ಪರಶುರಾಂ ಥೀಂ ಪಾರ್ಕ್ ನಿರ್ಮಾಣದಲ್ಲಿ ಅವ್ಯವಹಾರ: ತನಿಖೆಗೆ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

Udupi: ಉಡುಪಿಯ ಕಾರ್ಕಳದ ಬೈಲೂರಿನ ಬೆಟ್ಟದಲ್ಲಿರುವ ಪರಶುರಾಮ್ ಥೀಮ್ ಪಾರ್ಕ್ (Parashuram Theme Park Controversy) ಧಾರ್ಮಿಕ ಸ್ಥಳವೋ ಅಥವಾ ಪ್ರವಾಸೋದ್ಯಮ ಆಕರ್ಷಣೀಯ ಸ್ಥಳವೋ

ಎಂಬ ಗೊಂದಲವಿದ್ದು, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಉದ್ಘಾಟಿಸಿದ ಪ್ರತಿಮೆ ದಿಢೀರ್ ಕಣ್ಮರೆಯಾಗಿದೆ. ಈ ವಿಷಯ ಸಿಎಂ ಹಾಗೂ ಡಿಸಿಎಂ (CM DCM)

ಗಮನಕ್ಕೆ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ ಎಂದು ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ (Manjunath Bhandari) ಮಾಹಿತಿ ನೀಡಿದ್ದಾರೆ.

ಪರಶುರಾಮ್ ಥೀಮ್ ಪಾರ್ಕ್ ಧಾರ್ಮಿಕ ಸ್ಥಳವೋ ಅಥವಾ ಪ್ರವಾಸೋದ್ಯಮ ಆಕರ್ಷಣೀಯ ಸ್ಥಳವೋ ಎಂಬ ಗೊಂದಲವಿದ್ದು, ಮಾಜಿ ಸಿಎಂ ಉದ್ಘಾಟಿಸಿದ ಪ್ರತಿಮೆ ದಿಢೀರ್ ಕಣ್ಮರೆಯಾಗಿದೆ.

ಈ ವಿಷಯ ಸಿಎಂ ಹಾಗೂ ಡಿಸಿಎಂ ಗಮನಕ್ಕೆ ಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ವರದಿ (Parashuram Theme Park Controversy) ಸಲ್ಲಿಸುವಂತೆ ತಿಳಿಸಿದ್ದಾರೆ.

ಸೊಂಟದ ಮೇಲಿರುವ ಪ್ರತಿಮೆಯ ಭಾಗವು ಕಾಣೆಯಾಗಿದ್ದು, ಅಧಿಕಾರಿಗಳನ್ನು ಕೇಳಿದಾಗ ವಿನ್ಯಾಸ ಬದಲಾವಣೆಗೆ ಕಳುಹಿಸಲಾಗಿದೆ ಎಂದರು. ಆದರೂ ಈ ಸ್ಥಳವು ಹಸುಗಳ ಮೇಯುವ ಭೂಮಿಯಾಗಿದೆ.

ಅಲ್ಲಿ ಪಾರ್ಕ್ ನಿರ್ಮಿಸದಂತೆ ಸರ್ಕಾರ ಹಿಂದೆಯೇ ಆದೇಶ ನೀಡಿತ್ತು ಎಂದು ಭಂಡಾರಿ ಅವರು ತಿಳಿಸಿದ್ದಾರೆ.

ಹಿಂದಿನ ಸಿಎಂ ಪ್ರತಿಮೆ ಉದ್ಘಾಟಿಸಿದ ಬಳಿಕ ಜಿಲ್ಲಾಧಿಕಾರಿ ಅನುಮತಿ ಪಡೆಯದೆ ಸ್ಥಳಾಂತರ ಮಾಡಲಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರವಾಸೋದ್ಯಮ ಇಲಾಖೆಯ

ಮುಖ್ಯ ಕಾರ್ಯದರ್ಶಿಗೆ ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಪ್ರತಿಮೆ ಉದ್ಘಾಟನೆ ವೇಳೆ ಅದರ ಸೊಂಟದ ಮೇಲ್ಭಾಗದಲ್ಲಿ ಏನಿತ್ತು ಎಂಬ ಸತ್ಯ ಹೊರಬರಬೇಕು. ಧಾರ್ಮಿಕ ಕೇಂದ್ರವೋ

ಅಥವಾ ಪ್ರವಾಸಿ ತಾಣವೋ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಅವರು ಹೇಳಿದ್ದಾರೆ.

ಪರಶುರಾಮ ಮೂರ್ತಿ ನಕಲಿ ಎಂದು ವಿಜಯಟೈಮ್ಸ್ ವರದಿ (Vijaya Times) ಇನ್ನು ಈ ಪರಶುರಾಮ ಮೂರ್ತಿ ಅಸಲಿಯಲ್ಲ. ಅಧಿಕಾರಿಗಳು ಹಾಗೂ ಶಾಸಕರು ಸೇರಿ ಚುನಾವಣಾ ಗಿಮಿಕ್ ಮಾಡಲು

ನಕಲಿ ಮೂರ್ತಿ ನೆಟ್ಟಿದ್ದಾರೆ ಅಂತ ವಿಜಯಟೈಮ್ಸ್‌ನ ಕವರ್‌ಸ್ಟೋರಿ ತಂಡ (Cover Story) ದಾಖಲೆ ಸಮೇತ ವರದಿ ಪ್ರಸಾರ ಮಾಡಿತ್ತು. ಈ ವರದಿಯು ಸಾರ್ವಜನಿಕರಲ್ಲಿ ಭಾರೀ ಸಂಚಲನವುಂಟು ಮಾಡಿತ್ತು.

ಇನ್ನು ಮೂರ್ತಿಯ ಪರಿಶುದ್ಧತೆಯ ಪರೀಕ್ಷೆ ನಡೆಯಬೇಕು ಎಂದು ಸಾರ್ವಜನಿಕರು

ಒತ್ತಾಯ ಮಾಡಿ ಉಪವಾಸ ಸತ್ಯಾಗ್ರಹವನ್ನೂ ಪ್ರಾರಂಭಿಸಿದ್ದರು. ಈ ಬಗ್ಗೆ ಜಿಲ್ಲಾಡಳಿತ ತೇಪೆ ಹಾಕುವ ಉತ್ತರ ನೀಡುತ್ತಾ ಬಂದಿತ್ತು. ಇದೀಗ ತನಿಖೆಗೆ ಆದೇಶ ನೀಡಲಾಗಿದ್ದು,

ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಪರಶುರಾಮನಿಗೆ ಅವಮಾನ ಮಾಡಿದೆ. ತರಾತುರಿಯಲ್ಲಿ ಪ್ರತಿಮೆಯನ್ನು ಏಕೆ ನಿರ್ಮಿಸಲಾಗಿದೆ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಇನ್ನು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ವಿನಯ್‌ಕುಮಾರ್ (Vinay Kumar) ಅವರು ಮಾಜಿ ಮುಖ್ಯಮಂತ್ರಿಗಳು ಉದ್ಯಾನವನ ಉದ್ಘಾಟನೆಗೂ ಮುನ್ನ ಸೂಕ್ತ ಮಾಹಿತಿ ಪಡೆಯಬೇಕಿತ್ತು

ಎಂದರು.

ಇದನ್ನು ಓದಿ: ಎಲೆಕ್ಟ್ರಾನಿಕ್‌ ಸಿಟಿ ಮತ್ತು ಮಾದವಾರ ನಡುವೆ ಹೊಸ ಮಾರ್ಗವಾಗಿ ಬಿಎಂಟಿಸಿ ಬಸ್‌ ಸೇವೆ ಆರಂಭ

Exit mobile version