• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪಂಚಮಸಾಲಿ ಮೀಸಲಾತಿ: ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ.

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
Panchamasali Reservation News

Panchamasali Reservation News

0
SHARES
22
VIEWS
Share on FacebookShare on Twitter

Panchamasali Reservation: CM Siddaramaiah said that no Decision can be Taken Now.

Bengaluru: ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು. ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು. ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಿಳಿಸಿದ್ದಾರೆ.

Panchamasali Reservation CM Siddaramaiah
Panchamasali Reservation CM Siddaramaiah

ಬೆಂಗಳೂರಿನಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯದ ಮುಖಂಡರೊಂದಿಗಿನ ಸಭೆಯ ವಿವರಗಳನ್ನು ನೀಡಿರುವ ಅವರು, ಶಾಶ್ವತ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್ ಜನರಲ್ (Advocate General), ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಸಂವಿಧಾನದ ಆಶಯದಂತೆ ಕ್ರಮ. ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ, ಕಾನೂನು ಪ್ರಕಾರ ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು.

ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ (Panchmasali Community) ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು ಎಂದಿದ್ದಾರೆ.

Supreme Court Latest Update
Supreme Court Latest Update

ಹಿಂದಿನ ಸರ್ಕಾರ ಸಮುದಾಯದ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತು. 3ಎ ನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು. 3ಬಿಯಲ್ಲಿರುವ ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಂಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಂಮರು ಇದನ್ನು ಸುಪ್ರೀಂಕೋರ್ಟ್ನಲ್ಲಿ (Supreme Court) ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ.

ಆದರೆ ಪೂರ್ವನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಇಂದು ಸಭೆ ನಡೆಸಲಾಗಿದೆ. ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ-3 ಬಿ ಯಲ್ಲಿದೆ. ಈ ಪ್ರವರ್ಗದಡಿ ಲಿಂಗಾಯತ ಹಾಗೂ ಅದರ ಉಪಜಾತಿಗಳೇ ಮೀಸಲಾತಿ ಸೌಲಭ್ಯ ಪಡೆಯುತ್ತಿವೆ. ಹಾಗಾಗಿ 2ಎ ಪ್ರವರ್ಗದಡಿ ಪಂಚಮಸಾಲಿಗರನ್ನು ಸೇರಿಸಬೇಕೆಂದು ನಿಯೋಗ ಒತ್ತಾಯಿಸಿದೆ. ಸೂಕ್ತ ಮೀಸಲಾತಿ (Reservation) ಇಲ್ಲದ ಕಾರಣ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೃಷಿ ಕಾರ್ಮಿಕರು ಹೆಚ್ಚಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ನಿಯೋಗ ಮನವಿ ಮಾಡಿದೆ ಎಂದು ತಿಳಿಸಿದ್ದಾರೆ.

Panchamasali 2A Reservation In Karnataka Kannada Post

Tags: Panchamasali CommunityReservationSiddaramaiahsupreme court

Related News

ಕರ್ನಾಟಕದಲ್ಲಿ ರಸ್ತೆ ಅಪಘಾತಗಳ ಹೆಚ್ಚಳ: ಪ್ರತಿ ವರ್ಷ 11 ಸಾವಿರಕ್ಕೂ ಅಧಿಕ ಮಂದಿ ಬಲಿ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ರಸ್ತೆ ಅಪಘಾತಗಳ ಹೆಚ್ಚಳ: ಪ್ರತಿ ವರ್ಷ 11 ಸಾವಿರಕ್ಕೂ ಅಧಿಕ ಮಂದಿ ಬಲಿ

November 16, 2026
ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್: ಪ್ರತ್ಯೇಕ ನಿಗ್ರಹ ಪಡೆ ರಚನೆಗೆ ಡಿಕೆ ಶಿವಕುಮಾರ್ ಘೋಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್: ಪ್ರತ್ಯೇಕ ನಿಗ್ರಹ ಪಡೆ ರಚನೆಗೆ ಡಿಕೆ ಶಿವಕುಮಾರ್ ಘೋಷಣೆ

November 16, 2026
ಕುಮಾರಕೃಪಾ ಇನ್ನು ಮುಂದೆ ‘ಗಂಗಾ’ ನಿವಾಸ: ನೂತನ ಗೃಹ ಕಚೇರಿಗೆ ಇಂದು ಡಿಕೆ ಶಿವಕುಮಾರ್ ಗೃಹಪ್ರವೇಶ
ಪ್ರಮುಖ ಸುದ್ದಿ

ಕುಮಾರಕೃಪಾ ಇನ್ನು ಮುಂದೆ ‘ಗಂಗಾ’ ನಿವಾಸ: ನೂತನ ಗೃಹ ಕಚೇರಿಗೆ ಇಂದು ಡಿಕೆ ಶಿವಕುಮಾರ್ ಗೃಹಪ್ರವೇಶ

November 16, 2026
2027ರ ಯುಪಿ ಚುನಾವಣೆ: ಸೀಟು ಹಂಚಿಕೆ ಕಸರತ್ತು ಚುರುಕು, ಖರ್ಗೆ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಮಹತ್ವದ ಸಭೆ
ದೇಶ-ವಿದೇಶ

2027ರ ಯುಪಿ ಚುನಾವಣೆ: ಸೀಟು ಹಂಚಿಕೆ ಕಸರತ್ತು ಚುರುಕು, ಖರ್ಗೆ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಮಹತ್ವದ ಸಭೆ

November 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.