• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮಾಹಿತಿ

ಕಾರ್ಕಳದ ಪರಶುರಾಮ ಮೂರ್ತಿಯ ಅಸಲಿ ರಹಸ್ಯ ಕೊನೆಗೂ ಬಹಿರಂಗ : ಪೊಲೀಸರಿಂದ ಚಾರ್ಜ್​ಶೀಟ್ ಸಲ್ಲಿಕೆ

Shwetha Mohan by Shwetha Mohan
in ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಕಾರ್ಕಳದ ಪರಶುರಾಮ ಮೂರ್ತಿಯ ಅಸಲಿ ರಹಸ್ಯ ಕೊನೆಗೂ ಬಹಿರಂಗ : ಪೊಲೀಸರಿಂದ ಚಾರ್ಜ್​ಶೀಟ್ ಸಲ್ಲಿಕೆ
0
SHARES
42
VIEWS
Share on FacebookShare on Twitter
  • ಕಾರ್ಕಳ ಪರಶುರಾಮ ಮೂರ್ತಿಯ ಅಸಲಿ ರಹಸ್ಯ ರಿವೀಲ್.. (Parashurama idol is made of brass)
  • ಕಂಚಿನ ಮೂರ್ತಿಯಲ್ಲ.. ಹಿತ್ತಾಳೆ ಎಂದು ವರದಿಯಲ್ಲಿ ಉಲ್ಲೇಖ
  • ಪೊಲೀಸರು ಕೋರ್ಟ್​ಗೆ ಸಲ್ಲಿಸಿದ ಚಾರ್ಜ್​ಶೀಟ್​ನಲ್ಲಿ ಉಲ್ಲೇಖ

Karkala: ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ಪ್ರಮುಖ ವಿಚಾರವಾಗಿದ್ದ ಕಾರ್ಕಳ (Karkala) ಬೈಲೂರಿನ ಪರಶುರಾಮ ಮೂರ್ತಿ (Parashurama Statue) ಕಂಚಿನದ್ದಲ್ಲ,

ಹಿತ್ತಾಳೆಯದ್ದು ಎಂದು ಪೊಲೀಸ್ ಮತ್ತು ತಜ್ಞರ ತನಿಖೆಯಲ್ಲಿ ಧೃಡಪಟ್ಟಿದೆ.

ಈ ಮೂಲಕ ಉಡುಪಿ (Udupi) ಜಿಲ್ಲೆಯ ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಮೂರ್ತಿ ವಿವಾದಕ್ಕೆ ಸಂಬಂಧಿಸಿದಂತೆ ಹಳೆ ಆರೋಪಕ್ಕೆ ಬ್ರೇಕ್ ಬಿದ್ದಿದೆ.

ಇದೀಗ ಹೊಸ ಚರ್ಚೆ ಶುರುವಾಗಿದೆ.ಕಾರ್ಕಳ ನಗರಠಾಣಾ ಪೊಲೀಸರು ತನಿಖೆ ನಡೆಸಿ, ತಜ್ಞರು ನೀಡಿದ ವರದಿಯಾಧಾರದಲ್ಲಿ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ.

ಪರಶುರಾಮ ಮೂರ್ತಿಯನ್ನು ಹಿತ್ತಾಳೆಯಿಂದ ಮಾಡಲಾಗಿದೆ. ಕಂಚಿನ ಮೂರ್ತಿಯಲ್ಲ ಎಂದು ತನಿಖಾ ವರದಿಯನ್ನು ಪೊಲೀಸರು ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ.

2023ರ ಜನವರಿಯಲ್ಲಿ ಆಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಪರಶುರಾಮ ಥೀಂ ಪಾರ್ಕನ್ನು ಉದ್ಘಾಟನೆ ಮಾಡಿದ್ದರು.

Parashurama idol
Parasurama Theme Park Murthy, Karkala
ಶಾಸಕ ಮಾಜಿ ಸಚಿವ ಸುನಿಲ್ ಕುಮಾರ್(Sunil Kumar) ಚುನಾವಣೆಯ ಉದ್ದೇಶದಿಂದ ತರಾತುರಿಯಲ್ಲಿ ಮೂರ್ತಿಯನ್ನು ಉದ್ಘಾಟನೆ ಮಾಡಿಸಿದರು ಎಂಬುದು ಆರೋಪ ಕೂಡ ಕೇಳಿ ಬಂದಿತ್ತು.

ರಟ್ಟು, ಫೈಬರ್, ಪ್ಲಾಸ್ಟಿಕ್ ಎಂದು ಕಾಂಗ್ರೆಸ್ ವಾದ ಮಾಡುತ್ತಿತ್ತು.

ಮೂರ್ತಿ ಕಂಚಿನದ್ದೇ ಎಂದು ಬಿಜೆಪಿ ವಾದಿಸುತ್ತಿತ್ತು. ತಜ್ಞರ ಪರಿಶೀಲನೆ ಮತ್ತು ಪೊಲೀಸ್ ತನಿಖೆಯಿಂದ ಈಗ ಹಿತ್ತಾಳೆ ಎಂದು ಸಾಬೀತಾಗಿದೆ.

ಶಿಲ್ಪಿ ಕೃಷ್ಣ ನಾಯಕ್ ಅವರ ಬೆಂಗಳೂರಿನ ಕ್ರಿಶ್ ಆರ್ಟ್ ವರ್ಲ್ಡ್‌ನಲ್ಲಿ(Krish Art World) ನಿರ್ಮಿಸಿದ್ದ ಮೂರ್ತಿಯಾಗಿದ್ದು,

ಉಡುಪಿ ನಿರ್ಮಿತಿ ಕೇಂದ್ರ ಥೀಂ ಪಾರ್ಕ್(Central Theme Park) ಯೋಜನೆ ಮತ್ತು ಕಾಮಗಾರಿ ನಡೆಸಿತ್ತು. 

2024ರ ಜೂನ್ 21ರಂದು ಕಾರ್ಕಳದ ಕೃಷ್ಣ ಶೆಟ್ಟಿ ನೀಡಿದ ದೂರಿನನ್ವಯ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆದಿದೆ.

ವಿವಾದ ಚರ್ಚೆಯ ನಡುವೆ ಅರ್ಧ ಮೂರ್ತಿ ತೆರವು ಮಾಡಿ, ಅದನ್ನು ಶೆಡ್ ನಲ್ಲಿಟ್ಟು ಬೆಂಗಳೂರಿಗೆ ರವಾನೆ ಮಾಡಿರುವುದು ತನಿಖೆಯಲ್ಲಿ ಸಾಬೀತಾಗಿದೆ.

ಶಿಲ್ಪಿ ಕೃಷ್ಣನಾಯ್ಕ್, ನಿರ್ಮಿತಿ ಕೇಂದ್ರದ ಅರುಣ್, ಸಚಿನ್ ಒಳಸಂಚು, ನಂಬಿಕೆ ದ್ರೋಹ, ವಂಚನೆ- ಸಾಕ್ಷ್ಯ ನಾಶ ಮಾಡಿದ್ದು ದೃಢಪಟ್ಟಿದೆ.

ಒಪ್ಪಂದದ ಪ್ರಕಾರ ಪ್ರತಿಮೆಯನ್ನು ಕಂಚಿನಿಂದ ನಿರ್ಮಿಸಬೇಕೆಂದಿದೆ.

ಆದರೆ ಪ್ರತಿಮೆ ಹಿತ್ತಾಳೆಯದ್ದಾಗಿದ್ದು ಕಾರ್ಕಳದಲ್ಲಿ ನಿರ್ಮಿಸಿರುವ ಪರಶುರಾಮನ ಪ್ರತಿಮೆ ಪೈಬರ್ ನದ್ದು ಎಂಬ ವಾದ ಮುರಿದು ಬಿದ್ದಂತಾಗಿದೆ.

ಆರೋಪಿಗಳಾದ ಶಿಲ್ಪಿ ಕೃಷ್ಣ ನಾಯ್ಕ ಉಡುಪಿ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ ಡೈರೆಕ್ಟರ್ ಅರುಣ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ ಕುಮಾರ್

ಇವರುಗಳು ಅಪರಾಧಿಕ ಒಳಸಂಚು ಮತ್ತು ನಂಬಿಕೆ ದ್ರೋಹ ಮತ್ತು ವಂಚನೆ ಎಸಗಿ, ಸಾಕ್ಷಿ ನಾಶ ಮಾಡಿರುತ್ತಾರೆ.

ಅವರ ವಿರುದ್ದ ಕಲಂ. 420, 409, 201, 120 (ಬಿ) ಜೊತೆಗೆ 34 ಐಪಿಸಿ ಯಂತೆ 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ತಯಾರಿಸಿ ಮಾನ್ಯ ಕಾರ್ಕಳದ ನ್ಯಾಯಾಲಯಕ್ಕೆ ನೀಡಲಾಗಿದೆ.

ಒಟ್ಟಾರೆ, ರಾಜಕೀಯದ ವಿವಾದಗಳ ಹೋಮಕ್ಕೆ ಬಿಸಿ ತುಪ್ಪವಾಗಿರೋ ಪರಶುರಾಮನ ಥೀಂ ಪಾರ್ಕ್ ವಿಚಾರ ಸದ್ಯ ಕೋರ್ಟ್​ ಮೆಟ್ಟಿಲೇರಿದೆ.

ಇದನ್ನು ಓದಿ :  ಇಂಜಿನಿಯರ್​ ಕೋರ್ಸ್​ಗಳ ಬೇಡಿಕೆ ಕುಸಿತ: ರಾಜ್ಯ ಸರ್ಕಾರದಿಂದ ಶೇ.50 ರಷ್ಟು ವಿನಾಯತಿ

ನ್ಯಾಯಾಲಯಕ್ಕೆ ವರದಿ ಸಲ್ಲಿಕೆಯಾಗಿದ್ದು ಸತ್ಯಾಸತ್ಯತೆ ಹೊರಬರಬೇಕಿದೆ. ನಮ್ಮ ತೆರಿಗೆ ದುಡ್ಡಿನಲ್ಲಿ(tax money) ನಕಲಿ ಆಟವಾಡಿ ದುಡ್ಡು ಹೊಡೆದು ತಿಂದವರ ಸತ್ಯ ಹೊರಬರಬೇಕಿದೆ. (Parashurama idol is made of brass)

Tags: Basavaraj BommaikarkalaKrish Art WorldParashurama StatueSunil Kumartax moneyUdupivijaya times

Related News

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ
ದೇಶ-ವಿದೇಶ

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

August 17, 2026
ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ
ಪ್ರಮುಖ ಸುದ್ದಿ

ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ

August 17, 2026
ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ
ಪ್ರಮುಖ ಸುದ್ದಿ

ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ

August 17, 2026
ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ
ಪ್ರಮುಖ ಸುದ್ದಿ

ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ

August 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.