ಬೆಂಗಳೂರು, ಜೂ. 03: ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಗುರುವಾರ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.
ವಿಧಾನಸೌಧದ ಎದುರಿಗಿರುವ ದೇವರಾಜು ಅರಸು ಪ್ರತಿಮೆ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಯಾವುದೇ ಪರೀಕ್ಷೆ ನಡೆಸದೆ ಐಸಿಎಸ್ಇ ಹಾಗೂ ಸಿಬಿಎಸ್ಇ ಪರೀಕ್ಷೆಗಳನ್ನು ಪಾಸ್ ಮಾಡಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಹಾಗೂ ಶಿಕ್ಷಣ ಮಂತ್ರಿಗಳು ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಭಿಗೆ ಮಣಿಯದೆ ಕೂಡಲೇ ಪರೀಕ್ಷೆ ರದ್ದತಿ ಆದೇಶ ಹೊರಡಿಸಬೇಕು ಹಾಗೂ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಆಗ್ರಹಿಸಿದರು.