಿದ್ದು, ಒಟ್ಟು 148 ಬಸ್​ಗಳಿಗೆ ಚಾಲನೆ ನೀಡಲಾಗಿದೆ.

148 ಬಸ್​ಗಳ ಪೈಕಿ 40 ನಾನ್ ಎಸಿ ಸ್ಲೀಪರ್ (Non A/C Sleeper) ಬಸ್​ಗಳಾಗಿದ್ದು, ಈ ಬಸ್​ಗಳನ್ನು ಹೊರತು ಪಡಿಸಿ ಉಳಿದ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಇರಲಿದೆ.

100 ನಗರ ಸಾರಿಗೆ ಬಸ್ಸುಗಳು ಅಶೋಕ ಲೇಲ್ಯಾಂಡ್ ಕಂಪನಿಗೆ ಸೇರಿದ್ದು, ನಾಲ್ಕು ನಾನ್ ಎಸಿ ಸ್ಲೀಪರ್(A/C Sleeper) , ನಾಲ್ಕು ಎಸಿ ಸ್ಲೀಪರ್ ಬಸ್​ಗಳು ಟಾಟಾ ಕಂಪನಿಯದ್ದಾಗಿವೆ. ಈ ಪೈಕಿ 44 ಎಸಿ ಸ್ಲೀಪರ್, ನಾಲ್ಕು ನಾನ್ ಎಸಿ ಸ್ಲೀಪರ್ ಬಸ್​ಗಳನ್ನು ಹೊರತುಪಡಿಸಿ ಉಳಿದ 100 ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ.

ಪಲ್ಲಕ್ಕಿ ವಿಶೇಷತೆ:

  1. ಹೈಟೆಕ್ ವಿನ್ಯಾಸದ 30 ಸ್ಲೀಪರ್ ಬರ್ತ್ ಸೀಟ್​ಗಳು
  2. 11.3 ಮೀಟರ್(Meter) ಉದ್ದದ ನಾನ್ ಎಸಿ ಬಸ್
  3. ಬಿಎಸ್-6 ತಂತ್ರಜ್ಞಾನದ ಮಾದರಿಯ ಹೆಚ್.ಪಿ. ಇಂಜಿನ್(H.P.Engine)
  4. ಪ್ರತಿ ಸೀಟಿಗೆ ಮೊಬೈಲ್ ಹಾಗೂ ಲ್ಯಾಪ್ ಟಾಪ್​ಗಳ ಚಾರ್ಜಿಂಗ್ ಹಾಗೂ ಮೊಬೈಲ್ ಸ್ಟ್ಯಾಂಡ್ (Mobile Stand) ವ್ಯವಸ್ಥೆ
  5. ಸೀಟ್ ನಂಬರ್ ಮೇಲೆ ಎಲ್​ಇಡಿ ಅಳವಡಿಕೆ
  6. ಓದಲು ಉತ್ತಮ ಬೆಳಕಿನ ಎಲ್​ಇಡಿ ಲೈಟ್ ಅಳವಡಿಕೆ
    7.ಪ್ರತಿ ಪ್ರಯಾಣಿಕರಿಗೆ ಚಪ್ಪಳಿ‌ ಇಡಲು ಸ್ಥಳಾವಕಾಶದ ವ್ಯವಸ್ಥೆ
  7. ಪ್ರಯಾಣಿಕರಿಗೆ ತಲೆದಿಂಬಿನ ವ್ಯವಸ್ಥೆ
  8. ಬಸ್​ನಲ್ಲಿ ಅಡಿಯೋ ಸ್ವೀಕರ್​ಗಳ ಮೂಲಕ ಜನರಿಗೆ ಮಾಹಿತಿ ನೀಡುವ ವ್ಯವಸ್ಥೆ
  9. ಡಿಜಿಟಲ್ ಗಡಿಯಾರ, ಹಾಗೆ ಎಲ್​ಇಡಿ ಫ್ಲೋರ್
  10. ಈ ಬಸ್‌ ಸೇವೆಯು‌ ಇಂದಿನಿಂದಲೇ ಆರಂಭವಾಗಲಿದೆ
  11. ಕೆಎಸ್‌ಆರ್‌ಟಿಸಿಯಲ್ಲಿ (KSRTC) ನಾನ್‌ ಎಸಿ ಸ್ಲೀಪರ್‌ ಬಸ್‌ಗಳು ಆರಂಭವಾಗಿ ಸಾಕಷ್ಟು ವರ್ಷಗಳಾಗಿವೆ
  12. ನಾನ್ ಎಸಿ ಸ್ಲೀಪರ್ ಬಸ್‌ಗಳಿಗೆ ಯಾವುದೇ ಹೆಸರಿಟ್ಟು ಬ್ರ್ಯಾಂಡಿಂಗ್‌ ಮಾಡಿರಲಿಲ್ಲ
  13. ಚಾಲಕರಿಗೆ ಸಹಾಯವಾಗಲೂ ಬಸ್ ಹಿಂಭಾಗದಲ್ಲಿ ಹೈಟೆಕ್ ಕ್ಯಾಮರಾ (Camera) ಅಳವಡಿಕೆ
  14. ಸದ್ಯ ಪಲ್ಲಕ್ಕಿ (‘ಸಂತೋಷವು ಪ್ರಯಾಣಿಸುತ್ತಿದೆ’ ಎಂಬ ಉಪಶೀರ್ಷಿಕೆ) ಎಂಬ ಬ್ರ್ಯಾಂಡ್ ನೇಮ್‌ ಇಡಲಾಗಿದೆ.
  15. ಈ ಹೆಸರನ್ನು ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.
  16. 40 ಬಸ್‌ಗಳ ಪೈಕಿ 30 ಬಸ್‌ಗಳು ರಾಜ್ಯದೊಳಗೆ ಸಂಚರಿಸಲಿವೆ
  17. ಉಳಿದ 10 ಬಸ್‌ಗಳು ಬೆಂಗಳೂರಿನಿಂದ‌ ಹೊರರಾಜ್ಯಗಳಿಗೆ ಸಂಚರಿಸಲಿವೆ.

ಭವ್ಯಶ್ರೀ ಆರ್.ಜೆ

Exit mobile version