Panchamitra WhatsApp: ಇನ್ಮುಂದೆ ಮನೆಯಲ್ಲೇ ಕುಳಿತು ನಿಮ್ಮ ಸಮಸ್ಯೆಗೆ ದೂರು ನೀಡಿ, ಪಂಚಮಿತ್ರ ಮೂಲಕ ಪರಿಹಾರ ಕಂಡುಕೊಳ್ಳಿ .

Bengaluru: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)  ಪಂಚಮಿತ್ರ ಪೋರ್ಟಲ್ ​ಲೋಕಾರ್ಪಣೆ ಮಾಡಿದ್ದಾರೆ. ಗ್ರಾಮ ಪಂಚಾಯತಿಗಳಲ್ಲಿನ ಸೇವೆಯನ್ನ ಪಂಚಮಿತ್ರ ಪೋರ್ಟಲ್ ಮೂಲಕ ಪಡೆಯಬಹುದು. ಆನ್​ಲೈನ್​ನಲ್ಲಿ (Online) ಅರ್ಜಿ ಸಲ್ಲಿಸಿ ಸೇವೆಗಳನ್ನು ಪಡೆಯಬಹುದಾಗಿದೆ. ಕಟ್ಟಡ ನಿರ್ಮಾಣ ಲೈಸೆನ್ಸ್ (License), ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜಿನ ಸಂಪರ್ಕ ಕಡಿತ, ಕುಡಿಯುವ ನೀರಿನ ನಿರ್ವಹಣೆ, ಬೀದಿ ದೀಪದ ನಿರ್ವಹಣೆ, ಗ್ರಾಮ ನೈರ್ಮಲ್ಯದ ನಿರ್ವಹಣೆ, ವ್ಯಾಪಾರ ಪರವಾನಗಿ ಹೀಗೆ ಸಾಕಷ್ಟು ಸೇವೆಗಳನ್ನ ಪಡೆಯಬಹುದಾಗಿದೆ.

ಇದರಿಂದ ಗ್ರಾ.ಪಂ, ಸೇವೆ, ಸಭೆಗಳು ಜನರಿಗೆ ಗೊತ್ತಾಗಲಿವೆ. 17 ಸೇವೆಗಳು ಈ ಪೋರ್ಟಲ್‍ನಲ್ಲಿವೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ (Panchayat Raj) ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಬಹುದು.

ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್‍ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ದಾಖಲಿಸಬಹುದು. ದೇಶದಲ್ಲೇ ಪ್ರಪ್ರಥಮ ಬಾರಿಗೆ WhatsApp Chat ಅನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅಭಿವೃದ್ದಿ ಪಡಿಸಿ, ಅನುಷ್ಠಾನಗೊಳಿಸಲಾಗಿದೆ.

ಇನ್ನೂ ಮುಂದೆ ಗ್ರಾಮ ಪಂಚಾಯತಿಗಳ ಮಾಹಿತಿ ಮತ್ತು ವಿವರಗಳನ್ನು, ಸೇವೆಗಳಿಗೆ ಅರ್ಜಿ ಮತ್ತು ಕುಂದುಕೊರತೆಗಳನ್ನು WhatsApp ಮೂಲಕ ದಾಖಲಿಸಬಹುದಾಗಿದೆ. ಮೂಲಕ ಈ ಕೆಳಗಿನ ಗ್ರಾಮ ಪಂಚಾಯತಿಗಳ ಮಾಹಿತಿ ಮತ್ತು ವಿವರಗಳನ್ನು ಪಡೆಯಬಹುದಾಗಿದೆ. ಚುನಾಯಿತ ಪ್ರತಿನಿಧಿಗಳ ವಿವರಗಳು, ಸಿಬ್ಬಂದಿ ವಿವರಗಳು, ಪೂರ್ಣಗೊಂಡ ಗ್ರಾಮ ಪಂಚಾಯತ್ ಸಭೆಗಳ ನಡಾವಳಿಗಳು, ಗ್ರಾಮ ಪಂಚಾಯತ್‍ಗಳ ಮುಂಬರುವ ಸಭೆಗಳ ಮಾಹಿತಿ ಪಡೆಯಬಹುದಾಗಿದೆ.

ಪಂಚಮಿತ್ರ ಪೋರ್ಟಲ್ (Panchamitra Portal) ಮೂಲಕ ಈ ಸೇವೆಗಳನ್ನ ಪಡೆಯಬಹುದು 

*ಸ್ವಾಧೀನ ಪ್ರಮಾಣಪತ್ರ
*ರಸ್ತೆ, ಅಗೆವುದಾಕ್ಕಾಗಿ ಅನುಮತಿ

Exit mobile version